ರಾಜ್ಯ

ರಾಜ್ಯ ವಿಧಾನಸಭಾ ಚುನಾವಣೆ 2023: ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ಮೋದಿ ಕರೆ

Manjula VN

ಬೆಂಗಳೂರು/ನವದೆಹಲಿ: ರಾಜ್ಯದಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿರುವ ಬೆನ್ನಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ರಾಜ್ಯದ ಯುವ ಜನತೆಗೆ ಟ್ವೀಟ್​ ಮೂಲಕ ಕರೆಯೊಂದನ್ನು ನೀಡಿದ್ದಾರೆ.

ಕರ್ನಾಟಕದ ಜನತೆ, ವಿಶೇಷವಾಗಿ ಯುವಜನರು ಮತ್ತು ಮೊದಲ ಬಾರಿಗೆ ಮತ ಚಲಾಯಿಸುತ್ತಿರುವವರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಹಕ್ಕನ್ನು ಚಲಾಯಿಸು ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನು ಶ್ರೀಮಂತಗೊಳಿಸುವಂತೆ ಪ್ರಧಾನಿ ಮೋದಿಯವರು ಹೇಳಿದ್ದಾರೆ,

ಚುನಾವಣೆಗೂ ಮುನ್ನ ರಾಜ್ಯದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದ ಪ್ರಧಾನಿ ಮೋದಿ, ರಾಜ್ಯದ ಬಹುತೇಕ ಕತೆ ಬಿಜೆಪಿ ಪರ ಪತಯಾಚನೆ ಮಾಡಿದರು. ಸಾಕಷ್ಟು ಸಮಾವೇಶ ಮತ್ತು ರೋಡ್​ ಶೋಗಳ ಮೂಲಕ ಕೆಲವೇ ದಿವಸಗಳಲ್ಲಿ ಹಲವು ಕ್ಷೇತ್ರಗಳಲ್ಲಿ ಮಿಂಚಿನ ಸಂಚಾರ ನಡೆಸಿದರು.

SCROLL FOR NEXT