ಸಂಗ್ರಹ ಚಿತ್ರ 
ರಾಜ್ಯ

ಸಿಸಿಬಿ ಭರ್ಜರಿ ಕಾರ್ಯಾಚರಣೆ: 7.6 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ, 19 ಪೆಡ್ಲರ್ ಗಳ ಬಂಧನ

ಡ್ರಗ್ಸ್ ಮಾಫಿಯಾದ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ತಿಂಗಳ ಅವಧಿಯಲ್ಲಿ ಪ್ರತ್ಯೇಕವಾಗಿ ಮೂವರು ವಿದೇಶಿ ಪ್ರಜೆಗಳು ಸೇರಿದಂತೆ 19 ಪೆಡ್ಲರ್ ಗಳ ಬಂಧನಕ್ಕೊಳಪಡಿಸಿ, ರೂ.7.6 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದೆ.

ಬೆಂಗಳೂರು: ಡ್ರಗ್ಸ್ ಮಾಫಿಯಾದ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ತಿಂಗಳ ಅವಧಿಯಲ್ಲಿ ಪ್ರತ್ಯೇಕವಾಗಿ ಮೂವರು ವಿದೇಶಿ ಪ್ರಜೆಗಳು ಸೇರಿದಂತೆ 19 ಪೆಡ್ಲರ್ ಗಳ ಬಂಧನಕ್ಕೊಳಪಡಿಸಿ, ರೂ.7.6 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದೆ.

ಪ್ರಕರಣ ಸಂಬಂಧ ಜಂತು ಮಂಡಲ್, ಸಾಯಿಕುಮಾರ್ ದಂಶೆಟ್ಟಿ, ಅರ್ಜುನ್ ನಂಬಿಯಾರ್, ರೋಹನ್ ಬಾಬು, ಪವನ್, ಅಕ್ಷಯ್ ಮತ್ತು ಜಿಷ್ಣು ಸೇರಿ 19 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆ.

ವಿಲ್ಸನ್ ಗಾರ್ಡನ್, ಬೇಗೂರು, ಅಶೋಕನಗರ, ಬಾಣಸವಾಡಿ, ಸಿದ್ದಾಪುರ, ಪುಲಕೇಶಿನಗರ, ಹೆಣ್ಣೂರು, ಕೆಆರ್ ಪುರಂ, ಯಲಹಂಕ ಮತ್ತು ಆರ್‌ಟಿ ನಗರ ಪೊಲೀಸ್ ವ್ಯಾಪ್ತಿಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.

ಆರು ಕೆಜಿ ಹ್ಯಾಶಿಶ್ ಆಯಿಲ್, 51.89 ಕೆಜಿ ಗಾಂಜಾ, 140 ಗ್ರಾಂ ಎಂಡಿಎಂಎ ಹರಳುಗಳು, 236 ಎಕ್ಸ್‌ಟಾಸಿ ಮಾತ್ರೆಗಳು, 34 ಎಲ್‌ಎಸ್‌ಡಿ ಸ್ಟ್ರಿಪ್‌ಗಳು, 23 ಗ್ರಾಂ ಕೊಕೇನ್, 17 ಮೊಬೈಲ್ ಫೋನ್‌ಗಳು, ಒಂದು ಕಾರು ಮತ್ತು ಬೈಕ್'ನ್ನು ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT