ರಾಜ್ಯ

ಸಕಲ ಸರ್ಕಾರಿ ಗೌರವಗಳೊಂದಿಗೆ 'ಬಲರಾಮ'ನಿಗೆ ವಿದಾಯ: ಪ್ರಧಾನಿ ಕಂಬನಿ

Sumana Upadhyaya

ಮೈಸೂರು: ಮೈಸೂರು ದಸರಾದಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ, ಅನಾರೋಗ್ಯದಿಂದ ಅಸುನೀಗಿದ ಬಲರಾಮ ಆನೆಯ ಅಂತ್ಯಕ್ರಿಯೆ ಇಂದು ನೆರವೇರಿತು.

ನಾಗರಹೊಳೆ ಹುಲಿ ಅಭಯಾರಣ್ಯರಲ್ಲಿ ಬಲರಾಮದ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ. 

67 ವರ್ಷದ ಬಲರಾಮ ಆನೆ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿತ್ತು. ಈ ಹಿನ್ನೆಲೆಯಲ್ಲಿ ನಾಗರಹೊಳೆ ಉದ್ಯಾನವನದ ಹುಣಸೂರು ರೇಂಜ್ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರ ತಂಡ ಬಲರಾಮನಿಗೆ ಚಿಕಿತ್ಸೆ ನೀಡುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮೃತಪಟ್ಟಿತ್ತು.

ಬಲರಾಮನ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ದೇಶದ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿ, ಹಲವು ವರ್ಷಗಳಿಂದ, ಗಜರಾಜ ಬಲರಾಮ ಮೈಸೂರಿನ ಸಾಂಪ್ರದಾಯಿಕ ದಸರಾ ಆಚರಣೆಯ ಪ್ರಮುಖ ಭಾಗವಾಗಿದ್ದನು. ಅವನು ಚಾಮುಂಡೇಶ್ವರಿ ಮಾತೆಯ ಮೂರ್ತಿಯನ್ನು ಹೊತ್ತಿದ್ದನ್ನು ಜನರು ನೆನಪಿಸಿಕೊಳ್ಳುತ್ತಾರೆ. ಅವನು ಅಸಂಖ್ಯಾತ ಜನರಿಗೆ ಪ್ರೀತಿಪಾತ್ರನಾಗಿದ್ದನು. ಅವನ ಅಗಲಿಕೆಯಿಂದ ದುಃಖವಾಗಿದೆ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ. 

SCROLL FOR NEXT