ರಾಜ್ಯ

ಕಳೆದ ಮೂರು ವಿಧಾನಸಭೆ ಚುನಾವಣೆಯಲ್ಲಿ ಆದ ಶೇಕಡಾವಾರು ಮತದಾನವೆಷ್ಟು? ಅಂಕಿಅಂಶ ಹಂಚಿಕೊಂಡ ಚುನಾವಣಾ ಆಯೋಗ

Sumana Upadhyaya

ಬೆಂಗಳೂರು: ಕರ್ನಾಟಕ ಸಾರ್ವತ್ರಿಕ ವಿಧಾನಸಭೆ ಚುನಾವಣೆ ಮುಗಿದು ಇನ್ನೇನು ಕನ್ನಡಿಗರೆಲ್ಲರೂ ಫಲಿತಾಂಶಕ್ಕೆ ಕಾಯುತ್ತಿದ್ದಾರೆ. ಮಾಧ್ಯಮಗಳಲ್ಲಿ ಫಲಿತಾಂಶ ಪೂರ್ವ ಸಮೀಕ್ಷೆಗಳು ಹೊರಬಿದ್ದಿವೆ. ಸಾರ್ವಜನಿಕರು ಕೂಡ ತಮ್ಮದೇ ರೀತಿಯಲ್ಲಿ ಚರ್ಚೆ, ವಿಮರ್ಶೆಗಳು ನಡೆಸುತ್ತಿದ್ದಾರೆ. ನಾಡಿದ್ದು ಶನಿವಾರ ಮಧ್ಯಾಹ್ನ ಹೊತ್ತಿಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ.

ಈ ಸಂದರ್ಭದಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಕಳೆದ ಮೂರು ಬಾರಿಯ ಚುನಾವಣೆಯಲ್ಲಿ ಪ್ರತಿ ಜಿಲ್ಲೆಗಳಲ್ಲಿ ಎಷ್ಟು ಶೇಕಡಾವಾರು ಮತದಾನವಾಗಿದೆ ಎಂದು ಅಂಕಿಅಂಶ ಬಹಿರಂಗಪಡಿಸಿದ್ದಾರೆ. 2013ಕ್ಕೆ ಹೋಲಿಸಿದರೆ 2018ರಲ್ಲಿ ಶೇಕಡಾ 72.44ರಷ್ಟು ಮತದಾನವಾಗಿದ್ದರೆ ಈ ಬಾರಿ ರಾಜ್ಯದಲ್ಲಿ ಒಟ್ಟಾರೆ ಶೇಕಡಾ 72.76ರಷ್ಟು ಮತದಾನವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಬಾರಿ ಅತಿಹೆಚ್ಚು ಶೇಕಡಾ 85.83ರಷ್ಟು ಮತದಾನವಾಗಿದೆ.

ಈ ವರ್ಷ ಯುವಕರು, ತೃತೀಯ ಲಿಂಗಿಗಳು ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡಿದ್ದಾರೆ. ಅಶಕ್ತರು, ಹಿರಿಯ ನಾಗರಿಕರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ. ಮತಗಟ್ಟೆಗಳಲ್ಲಿ ಮತ ಚಲಾವಣೆ ಪ್ರಕ್ರಿಯೆಯಲ್ಲಿ ಸಹಾಯ ಮಾಡಿದ ಕಾರ್ಯಕರ್ತರಿಗೆ ಮುಖ್ಯ ಚುನಾವಣಾಧಿಕಾರಿಗಳು ಧನ್ಯವಾದ ಹೇಳಿದ್ದಾರೆ.

SCROLL FOR NEXT