ರಘು ಆಚಾರ್ 
ರಾಜ್ಯ

ಚಿತ್ರದುರ್ಗ: ಜೆಡಿಎಸ್ ಅಭ್ಯರ್ಥಿ ರಘು ಆಚಾರ್ ಮನೆ ಮೇಲೆ‌ ಚುನಾವಣಾಧಿಕಾರಿಗಳ ದಾಳಿ; 58 ಲಕ್ಷ ರೂ. ಜಪ್ತಿ

ಜಿಲ್ಲೆಯ ಹೊರವಲಯದ ಕ್ಯಾದಿಗೆರೆ ಬಳಿಯಿರುವ ಜೆಡಿಎಸ್ ಅಭ್ಯರ್ಥಿ ಜಿ.ರಘು ಆಚಾರ್ ಮನೆಯ ಮೇಲೆ ದಾಳಿ ನಡೆಸಿರುವ ಚುನಾವಣಾಧಿಕಾರಿಗಳು 58.83 ಲಕ್ಷ ರೂ. ವಶಕ್ಕೆ ಪಡೆದುಕೊಂಡಿದ್ದಾರೆ.

ಚಿತ್ರದುರ್ಗ: ಜಿಲ್ಲೆಯ ಹೊರವಲಯದ ಕ್ಯಾದಿಗೆರೆ ಬಳಿಯಿರುವ ಜೆಡಿಎಸ್ ಅಭ್ಯರ್ಥಿ ಜಿ.ರಘು ಆಚಾರ್ ಮನೆಯ ಮೇಲೆ ದಾಳಿ ನಡೆಸಿರುವ ಚುನಾವಣಾಧಿಕಾರಿಗಳು 58.83 ಲಕ್ಷ ರೂ. ವಶಕ್ಕೆ ಪಡೆದುಕೊಂಡಿದ್ದಾರೆ.

ಮತದಾರರಿಗೆ ಹಂಚಲು ಇಟ್ಟಿದ್ದ ಕವರ್‌ಗಳಲ್ಲಿ ನಗದು ಪತ್ತೆಯಾಗಿದೆ. ಕವರ್‌ಗಳಲ್ಲಿ ಸುಮಾರು 50 ಲಕ್ಷ ರೂಪಾಯಿ ನಗದು ಮತ್ತು ಮನೆಯ ಇತರ ಸ್ಥಳಗಳಲ್ಲಿ ಸುಮಾರು 8.83 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೆ ಪರಶುರಾಮ್ ತಿಳಿಸಿದ್ದಾರೆ.

ಮಂಗಳವಾರ ರಾತ್ರಿ ದಾಳಿ ನಡೆಸಿದ್ದ ಅಧಿಕಾರಿಗಳು ಇಂದೂ‌ ಕೂಡಾ ತಪಾಸಣೆ ಮುಂದುವರೆಸಿದ್ದಾರೆ.ವಿಚಕ್ಷಣಾ‌ ದಳದ ಅಧಿಕಾರಿ ರಾಘವೇಂದ್ರ, ಅಬಕಾರಿ‌ ಅಧಿಕಾರಿ ಇಮ್ರಾನ್, ನೋಡೆಲ್ ಅಧಿಕಾರಿ ಮಧುಸೂದನ್ ನೇತೃತ್ವ ದಲ್ಲಿ ದಾಳಿ ನಡೆದಿದೆ.

ಅಲ್ಲದೆ, 239 ಲೀಟರ್ ಬಿಯರ್ ಮತ್ತು 9 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದ್ದು, ಬುಧವಾರವೂ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಮತ್ತೊಂದು ಘಟನೆಯಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಸಾದಿಕ್‌ನಗರದಲ್ಲಿ 1.08 ಲಕ್ಷ ರೂ. ಹೊಸದುರ್ಗ ವಿಧಾನಸಭಾ ಕ್ಷೇತ್ರದಲ್ಲೂ ಪೊಲೀಸರು 4.25 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.‌ ಇದರೊಟ್ಟಿಗೆ ಅಂಚೆ ಮತದಾರರ ಪಟ್ಟಿಯೂ ಲಭ್ಯವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

SCROLL FOR NEXT