ಸಾಂದರ್ಭಿಕ ಚಿತ್ರ 
ರಾಜ್ಯ

ಯಾದಗಿರಿ: ಕೆಎಸ್ಆರ್ಟಿಸಿ ಬಸ್-ಕಾರಿನ ನಡುವೆ ಭೀಕರ ಅಪಘಾತ, ಮೂವರ ದುರ್ಮರಣ

KSRTC ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರ ದುರ್ಮರಣ ಹೊಂದಿದ್ದಾರೆ.

ಯಾದಗಿರಿ: KSRTC ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರ ದುರ್ಮರಣ ಹೊಂದಿದ್ದಾರೆ.

ಯಾದಗಿರಿಯ ಶಹಾಪುರ ತಾಲೂಕಿನ ಮದ್ದರಕಿ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು ಮೃತರನ್ನು ಸುರಪುರ ತಾಲೂಕಿನ ರಂಗಂಪೇಟೆ ನಿವಾಸಿಗಳಾದ 59 ವರ್ಷದ ನಾಗರಾಜು ಸಜ್ಜನ್, 50 ವರ್ಷದ ಮಹಾದೇವಿ ಹಾಗೂ 45 ವರ್ಷದ ರೇಣುಕಾ ಎಂದು ಗುರುತಿಸಲಾಗಿದೆ. 

ಮೃತ ನಾಗರಾಜು ಸಜ್ಜನ್ ಕೃಷಿ ಇಲಾಖೆಯಲ್ಲಿ ಅಧಿಕಾರಿಯಾಗಿದ್ದು ಕಲಬುರಗಿಯಲ್ಲಿ ಸಂಬಂಧಿಕರ ಮದುವೆ ಮುಗಿಸಿ ಹಿಂದಿರುಗುವಾಗ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಕೆಎಸ್​ಆರ್​ಟಿಸಿ ಬಸ್​ನಲ್ಲಿದ್ದ ಐದಾರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಘಾತದ ನಂತರ ಚಾಲಕ ಬಸ್ ಅನ್ನು ಅಲ್ಲೆ ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಭೀಮರಾಯನಗುಡಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT