several angry villagers destroyed some electronic voting machines, VVPAT machines in Vijayapura 
ರಾಜ್ಯ

ಕರ್ನಾಟಕ ವಿಧಾನಸಭಾ ಚುನಾವಣೆ: ವದಂತಿಯಿಂದ ವಿಜಯಪುರದ ಮಸಬಿನಾಳ ಗ್ರಾಮದಲ್ಲಿ ಇವಿಎಂ, ವಿವಿಪ್ಯಾಟ್‌ಗಳು ಧ್ವಂಸ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಬುಧವಾರ ನಡೆದ ಮತದಾನದ ವೇಳೆ ಕನಿಷ್ಠ ಮೂರು ಸ್ಥಳಗಳಲ್ಲಿ ಹಿಂಸಾತ್ಮಕ ಘಟನೆಗಳು ವರದಿಯಾಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬುಧವಾರ ನಡೆದ ಮತದಾನದ ವೇಳೆ ಕನಿಷ್ಠ ಮೂರು ಸ್ಥಳಗಳಲ್ಲಿ ಹಿಂಸಾತ್ಮಕ ಘಟನೆಗಳು ವರದಿಯಾಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಅಧಿಕಾರಿಗಳು ಇವಿಎಂ ಬದಲಾಯಿಸುತ್ತಿದ್ದಾರೆ ಮತ್ತು ಮತದಾನ ಮುಗಿದಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ಗ್ರಾಮಸ್ಥರು ಎಲೆಕ್ಟ್ರಾನಿಕ್ ಮತಯಂತ್ರ, ವಿವಿಪ್ಯಾಟ್ (ವೋಟರ್ ವೆರಿಫೈಬಲ್ ಪೇಪರ್ ಆಡಿಟ್ ಟ್ರಯಲ್) ಯಂತ್ರಗಳನ್ನು ಧ್ವಂಸಗೊಳಿಸಿದ್ದು, ಮತಗಟ್ಟೆ ಅಧಿಕಾರಿಗಳ ವಾಹನಗಳಿಗೆ ಹಾನಿ ಮಾಡಿದ್ದಾರೆ.

ಹೆಚ್ಚುವರಿ ಇವಿಎಂ ಮತ್ತು ವಿವಿಪ್ಯಾಟ್‌ಗಳನ್ನು ಕಾರಿನಲ್ಲಿ ಸಾಗಿಸಲಾಗುತ್ತಿದ್ದಾಗ ಗ್ರಾಮಸ್ಥರು ಕಾರನ್ನು ತಡೆದಿದ್ದಾರೆ. ಆಕ್ರೋಶಗೊಂಡು ಇವಿಎಂಗಳನ್ನು ಒಡೆದು ಹಾಕಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಈ ಸಂಬಂಧ 20-25 ಮಂದಿಯನ್ನು ವಶಕ್ಕೆ ಪಡೆದಿದ್ದು, ಮತದಾನ ನಡೆಯುವಂತೆ ನೋಡಿಕೊಂಡಿದ್ದಾರೆ.

ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಪಾಪಯ್ಯ ಗಾರ್ಡನ್‌ನಲ್ಲಿರುವ ಮತಗಟ್ಟೆಯೊಂದರಲ್ಲಿ ಕೆಲ ಯುವಕರು ಕೋಲು ಹಿಡಿದು ತಮ್ಮ ರಾಜಕೀಯ ಪ್ರತಿಸ್ಪರ್ಧಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಈವೇಳೆ, ಮತದಾನ ಮಾಡಲು ಸರದಿ ಸಾಲಿನಲ್ಲಿ ನಿಂತಿದ್ದ ಕೆಲ ಮಹಿಳೆಯರಿಗೆ ಗಾಯಗಳಾಗಿವೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇನ್ನೊಂದೆಡೆ, ಬಳ್ಳಾರಿ ಜಿಲ್ಲೆಯ ಸಂಜೀವರಾಯನಕೋಟೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