ಸಂಗ್ರಹ ಚಿತ್ರ 
ರಾಜ್ಯ

ರಾಜ್ಯ ವಿಧಾನಸಭಾ ಚುನಾವಣೆ 2023: ಮೇ 10 ರಂದು ಸಾರ್ವತ್ರಿಕ ರಜೆ ಘೋಷಣೆ

ಮೇ 10 ರಂದು ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.

ಬೆಂಗಳೂರು: ಮೇ 10 ರಂದು ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ-ಕಾಲೇಜುಗಳಿಗೆ, ಸಂಘ-ಸಂಸ್ಥೆಗಳಿಗೆ ಹಾಗೂ ಖಾಸಗಿ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಲಾಗಿದೆ.

ಈ ಸಂಬಂಧ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ.10ರಂದು ಮತದಾನ ನಡೆಯಲಿದೆ. ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಮತ ಕ್ಷೇತ್ರಗಳ ಎಲ್ಲಾ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ, ವಿವಿಧ ಸಂಘ ಸಂಸ್ಥೆಗಳಿಗೆ ಮತ್ತು ಖಾಸಗಿ ಸಂಸ್ಥೆಗಳಿಗೆ ಅಂದರೆ ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ ಸರ್ಕಾರವು ಆಯಾ ಚುನಾವಣಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲು ದಿನಾಂಕದಂದು ಸಾರ್ವತ್ರಿಕ ರಜೆಯನ್ನು ಘೋಷಿಸಿದೆ. ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ ಎಂದು ಹೇಳಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರುಗಳು ಚುನಾವಣಾ ಕರ್ತವ್ಯಕ್ಕೆ  ಹಾಜರಾಗತಕ್ಕದ್ದು. ಈ ಕ್ಷೇತ್ರಗಳಲ್ಲಿ ಮತದಾನವು ಸುಸೂತ್ರವಾಗಿ ನಡೆಯಲು ಅನುಕೂಲವಾಗುವಂತೆ ಮತದಾನ ನಡೆಯುವ ಮತಗಟ್ಟೆಯನ್ನು ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಶಾಲೆಗಳಲ್ಲಿ ಸ್ಥಾಪಿಸಿದ್ಧಲ್ಲಿ ಅಂತಹ ಕಚೇರಿ ಹಾಗೂ ಶಾಲೆಗಳಿಗೆ ದಿನಾಂಕ 09-05-2023ರ ಮಂಗಳವಾರದಂದು ಹಾಗೂ ಮತಏಣಿಕೆ ನಡೆಯುವ ದಿನಾಂಕ 13-05-2023ರಂದು ಮತ ಏಣಿಕೆ ನಡೆಯುವ ಕೇಂದ್ರಗಳಲ್ಲಿ ಮಾತ್ರ ರಜೆ ಘೋಷಿಸುವ ಅವಶ್ಯಕತೆ ಇದ್ದಲ್ಲಿ ಸಂಬಂಧ ಪಟ್ಟ ಚುನಾವಣಾಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT