ತುಷಾರ್ ಗಿರಿನಾಥ್, ದಯಾನಂದ್ ಅವರಿಂದ ಪರಿಶೀಲನೆ 
ರಾಜ್ಯ

ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ, ಮುಖ್ಯ ಆಯುಕ್ತರಿಂದ ಮತ ಎಣಿಕೆ ಕೇಂದ್ರಗಳ ವೀಕ್ಷಣೆ

ಬೆಂಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ 28 ವಿಧಾನಸಭಾ ಕ್ಷೇತ್ರಗಳ ಪೈಕಿ  4 ವಿವಿಧ ಸ್ಥಳಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಈ ಪೈಕಿ ನಾಲ್ಕೂ ಮತ ಎಣಿಕೆ ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯಕ್ಕೆ ಸಂಬಂಧಿಸಿದ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ತಿಳಿಸಿದರು. 

ಬೆಂಗಳೂರು: ಬೆಂಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ 28 ವಿಧಾನಸಭಾ ಕ್ಷೇತ್ರಗಳ ಪೈಕಿ  4 ವಿವಿಧ ಸ್ಥಳಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಈ ಪೈಕಿ ನಾಲ್ಕೂ ಮತ ಎಣಿಕೆ ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯಕ್ಕೆ ಸಂಬಂಧಿಸಿದ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ತಿಳಿಸಿದರು. 

ನಗರದಲ್ಲಿರುವ ಸೆಂ. ಜೋಸೆಫ್ ಇಂಡಿಯನ್ ಹೈ ಸ್ಕೂಲ್ ನಲ್ಲಿರುವ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತ ಎಣಿಕೆಯ ಸಿಬ್ಬಂದಿ 3 ವಿಧದಲ್ಲಿ ಇರಲಿದ್ದು, ಪ್ರತಿ ಟೇಬಲ್ ಗೆ ಮೈಕ್ರೋ ಅಬ್ಸರ್ವರ್, ಮತ ಎಣಿಕೆ ಮೇಲ್ವಿಚಾರಕರು ಮತ್ತು ಮತ ಎಣಿಕೆ ಸಹಾಯಕರನ್ನು ನಿಯೋಜನೆ ಮಾಡಲಾಗುತ್ತದೆ. ಪ್ರತಿ ಎಣಿಕಾ ಕೊಠಡಿಗೆ ಸಾಮಾನ್ಯವಾಗಿ 10 ರಿಂದ 14 ಟೇಬಲ್ ಗಳ ವ್ಯವಸ್ಥೆ ಮಾಡಲಾಗಿರುತ್ತದೆ. ಅದರಲ್ಲಿ 2 ಟೇಬಲ್ ಗಳನ್ನು ಪೋಸ್ಟಲ್ ಬ್ಯಾಲೆಟ್ ಮತಗಳ ಎಣಿಕೆಗೆ ಮೀಸಲಿಡಲಾಗಿರುತ್ತದೆ ಎಂದು ಹೇಳಿದರು.

ಬೆಂಗಳೂರು ನಗರದ ಅಪರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಯಾದ ಡಾ. ದಯಾನಂದ್  ಮಾತನಾಡಿ, ಸಾರ್ವತ್ರಿಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯವು ಮೇ. 13 ರಂದು ನಡೆಯಲಿದ್ದು, ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಪ್ರತಿ ಟೇಬಲ್ ಗಳಿಗೂ ವೆಬ್ ಕಾಸ್ಟಿಂಗ್ ವ್ಯವಸ್ಥೆಯಿರುತ್ತದೆ. ಎಣಿಕಾ ಮೇಲ್ವಿಚಾರಕರು ಹಾಗೂ ಎಣಿಕಾ ಸಹಾಕರಿಗೆ ಈಗಾಗಲೇ ತರಬೇತಿಯನ್ನು ಸಹಾ ನೀಡಲಾಗಿದೆ. ಮೇ 12 ರಂದು, ಮೈಕ್ರೋ ಅಬ್ಸರ್ವರ್ಸ್, ಎಣಿಕಾ ಮೇಲ್ವಿಚಾರಕರು ಹಾಗೂ ಎಣಿಕಾ ಸಹಾಕರಿಗೆ ಮತ್ತೊಂದು ಬಾರಿ ತರಬೇತಿಯನ್ನು ನೀಡಲಾಗುವುದು. ಎಲ್ಲಾ ಕಡೆ ಸಿಸಿ ಕ್ಯಾಮೆರಾಗಳ ಅಳವಡಿಕೆ ಮಾಡಿದ್ದು, ಮೂರು ಹಂತದದಲ್ಲಿ ಪೊಲೀಸ್ ಭದ್ರತಾ ವ್ಯವಸ್ಥೆ ಮಾಡಲಾಗುತ್ತದೆ. ಆವರಣದಲ್ಲಿ ಪಾರ್ಕಿಂಗ್ ವ್ಯಸವ್ಥೆ ಮಾಡಲಾಗಿದೆ ಎಂದು ಹೇಳಿದರು.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ 7 ವಿಧಾನಸಭಾ ಕ್ಷೇತ್ರಗಳು ಬರಲಿದ್ದು, ಯಲಹಂಕ ಹಾಗೂ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರಗಳಲ್ಲಿ 16ಕ್ಕೂ ಹೆಚ್ಚು ಅಭ್ಯರ್ಥಿಗಳಿರುವುದರಿಂದ 2 ಬ್ಯಾಲೇಟ್ ಯುನಿಟ್ ಗಳು ಬರಲಿವೆ. ಉಳಿದ ವಿಧಾನಸಭಾ ಕ್ಷೇತ್ರಗಳಿಗೆ 1 ಬ್ಯಾಲೇಟ್ ಯುನಿಟ್ ಗಳು ಬರಲಿವೆ ಎಂದು ತಿಳಿಸಿದರು.

ಮತ ಎಣಿಕೆ ಕೇಂದ್ರಗಳ ವಿವರ:

ಬೆಂಗಳೂರು ಕೇಂದ್ರ: ಬಿಎಂಎಸ್ ಕಾಲೇಜು, ಬೂಗಲ್ ರಾಕ್ ರಸ್ತೆ, ಗಾಂಧಿ ಬಜಾರ್, ಬಸವನಗುಡಿ, ಬೆಂಗಳೂರು.
ಬೆಂಗಳೂರು ದಕ್ಷಿಣ: ಎಸ್.ಎಸ್.ಎಂ.ಆರ್.ವಿ ಪಿಯು ಕಾಲೇಜು, 26ನೇ ಮುಖ್ಯ ರಸ್ತೆ, 4ನೇ ಬ್ಲಾಕ್, ಜಯನಗರ, ಬೆಂಗಳೂರು.
ಬೆಂಗಳೂರು ಉತ್ತರ: ಮೌಂಟ್ ಕಾರ್ಮಲ್ ಕಾಲೇಜು, ಪ್ಯಾಲೆಸ್ ರಸ್ತೆ, ವಸಂತನಗರ, ಬೆಂಗಳೂರು.
ಬೆಂಗಳೂರು ನಗರ: ಸೆಂ. ಜೋಸೆಫ್ ಇಂಡಿಯನ್ ಹೈ ಸ್ಕೂಲ್, ವಿಟ್ಟಲ್ ಮಲ್ಯ ರಸ್ತೆ, ಬೆಂಗಳೂರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT