ಮಂಗಳವಾರ ಉಡುಪಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಬಜರಂಗದಳ ಕಾರ್ಯಕರ್ತರು ಕರ್ನಾಟಕ ಕಾಂಗ್ರೆಸ್ ಪ್ರಣಾಳಿಕೆಯ ಪ್ರತಿಗಳನ್ನು ಸುಟ್ಟುಹಾಕಿದರು. 
ರಾಜ್ಯ

ನಾನೊಬ್ಬ ಬಜರಂಗಿ, ನನ್ನನ್ನೂ ಬ್ಯಾನ್ ಮಾಡಿ: ಕಾಂಗ್ರೆಸ್ ವಿರುದ್ಧ ಸಿಡಿದೆದ್ದ ಬಿಜೆಪಿ ನಾಯಕರು

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಈ ನಡುವಲ್ಲೇ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ರಾಜ್ಯ ಕಾಂಗ್ರೆಸ್, ಅಧಿಕಾರಕ್ಕೆ ಬಂದರೆ ಬಜರಂಗದಳವನ್ನು ನಿಷೇಧಿಸುವುದಾಗಿ ಹೇಳಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿದ್ದಾರೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಈ ನಡುವಲ್ಲೇ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ರಾಜ್ಯ ಕಾಂಗ್ರೆಸ್, ಅಧಿಕಾರಕ್ಕೆ ಬಂದರೆ ಬಜರಂಗದಳವನ್ನು ನಿಷೇಧಿಸುವುದಾಗಿ ಹೇಳಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿದ್ದಾರೆ.
 
ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿರುವ ಬಿಜೆಪಿ ನಾಯಕರು ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಗಳ ಪ್ರೊಫೈಲ್ ಫೋಟೋ, ವಾಟ್ಸಪ್, ಫೇಸ್‌ಬುಕ್ ಸ್ಟೇಟಸ್‌ಗಳಲ್ಲಿ ನಾನೊಬ್ಬ ಭಜರಂಗಿ ಎಂದು ಘೋಷಣೆ ಮಾಡಿಕೊಂಡಿದ್ದು, ನನ್ನನ್ನೂ ನಿಷೇಧಿಸಿ ಎಂದು ಸವಾಲು ಹಾಕಿದ್ದಾರೆ.

ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಬಜರ ದಳವು ಆರ್‌ಎಸ್‌ಎಸ್‌ನ ಭಾಗವಾಗಿದ್ದು, ಯಾವುದೇ ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗುವುದಿಲ್ಲ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿಯೂ ಪಿಎಫ್‌ಐ ನಿಷೇಧಿಸುವುದಾಗಿ ಹೇಳಲಾಗಿದೆ, ಆದರೆ ಅದನ್ನು ಈಗಾಗಲೇ  ನಾವು ನಿಷೇಧಿಸಿದ್ದೇವೆ. “ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ, ಅದು ಪಿಎಫ್‌ಐ ವಿರುದ್ಧದ ಪ್ರಕರಣಗಳನ್ನು ಹಿಂಪಡೆದಿತ್ತು, ಆದರೆ ಬಜರಂಗದಳವು ರಾಷ್ಟ್ರಕ್ಕಾಗಿ ಕೆಲಸ ಮಾಡುತ್ತಿದ್ದು, ಬಜರಂಗದಳವನ್ನು ನಿಷೇಧಿಸಲು ಕಾಂಗ್ರೆಸ್ ಪ್ರಯತ್ನಿಸಿ ನೋಡಲಿ, ತಕ್ಕ ಉತ್ತರ ನೀಡಲಿದ್ದೇವೆಂದು ಹೇಳಿದ್ದಾರೆ.

ಈ ಹಿಂದೆ ಟಿಪ್ಪು ಜಯಂತಿ ಆಚರಿಸಿ, ಟಿಪ್ಪು ವಿಶ್ವವಿದ್ಯಾಲಯಕ್ಕೆ ಹಣ ಮಂಜೂರು ಮಾಡಿದಂತೆ, ಗೋಹತ್ಯೆ ತಡೆ ಕಾನೂನು ಮತ್ತು ಮತಾಂತರ ತಡೆ ಕಾನೂನನ್ನು ವಿರೋಧಿಸಿದಂತೆ ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂದು ತಿಳಿಸಿದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಕೋಮುವಾದಿ ಕಾಂಗ್ರೆಸ್ ಹಿಂದೂಗಳ ವಿರುದ್ಧ ಯುದ್ಧ ಸಾರಿದೆ ಎಂದು ಟ್ವೀಟ್ ಮಾಡಿದ್ದಾರೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮಾಡಿ, “ಭಜರಂಗದಳವನ್ನು ನಿಷೇಧಿಸುವ ಮೂಲಕ ಕಾಂಗ್ರೆಸ್ ಹಿಂದೂ ವಿರೋಧಿ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಮಾತೃಭಾಷಾ ಶಿಕ್ಷಣವನ್ನು ಪರಿಚಯಿಸಿದ ಹೊಸ NEP 2020 ಅನ್ನು ರದ್ದುಗೊಳಿಸಲು ಬಯಸುವ ಮೂಲಕ, ಅವರು ಕನ್ನಡ ವಿರೋಧಿಗಳು ಎಂದು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆಂದು ಹೇಳಿದ್ದಾರೆ.

