ರಾಜ್ಯ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಗಲಭೆ ಪ್ರಕರಣ: ಕೊಲ್ಲಿಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Ramyashree GN

ಮಂಗಳೂರು: 2019ರಲ್ಲಿ ನಗರದಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಗಲಭೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಕಂದತ್ ಪಲ್ಲಿ ನಿವಾಸಿ ಮೊಹಮ್ಮದ್ ರಿಮಾಜ್ (ರೀಮಾ) (28) ಅವರನ್ನು ಕೊಲ್ಲಿಯಿಂದ ಹಿಂದಿರುಗಿದ ನಂತರ ಗುರುವಾರ ವಿಮಾನ ನಿಲ್ದಾಣದಲ್ಲಿ ಬಂಧಿಸಿ ಕರೆದೊಯ್ಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಗಲಭೆಯ ನಂತರ ರಿಮಾಜ್ ತಲೆಮರೆಸಿಕೊಂಡಿದ್ದರು ಮತ್ತು ನ್ಯಾಯಾಲಯವು ಆತನ ವಿರುದ್ಧ ಹಲವಾರು ವಾರಂಟ್‌ಗಳನ್ನು ಹೊರಡಿಸಿತ್ತು. ಆತ ಕೊಲ್ಲಿ ರಾಷ್ಟ್ರದಲ್ಲಿದ್ದಾರೆ ಎಂಬ ಮಾಹಿತಿ ಬಂದ ನಂತರ ಅವರ ಹೆಸರಿನಲ್ಲಿ ಲುಕ್ ಔಟ್ ಸುತ್ತೋಲೆ ಹೊರಡಿಸಲಾಗಿತ್ತು.

ರಿಮಾಜ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಕೂಡಲೇ, ಪೊಲೀಸರಿಗೆ ಮಾಹಿತಿ ನೀಡಲಾಯಿತು. ಅಲ್ಲಿ ಆತನನ್ನು ಬಂಧಿಸಲಾಯಿತು. ಬಳಿಕ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ರಿಮಾಜ್ ವಿರುದ್ಧ ನಗರದ ಉತ್ತರ ಮತ್ತು ದಕ್ಷಿಣ ಪೊಲೀಸ್ ಠಾಣೆಗಳಲ್ಲಿ 12 ಪ್ರಕರಣಗಳು ದಾಖಲಾಗಿವೆ ಎಂದು ಮೂಲಗಳು ತಿಳಿಸಿವೆ.

SCROLL FOR NEXT