ನಟ ಶಿವರಾಜ್ ಕುಮಾರ್ 
ರಾಜ್ಯ

ರಾಹುಲ್ ಗಾಂಧಿ ಅಭಿಮಾನಿಯಾಗಿ ಇಂದು ಇಲ್ಲಿಗೆ ಬಂದಿದ್ದೇನೆ, ಭಾರತ್ ಜೋಡೋ ಯಾತ್ರೆ ನನಗೆ ಸ್ಫೂರ್ತಿ ನೀಡಿತು: ನಟ ಶಿವರಾಜ್ ಕುಮಾರ್

ಇಂದು ಮಂಗಳವಾರ ಶಿವಮೊಗ್ಗ ಜಿಲ್ಲೆಯ ಸೊರಬ ಕ್ಷೇತ್ರಕ್ಕೆ ಕೈ ಅಭ್ಯರ್ಥಿ ಮಧು ಬಂಗಾರಪ್ಪ ಪರ ಪ್ರಚಾರ ನಡೆಸಲು ರಾಹುಲ್ ಗಾಂಧಿ ಆಗಮಿಸಿದ್ದರು. ಈ ವೇಳೆ ಇತ್ತೀಚೆಗಷ್ಟೆ ಕಾಂಗ್ರೆಸ್ ಸೇರಿದ್ದ ಗೀತಾ ಶಿವರಾಜ್ ಕುಮಾರ್ ಮತ್ತು ಕನ್ನಡದ ಜನಪ್ರಿಯ ನಟ ಶಿವರಾಜ್ ಕುಮಾರ್ ಕಾಂಗ್ರೆಸ್ ಪರ ಪ್ರಚಾರಕ್ಕೆ ಆಗಮಿಸಿದ್ದರು.

ಶಿವಮೊಗ್ಗ: ಇಂದು ಮಂಗಳವಾರ ಶಿವಮೊಗ್ಗ ಜಿಲ್ಲೆಯ ಸೊರಬ ಕ್ಷೇತ್ರಕ್ಕೆ ಕೈ ಅಭ್ಯರ್ಥಿ ಮಧು ಬಂಗಾರಪ್ಪ ಪರ ಪ್ರಚಾರ ನಡೆಸಲು ರಾಹುಲ್ ಗಾಂಧಿ ಆಗಮಿಸಿದ್ದರು. ಈ ವೇಳೆ ಇತ್ತೀಚೆಗಷ್ಟೆ ಕಾಂಗ್ರೆಸ್ ಸೇರಿದ್ದ ಗೀತಾ ಶಿವರಾಜ್ ಕುಮಾರ್ ಮತ್ತು ಕನ್ನಡದ ಜನಪ್ರಿಯ ನಟ ಶಿವರಾಜ್ ಕುಮಾರ್ ಕಾಂಗ್ರೆಸ್ ಪರ ಪ್ರಚಾರಕ್ಕೆ ಆಗಮಿಸಿದ್ದರು.

ಈ ವೇಳೆ ಮಧು ಬಂಗಾರಪ್ಪ ಅವರು ರಾಹುಲ್ ಗಾಂಧಿಗೆ ಶಿವರಾಜ್ ಕುಮಾರ್ ರನ್ನು ಪರಿಚಯಿಸಿದಾಗ ಅವರನ್ನು ಆತ್ಮೀಯವಾಗಿ ತಬ್ಬಿಕೊಂಡರು. ನಂತರ ರಾಹುಲ್ ಶಿವರಾಜ್ ಕುಮಾರ್ ಅವರೊಂದಿಗೆ ಸ್ವಲ್ಪ ಹೊತ್ತು ಮಾತಾಡಿ ಭಾಷಣ ಮಾಡಲು ಹೋದರು.

ಈ ಸಂದರ್ಭದಲ್ಲಿ ಮಾತನಾಡಿದ ಶಿವರಾಜ್ ಕುಮಾರ್, ರಾಹುಲ್ ಗಾಂಧಿ ಅಭಿಮಾನಿಯಾಗಿ ನಾನು ಇಂದು ಇಲ್ಲಿಗೆ ಬಂದಿದ್ದೇನೆ. ಇತ್ತೀಚೆಗೆ ಅವರು ಕೈಗೊಂಡಿದ್ದ ಭಾರತ್ ಜೋಡೋ ಯಾತ್ರೆ ನನ್ನನ್ನು ಬಹಳ ಹಿಡಿಸಿತ್ತು. ನಾನು ಕೂಡ ವರ್ಕೌಟ್, ಫಿಟ್ನೆಸ್ ಗೆ ಪ್ರಾಮುಖ್ಯತೆ ನೀಡುತ್ತೇನೆ. ಭಾರತ್ ಜೋಡೋ ಯಾತ್ರೆಯಲ್ಲಿ ಸಾವಿರಾರು ಮೈಲುಗಳನ್ನು ರಾಹುಲ್ ಗಾಂಧಿ ನಡೆದು ಕ್ರಮಿಸಿದ್ದಾರೆ. ಅವರ ಯಾತ್ರೆ ನನಗೆ ಬಹಳ ಪ್ರೇರೇಪಿಸಿತು ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ: 6 ಅಂತಸ್ತಿನ ಕಟ್ಟಡ ಕುಸಿತ; ಓರ್ವ ಸಾವು, ಹಲವರು ಸಿಲುಕಿರುವ ಶಂಕೆ

ನೇಪಾಳದಲ್ಲಿ ಮತ್ತೆ ಪ್ರವಾಹ ಆತಂಕ; ಬುಧಿಗಂಡಕಿ ನದಿ ತೀರದಲ್ಲಿ ಹೈ ಅಲರ್ಟ್, ಆಗಿದ್ದೇನು?

ಉಡುಪಿ: ವಿಟ್ಲಪಿಂಡಿ ಉತ್ಸವದ ವೇಳೆ ಸ್ವಾಮೀಜಿಗಳ ಕೈಯಿಂದ ಜಾರಿದ ಶ್ರೀಕೃಷ್ಣನ ಉತ್ಸವ ಮೂರ್ತಿ, ಭಕ್ತರಲ್ಲಿ ಹೆಚ್ಚಿದ ಆತಂಕ!

ಮಧ್ಯಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ 12 ಮಂದಿ ಸಾವು, ಹಲವರ ಸ್ಥಿತಿ ಗಂಭೀರ! ಕಠಿಣ ಕ್ರಮಕ್ಕೆ ಸಿಎಂ ಆದೇಶ

Maruti Suzuki Baleno ಹೊಸ ಆವೃತ್ತಿ ಬಿಡುಗಡೆ: ಬೆಲೆ, ಮೈಲೇಜ್, ವೈಶಿಷ್ಟ್ಯ: ಕಾರು ಖರೀದಿಸುವ ಮುನ್ನ ನೀವು ತಿಳಿಯಬೇಕಾದ ಅಂಶಗಳಿವು...