“ಕರ್ನಾಟಕದಲ್ಲಿ ಕಾಂಗ್ರೆಸ್ ಯಾವಾಗಲೂ ಪಿಎಫ್‌ಐ ಮತ್ತು ಎಸ್‌ಡಿಪಿಐನ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ, ಅವರ ವಿರುದ್ಧದ ಪ್ರಕರಣಗಳನ್ನು ಕೂಡ ಕೈಬಿಟ್ಟಿದೆ. ಈಗ, ಭಜರಂಗದಳವನ್ನು ನಿಷೇಧಿಸುವ ಅವರ ಪ್ರಣಾಳಿಕೆ ಘೋಷಣೆಯೊಂದಿಗೆ, ಅವರು PFI ಯಂತಹ ಭಾರತ ವಿರೋಧಿ ಭಯೋತ್ಪಾದಕ ಕೈಜೋಡಿಸಿದ್ದಾರೆಂದು ತಿಳಿಸಿದ್ದಾರೆ.

ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಬಜರ ದಳವು ಆರ್‌ಎಸ್‌ಎಸ್‌ನ ಭಾಗವಾಗಿದ್ದು, ಯಾವುದೇ ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗುವುದಿಲ್ಲ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿಯೂ ಪಿಎಫ್‌ಐ ನಿಷೇಧಿಸುವುದಾಗಿ ಹೇಳಲಾಗಿದೆ, ಆದರೆ ಅದನ್ನು ಈಗಾಗಲೇ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದರು. “ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ, ಅದು ಪಿಎಫ್‌ಐ ವಿರುದ್ಧದ ಪ್ರಕರಣಗಳನ್ನು ಹಿಂಪಡೆದಿತ್ತು, ಆದರೆ ಬಜರಂಗದಳವು ರಾಷ್ಟ್ರಕ್ಕಾಗಿ ಕೆಲಸ ಮಾಡುತ್ತಿತ್ತು. ಬಜರಂಗದಳವನ್ನು ನಿಷೇಧಿಸಲು ಕಾಂಗ್ರೆಸ್ ಪ್ರಯತ್ನಿಸಲಿ, ಬಿಜೆಪಿ ಅವರಿಗೆ ತಕ್ಕ ಉತ್ತರ ನೀಡಲಿದೆ ಎಂದು ಅವರು ಹೇಳಿದರು.

ಈ ಹಿಂದೆ ಟಿಪ್ಪು ಜಯಂತಿ ಆಚರಿಸಿ, ಟಿಪ್ಪು ವಿಶ್ವವಿದ್ಯಾಲಯಕ್ಕೆ ಹಣ ಮಂಜೂರು ಮಾಡಿದಂತೆ, ಗೋಹತ್ಯೆ ತಡೆ ಕಾನೂನು ಮತ್ತು ಮತಾಂತರ ತಡೆ ಕಾನೂನನ್ನು ವಿರೋಧಿಸಿದಂತೆ ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂದು ಹೇಳಿದರು.

