ರಾಜ್ಯ

ಮತ ಎಣಿಕೆಗೆ ಕ್ಷಣಗಣನೆ: ರಾಜಧಾನಿ ಬೆಂಗಳೂರಿನಲ್ಲಿ ಬಿಗಿ ಪೊಲೀಸ್ ಭದ್ರತೆ, ಸಿದ್ಧತೆ ಹೇಗಿದೆ?

Sumana Upadhyaya

ಬೆಂಗಳೂರು: 28 ವಿಧಾನಸಭೆ ಕ್ಷೇತ್ರ ಹೊಂದಿರುವ ಬೆಂಗಳೂರು ನಗರದಲ್ಲಿ ನಾಳೆ ಮತ ಎಣಿಕೆ ಸಂದರ್ಭದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು, 10 ಡಿಸಿಪಿಗಳು ಮತ್ತು ಇತರ ಶ್ರೇಣಿಯ ಅಧಿಕಾರಿಗಳನ್ನು ನಿಯೋಜಿಸುವುದರೊಂದಿಗೆ ನಗರದ ಎಲ್ಲಾ ಐದು ಎಣಿಕೆ ಕೇಂದ್ರಗಳಲ್ಲಿ ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. 

ಮದ್ಯ ಮಾರಾಟ ನಿಷೇಧ, ಸೆಕ್ಷನ್ 144 ಜಾರಿ: ಪ್ರತಿ ಮತ ಎಣಿಕೆ ಕೇಂದ್ರದಲ್ಲಿ ಅರೆಸೇನಾ ಪಡೆಗಳ ಜೊತೆಗೆ ಎಸಿಪಿಗಳು, ಇನ್‌ಸ್ಪೆಕ್ಟರ್‌ಗಳು, ಸಬ್‌ಇನ್‌ಸ್ಪೆಕ್ಟರ್‌ಗಳ ನಂತರ ಇಬ್ಬರು ಡಿಸಿಪಿಗಳು ಇರುತ್ತಾರೆ. ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಕೂಡ ಜಾರಿ ಮಾಡಲಾಗಿದೆ. ಮತ ಎಣಿಕೆ ಸಂದರ್ಭದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜು, ವಿಠಲ್ ಮಲ್ಯ ರಸ್ತೆಯ ಸೇಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್, ಬಸವನಗುಡಿಯ ಬಿಎಂಎಸ್ ಮಹಿಳಾ ಕಾಲೇಜು, ತಿಲಕನಗರದ ಎಸ್‌ಎಸ್‌ಎಂಆರ್‌ವಿ ಕಾಲೇಜು ಮತ್ತು ದೇವನಹಳ್ಳಿಯ ಆಕಾಶ್ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ಮತ ಎಣಿಕೆ ಕೇಂದ್ರಗಳಿವೆ.

ಪೂರ್ವ ಮತ್ತು ಪಶ್ಚಿಮ ವಿಭಾಗದ ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು ಭದ್ರತಾ ವ್ಯವಸ್ಥೆಗಳನ್ನು ಮೇಲ್ವಿಚಾರಣೆ ಮಾಡುತ್ತಾರೆ. 10 ಡಿಸಿಪಿಗಳು, 15 ಸಹಾಯಕ ಪೊಲೀಸ್ ಆಯುಕ್ತರು (ACP's), 38 ಪೊಲೀಸ್ ಇನ್ಸ್‌ಪೆಕ್ಟರ್‌ಗಳು, 250 ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ಗಳು ಮತ್ತು ನಗರ ಪೊಲೀಸ್‌ನ ಇತರ 1,200 ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಅರೆಸೇನಾ ಪಡೆಗಳ 12 ಕಂಪನಿಗಳು, 36 ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (KSRP) ಮತ್ತು ಸಿಟಿ ಆರ್ಮ್ಡ್ ರಿಸರ್ವ್ (CAR) ತುಕಡಿಗಳನ್ನು ನಿಯೋಜಿಸಲಾಗಿದೆ. 

ಪ್ರತಿ ಮತ ಎಣಿಕೆ ಕೇಂದ್ರಕ್ಕೆ ಮೂವರು ಎಸಿಪಿಗಳು, ಆರು ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಮತ್ತು 50 ಸಬ್ ಇನ್‌ಸ್ಪೆಕ್ಟರ್‌ಗಳ ಜೊತೆಗೆ 300 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಸೆಕ್ಷನ್ 144 ಜಾರಿಗೊಳಿಸಲಾಗಿದೆ.

SCROLL FOR NEXT