ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದ ಟಾಪರ್ಸ್ 
ರಾಜ್ಯ

ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ: 625 ಕ್ಕೆ 625 ಅಂಕ ಗಳಿಸಿದ ನಾಲ್ವರು ವಿದ್ಯಾರ್ಥಿಗಳು!

ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ(KSEAB) 2022-23ನೇ ಸಾಲಿನ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದು ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಗಳಿಸಿ ವಿಶಿಷ್ಟ ಸಾಧನೆ ಮಾಡಿದ್ದಾರೆ.

ಬೆಂಗಳೂರು: ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ(KSEAB) 2022-23ನೇ ಸಾಲಿನ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದು ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಗಳಿಸಿ ವಿಶಿಷ್ಟ ಸಾಧನೆ ಮಾಡಿದ್ದಾರೆ.

ಯಾರು ಆ ನಾಲ್ವರು ವಿದ್ಯಾರ್ಥಿಗಳು?: ಬೆಂಗಳೂರಿನ ಹೊಸೂರು ರಸ್ತೆಯಲ್ಲಿರುವ ನ್ಯೂ ಮೆಕಾಲೆ ಶಾಲೆಯ ವಿದ್ಯಾರ್ಥಿನಿ ಭೂಮಿಕಾ ಪೈ, ಚಿಕ್ಕಬಳ್ಳಾಪುರದ ಅಗಲಗುರ್ಕಿ ಬಿಜಿಎಸ್ ಶಾಲೆಯ ಯಶಸ್ ಗೌಡ, ಬೆಳಗಾವಿ ಜಿಲ್ಲೆಯ ಸವದತ್ತಿಯ ಶ್ರೀ ಕುಮಾರೇಶ್ವರ ಶಾಲೆಯ ಅನುಪಮಾ ಶ್ರೀಶೈಲ್ ಹಿರೆಹೋಳಿ, ವಿಜಯಪುರದ ಭೀಮನಗೌಡ ಪಾಟೀಲ್ ಈ ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.

ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಪಾಸಾದ ಬಾಲಕರ ಸಂಖ್ಯೆ 3,41,108 ಆಗಿದ್ದು, ಬಾಲಕಿಯರ ಸಂಖ್ಯೆ 3,59,511, SSLC ಫಲಿತಾಂಶದಲ್ಲಿ A ಗ್ರೇಡ್ ಪಡೆದ ಜಿಲ್ಲೆಗಳು ಸಂಖ್ಯೆ-23, ಬಿ ಗ್ರೇಡ್ ಪಡೆದ ಜಿಲ್ಲೆಗಳು ಸಂಖ್ಯೆ 12 ಆಗಿದೆ. ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‍ಸೈಟ್‍ karresults.nic.in ನಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ವೀಕ್ಷಿಸಬಹುದು.

ಈ ಬಾರಿ ರಾಜ್ಯದಲ್ಲಿ ಶೇ 83.89 ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕಿಂತ ಈ ಬಾರಿ ಫಲಿತಾಂಶ ಕುಸಿತ ಕಂಡಿದೆ. ಕಳೆದ ವರ್ಷ ಶೇ 85.13 ಫಲಿತಾಂಶ ಬಂದಿತ್ತು. ಪ್ರತಿ ವರ್ಷದಂತೆ ಈ ಬಾರಿಯೂ ಫಲಿತಾಂಶದಲ್ಲಿ ಹೆಣ್ಣು ಮಕ್ಕಳೇ ಮೇಲುಗೈ ಸಾಧಿಸಿದ್ದಾರೆ. ಹೆಣ್ಣು ಮಕ್ಕಳು ಶೇ. 87.87 ರಷ್ಟು ಉತ್ತೀರ್ಣರಾಗಿದ್ದಾರೆ. ಗಂಡು ಮಕ್ಕಳು ಶೇ. 80.08 ಉತ್ತೀರ್ಣರಾಗಿದ್ದಾರೆ. 

ಮರುಮೌಲ್ಯಮಾಪನ: ಹೆಚ್ಚಿನ ಅಂಕ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದಾಗಿದ್ದು, ಮೇ 15ರಿಂದ ಮೇ 21ರವರೆಗೆ ಅವಕಾಶವಿದೆ. ಮರುಮೌಲ್ಯಮಾಪನ ಬಯಸುವ ವಿದ್ಯಾರ್ಥಿಗಳು ಪ್ರತಿ ವಿಷಯಕ್ಕೆ ರೂ. 250 ಪಾವತಿಸಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT