ಕಲಬುರಗಿ ಜಿಲ್ಲಾಧಿಕಾರಿ 
ರಾಜ್ಯ

ಹಣ ಹಂಚುತ್ತಿದ್ದ ಬಿಜೆಪಿ ಕಾರ್ಯಕರ್ತರ ಕಾರು ಚೇಸ್ ಮಾಡಿ ಹಿಡಿದ ಕಲಬುರಗಿ ಜಿಲ್ಲಾಧಿಕಾರಿ!

ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕುವಂತೆ ಆಮಿಷ ಒಡ್ಡಿ, ಹಣ ಹಂಚಿಕೆ ಮಾಡುತ್ತಿದ್ದ ಇಬ್ಬರನ್ನು ಕಲಬುರಗಿ ಜಿಲ್ಲಾಧಿಕಾರಿ ಯಶವಂತ ವಿ ಗುರುಕರ್ ಬೆನ್ನಟ್ಟಿ ಹಿಡಿದ ಘಟನೆ ಕಲಬುರಗಿ ದಕ್ಷಿಣ ಮತ ಕ್ಷೇತ್ರದ ಸಂಗಮೇಶ್ವರ ಕಾಲೊನಿಯಲ್ಲಿ ಕಳೆದ ರಾತ್ರಿ ನಡೆದಿದೆ.

ಕಲಬುರಗಿ: ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕುವಂತೆ ಆಮಿಷ ಒಡ್ಡಿ, ಹಣ ಹಂಚಿಕೆ ಮಾಡುತ್ತಿದ್ದ ಇಬ್ಬರನ್ನು ಕಲಬುರಗಿ ಜಿಲ್ಲಾಧಿಕಾರಿ ಯಶವಂತ ವಿ ಗುರುಕರ್ ಬೆನ್ನಟ್ಟಿ ಹಿಡಿದ ಘಟನೆ ಕಲಬುರಗಿ ದಕ್ಷಿಣ ಮತ ಕ್ಷೇತ್ರದ ಸಂಗಮೇಶ್ವರ ಕಾಲೊನಿಯಲ್ಲಿ ಕಳೆದ ರಾತ್ರಿ ನಡೆದಿದೆ.

ಇಲ್ಲಿನ ದಕ್ಷಿಣ ‌ಮತಕ್ಷೇತ್ರದ ಸಂಗಮೇಶ್ವರ ಕಾಲೊನಿಯಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಹಣ ಹಂಚಲು‌ ಮುಂದಾಗಿದ್ದ ಇಬ್ಬರು ವ್ಯಕ್ತಿಗಳನ್ನು ‌ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಯಶವಂತ ‌ವಿ. ಗುರುಕರ್ ಬೆನ್ನಟ್ಟಿ ಹಿಡಿದಿದ್ದಾರೆ.

ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಕಡೆಯವರು ಎನ್ನಲಾದ ಇಬ್ಬರು ಕಳೆದ ರಾತ್ರಿ 1ಗಂಟೆಗೆ ಬೀದಿ ದೀಪ ಬಂದ್ ಮಾಡಿ ಹಣ ಹಂಚಲು‌ ಮುಂದಾಗಿದ್ದರು ಎಂದು ಕಾಂಗ್ರೆಸ್ ‌ಕಾರ್ಯಕರ್ತರು ಜಿಲ್ಲಾಧಿಕಾರಿ ಅವರಿಗೆ ದೂರು ನೀಡಿದರು. ಪೊಲೀಸರ‌ ಗಮನಕ್ಕೂ ತರದೇ ಜಿಲ್ಲಾಧಿಕಾರಿ ಸ್ಥಳಕ್ಕೆ ಧಾವಿಸಿದರು.

ಇದರಿಂದ ಕಕ್ಕಾಬಿಕ್ಕಿಯಾದ ಇಬ್ಬರು ಕಾರನ್ನು ಗಂಟೆಗೆ 100 ಕಿ.ಮೀ. ವೇಗದಲ್ಲಿ ಚಲಾಯಿಸಿಕೊಂಡು ಪರಾರಿಯಾಗುತ್ತಿದ್ದರು. ಅವರ ಬೆನ್ನಟ್ಟಿದ ಜಿಲ್ಲಾಧಿಕಾರಿ ‌ಕೇಂದ್ರ ಬಸ್ ನಿಲ್ದಾಣ ಸಮೀಪದ ವಿದ್ಯಾನಗರದ ಬಳಿ ಕಾರನ್ನು ತಡೆದರು. ಸ್ಥಳಕ್ಕೆ ಧಾವಿಸಿದ ಪೊಲೀಸರು ಇಬ್ಬರ ಕೊರಳಪಟ್ಟಿ ಹಿಡಿದು ವಶಕ್ಕೆ ಪಡೆದರು.

ಜಿಲ್ಲಾಧಿಕಾರಿ ಬರುವ ಸುದ್ದಿ ಗೊತ್ತಾಗುತ್ತಿದ್ದಂತೆಯೇ ಹಣದ ಬ್ಯಾಗ್ ನೊಂದಿಗೆ ವ್ಯಕ್ತಿಯೊಬ್ಬರು ಪರಾರಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಾರನ್ನು ನಿಲ್ಲಿಸು ಎಂದರೂ ಕೇಳದೇ ವೇಗವಾಗಿ ಚಲಾಯಿಸಿದ ಕಾರು ಚಾಲಕನನ್ನು ಜಿಲ್ಲಾಧಿಕಾರಿ ‌ಗುರುಕರ್ ಅವರು ತರಾಟೆಗೆ ತೆಗೆದುಕೊಂಡ ದೃಶ್ಯ ವಿಡಿಯೊದಲ್ಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT