ಪ್ರವೀಣ್‌ ನೆಟ್ಟಾರು 
ರಾಜ್ಯ

ಪ್ರವೀಣ್ ನೆಟ್ಟರು ಕೊಲೆ ಪ್ರಕರಣ: ಮತ್ತೆ ಇಬ್ಬರ ವಿರುದ್ಧ ಪೂರಕ ಚಾರ್ಜ್ ಶೀಟ್ ಸಲ್ಲಿಸಿದ NIA

ಬಿಜೆಪಿ ಯುವಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳ ವಿರುದ್ಧ ಎನ್ ಐಎ ಆರೋಪಪಟ್ಟಿ ಸಲ್ಲಿಸಿದೆ.

ಬೆಂಗಳೂರು: ಬಿಜೆಪಿ ಯುವಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳ ವಿರುದ್ಧ ಎನ್ ಐಎ ಆರೋಪಪಟ್ಟಿ ಸಲ್ಲಿಸಿದೆ.

2022ರ ಜುಲೈ 26ರಂದು ಈಗ ನಿಷೇಧಗೊಂಡಿರುವ ಪಾಪ್ಯುಲರ್ ಫ್ರಂಟ್ ನ ಭಾರತ(ಪಿಎಫ್‌ಐ) ಕಾರ್ಯಕರ್ತರಿಂದ ಪ್ರವೀಣ್ ನೆಟ್ಟಾರು ಬೆಳ್ಳಾರೆಯಲ್ಲಿ ಅವರ ಅಂಗಡಿಯ ಮುಂದೆ ಹತ್ಯೆಗೀಡಾಗಿದ್ದರು. 

ಭಾರತೀಯ ದಂಡ ಸಂಹಿತೆಯ (IPC) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ತುಫೈಲ್ ಎಂಎಚ್ ಮತ್ತು ಮಹಮ್ಮದ್ ಜಬೀರ್ ಸೇರಿದಂತೆ ಇತರ ಆರೋಪಿಗಳ ವಿರುದ್ಧ ಆರೋಪ ಹೊರಿಸಲಾಗಿದೆ. ಯುಎಪಿಎ ಕಾಯ್ದೆಯಡಿ ಒಟ್ಟು ಈ ಪ್ರಕರಣದಲ್ಲಿ 21 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ಎನ್‌ಐಎ ತಿಳಿಸಿದೆ. ಕೊಲೆ ನಂತರ ತಲೆಮರೆಸಿಕೊಂಡಿದ್ದ ತುಫೈಲ್ ನನ್ನು ಎನ್‌ಐಎ ತಂಡ ಬೆಂಗಳೂರಿನಲ್ಲಿ ಪತ್ತೆ ಹಚ್ಚಿ ಬಂಧಿಸಿತ್ತು.

ಜನವರಿ 20ರಂದು ಎನ್‌ಐಎ ಆರಂಭಿಕ ಆರೋಪಪಟ್ಟಿ ಸಲ್ಲಿಸಿತ್ತು. ಪಿಎಫ್ಐ ರಹಸ್ಯ 'ಹಿಟ್ ಸ್ಕ್ವಾಡ್' ಅನ್ನು ರಚಿಸಿದೆ ಎಂದು ಸಂಸ್ಥೆ ಹೇಳಿತ್ತು. ಈ ಸ್ಕ್ವಾಡ್ ಗಳ ಮೂಲಕ ತಮ್ಮ ವೈರಿಗಳ ಹತ್ಯೆ ಮಾಡಲು ಬಳಸುತ್ತಿತ್ತು ಎಂದು ಆತಂಕ ವ್ಯಕ್ತಪಡಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!