ರಾಮಲಿಂಗಾ ರೆಡ್ಡಿ 
ರಾಜ್ಯ

ರಾಮಲಿಂಗಾ ರೆಡ್ಡಿ ಆಪ್ತ ಮಂಜುನಾಥ್ ರೆಡ್ಡಿಯಿಂದ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ: ಸುಳ್ಳು ಎಂದ ಕಾಂಗ್ರೆಸ್

ಕಾಂಗ್ರೆಸ್ ಮುಖಂಡ ರಾಮಲಿಂಗಾ ರೆಡ್ಡಿ ಅವರ ಆಪ್ತ ಮಂಜುನಾಥ್ ರೆಡ್ಡಿಯವರು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆಂಬ ಆರೋಪಗಳು ಕೇಳಿ ಬಂದಿದ್ದು, ಈ ಆರೋಪವನ್ನು ಕಾಂಗ್ರೆಸ್ ನಿರಾಕರಿಸಿದೆ.

ಬೆಂಗಳೂರು: ಕಾಂಗ್ರೆಸ್ ಮುಖಂಡ ರಾಮಲಿಂಗಾ ರೆಡ್ಡಿ ಅವರ ಆಪ್ತ ಮಂಜುನಾಥ್ ರೆಡ್ಡಿಯವರು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆಂಬ ಆರೋಪಗಳು ಕೇಳಿ ಬಂದಿದ್ದು, ಈ ಆರೋಪವನ್ನು ಕಾಂಗ್ರೆಸ್ ನಿರಾಕರಿಸಿದೆ.

ಬಿಜೆಪಿ ಒಬಿಸಿ ಮೋರ್ಚಾ ಕಾರ್ಯದರ್ಶಿ ಹರಿನಾಥ್ ಅವರ ಮೇಲೆ ಕಾಂಗ್ರೆಸ್‌ನ ಮಾಜಿ ಮೇಯರ್ ಮಂಜುನಾಥ್ ರೆಡ್ಡಿ ಮತ್ತು ಅವರ ಪುತ್ರ ಲಿತೇಶ್ ರೆಡ್ಡಿ ಹಲ್ಲೆ ನಡೆಸಿದ್ದಾರೆಂಬ ಆರೋಪಗಳು ಕೇಳಿ ಬಂದಿವೆ.

ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ರಾಮಲಿಂಗಾ ರೆಡ್ಡಿಯವರು, ಆರೋಪವನ್ನು ನಿರಾಕರಿಸಿತ್ತು, ಮಂಜುನಾಥ್ ರೆಡ್ಡಿ ಮತ್ತು ಅವರ ಪುತ್ರ ಲಿತೇಶ್ ರೆಡ್ಡಿ ವಿರುದ್ಧ ಸುಳ್ಳು ಪ್ರಕರಣಗಳ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಬಿಟಿಎಂ ಲೇಔಟ್‌ನ 21ನೇ ಕ್ರಾಸ್‌ನಲ್ಲಿ ಹರಿನಾಥ್ ಅವರು ಹಣ ಹಂಚುತ್ತಿದ್ದರು. ಈ ವಿಷಯ ತಿಳಿದ ಕಾಂಗ್ರೆಸ್ ಕಾರ್ಯಕರ್ತರು ಸ್ಥಳಕ್ಕೆ ತೆರಳಿದ್ದರು. ಕಾರ್ಯಕರ್ತರ ನೋಡುತ್ತಿದ್ದಂತೆಯೇ ಹರಿನಾಥ್ ಓಡಲು ಯತ್ನಿಸಿದರು. ಆದರೆ, ಈ ವೇಳೆ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಆದರೆ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ಆದೇಶದ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆಂದು ತಿಳಿಸಿದ್ದಾರೆ.

ನಮ್ಮ ನಾಯಕರ ವಿರುದ್ಧ ದೂರು ದಾಖಲಾದ ಬಳಿಕ, ಪ್ರತಿ ದೂರು ದಾಖಲಿಸಲು ಠಾಣೆಗೆ ಹೋಗಿದ್ದೆವು. ಆದರೆ, ಪೊಲೀಸರು ನಿರ್ಲಕ್ಷಿಸಿದರು ಎಂದು ಆರೋಪಿಸಿದ್ದಾರೆ. ತೇಜಸ್ವಿ ಸೂರ್ಯ ಒತ್ತಡಕ್ಕೆ ಮಣಿದು ನಮ್ಮವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಈ ಸಂಬಂಧ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆಂದು ಹೇಳಿದ್ದಾರೆ.

ಇದಕ್ಕೂ ಮುನ್ನ, ಬಿಜೆಪಿ ಕಾರ್ಯಕರ್ತ ರಮೇಶ್ ರೆಡ್ಡಿ ಅವರು, ಮಂಜುನಾಥ್ ರೆಡ್ಡಿ ಮತ್ತು ಅವರ ಮಗ ಲಿತೇಶ್ ರೆಡ್ಡಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಮತ್ತು ಬೆಂಬಲಿಗರು ಮತ್ತು ಇನ್ನೊಬ್ಬ ವ್ಯಕ್ತಿ ಹರಿನಾಥ್ ಅವರ ನಿವಾಸದಲ್ಲಿ ಹಲ್ಲೆ ನಡೆಸಿದ್ದರು ಎಂದು ಹೇಳಿಕೆ ನೀಡಿದ್ದಾರೆ.

ದಾಳಿಯಿಂದಾಗಿ ಅವರ ಮುಖಕ್ಕೆ ಆರು ಹೊಲಿಗೆ ಹಾಕಲಾಗಿದ್ದು, ದಾಳಿಕೋರರು ಅವರ ಫೋನ್ ಕಸಿದುಕೊಳ್ಳಲು ಪ್ರಯತ್ನಿಸಿದರು ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT