ಶಿವಮೊಗ್ಗ: ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ, ಹಲವು ಮಂದಿ ದುರ್ಮರಣ
ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಹಲವು ಮಂದಿ ದುರ್ಮರಣ ಹೊಂದಿರುವ ಘಟನೆ ಶಿವಮೊಗ್ಗದ ಬಳಿ ಗುರುವಾರ ಸಂಜೆ ನಡೆದಿದೆ.
ಶಿವಮೊಗ್ಗ: ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಹಲವು ಮಂದಿ ದುರ್ಮರಣ ಹೊಂದಿರುವ ಘಟನೆ ಶಿವಮೊಗ್ಗದ ಬಳಿ ಗುರುವಾರ ಸಂಜೆ ನಡೆದಿದೆ.
ತಾಲೂಕಿನ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಚೋರಡಿ ಬಳಿ ಈ ಅಪಘಾತ ಸಂಭವಿಸಿದ್ದು, 4ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆದರೆ, ಮೃತರ ಸಂಖ್ಯೆ ನಿರ್ದಿಷ್ಟವಾಗಿ ತಿಳಿದುಬಂದಿಲ್ಲ.
ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಹಾಗೂ ಶಿವಮೊಗ್ಗದಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದ ಎರಡು ಖಾಸಗಿ ಬಸ್ ಗಳ ನಡುವೆ ಚೋರಡಿ ಬಳಿಯ ಕುಮದ್ವತಿ ಸೇತುವೆ ಮೇಲೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಗಾಯಾಳುಗಳ ರಕ್ಷಣೆ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.