ಕೋಮುವಾದಿ ಕಾಂಗ್ರೆಸ್ ಹಿಂದೂಗಳ ವಿರುದ್ಧ ಯುದ್ಧ ಸಾರಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಟ್ವೀಟ್ ಮಾಡಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮಾಡಿ, “ಭಜರಂಗದಳವನ್ನು ನಿಷೇಧಿಸುವ ಮೂಲಕ ಕಾಂಗ್ರೆಸ್ ಹಿಂದೂ ವಿರೋಧಿ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಮಾತೃಭಾಷಾ ಶಿಕ್ಷಣವನ್ನು ಪರಿಚಯಿಸಿದ ಹೊಸ NEP 2020 ಅನ್ನು ರದ್ದುಗೊಳಿಸಲು ಬಯಸುವ ಮೂಲಕ, ಅವರು ಕನ್ನಡ ವಿರೋಧಿಗಳು ಎಂದು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ನಂತರ ಮಾತನಾಡಿದ ಅವರು, “ಕರ್ನಾಟಕದಲ್ಲಿ ಕಾಂಗ್ರೆಸ್ ಯಾವಾಗಲೂ ಪಿಎಫ್‌ಐ ಮತ್ತು ಎಸ್‌ಡಿಪಿಐನ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ, ಅವರ ವಿರುದ್ಧದ ಪ್ರಕರಣಗಳನ್ನು ಸಹ ಕೈಬಿಟ್ಟಿದೆ. ಈಗ, ಭಜರಂಗದಳವನ್ನು ನಿಷೇಧಿಸುವ ಅವರ ಪ್ರಣಾಳಿಕೆ ಘೋಷಣೆಯೊಂದಿಗೆ, ಅವರು PFI ಯಂತಹ ಭಾರತ ವಿರೋಧಿ ಭಯೋತ್ಪಾದಕ ಶಕ್ತಿಗಳೊಂದಿಗೆ ಬಹಿರಂಗವಾಗಿ ಪಕ್ಷಪಾತ ಮಾಡುತ್ತಿದ್ದಾರೆ. ಅವರು ಹೇಳಿದರು.

ಬೆಂಗಳೂರು ಸೆಂಟ್ರಲ್ ಸಂಸದ ಪಿಸಿ ಮೋಹನ್ ಮಾತನಾಡಿ, ಭಜರಂಗದಳವು ಭಾರತದಾದ್ಯಂತ 5 ಲಕ್ಷಕ್ಕೂ ಹೆಚ್ಚು ಸಕ್ರಿಯ ಕಾರ್ಯಕರ್ತರೊಂದಿಗೆ ಧರ್ಮ ಸೇವೆಯನ್ನು ನಡೆಸುತ್ತಿದೆ. ಆದರೆ ಕಾಂಗ್ರೆಸ್ ಬಜರಂಗದಳವನ್ನು ನಿಷೇಧಿತ ಉಗ್ರಗಾಮಿ ಸಂಘಟನೆಯಾದ ಪಿಎಫ್‌ಐ ಜೊತೆಗೆ ಸಮೀಕರಿಸುತ್ತಿದೆ. ಈ ಪ್ರಚೋದನೆಗೆ ಕರ್ನಾಟಕ ಪ್ರಬಲವಾಗಿ ಪ್ರತೀಕಾರ ತೀರಿಸಿಕೊಳ್ಳುತ್ತದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹೀನಾಯ ಸೋಲು ಕಾಣುವಂತೆ ಮಾಡಲಿದೆ ಎಂದಿದ್ದಾರೆ.

ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿ, ಮುಸ್ಲಿಮರ ಓಲೈಸಲು ಪಿಎಫ್‌ಐನಂತಹ ದೇಶವಿರೋಧಿ ಸಂಘಟನೆಗಳನ್ನು ಭಜರಂಗದೊಂದಿಗೆ ಕಾಂಗ್ರೆಸ್ ಹೋಲಿಕೆ ಮಾಡುತ್ತಿದೆ .ಪಿಎಫ್‌ಐ ದೇಶ ವಿರೋಧಿ ಚಟುವಟಿಕೆಗಳಿಂದಾಗಿ ಅದನ್ನು ನಿಷೇಧಿಸಲಾಗಿದೆ ಎಂದು ಹೇಳಿದ್ದಾರೆ.

ಅಲ್ಲದೆ, ಇದೇನು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯೇ ಅಥವಾ ಮುಸ್ಲಿಮರ ಪರವಾದ ಪ್ರಣಾಳಿಕೆಯೇ ಎಂದು ಪ್ರಶ್ನಿಸಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ಪ್ರಣಾಳಿಕೆಯನ್ನು ಸುಳ್ಳಿನ ಕಂತೆ ಎಂದು ಕರೆದಿ ಜೋಶಿ, ಜಾಮೀನಿನ ಮೇಲೆ ಹೊರಗಿರುವ ಪ್ರಮುಖ ನಾಯಕರು. ಲೋಕಾಯುಕ್ತವನ್ನು ದುರ್ಬಲಗೊಳಿಸಿರುವ ಪಕ್ಷವು ಭ್ರಷ್ಟಾಚಾರ ನಿಗ್ರಹ ಕಾನೂನನ್ನು ಬಲಪಡಿಸುವ ಬಗ್ಗೆ ಮಾತನಾಡುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

ಈ ನಡುವೆ ದೆಹಲಿಯಲ್ಲಿರುವ ಬಜರಂಗದಳ ಸಂಘಟನೆಯ ಸದಸ್ಯರು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT