ಡಿಕೆ ಶಿವಕುಮಾರ್ 
ರಾಜ್ಯ

ಗೆಲುವಿನ ಸಂಭ್ರಮದಲ್ಲಿ ರಾಮನಗರದಲ್ಲಿ ರೋಡ್ ಶೋ ನಡೆಸಿದ ಡಿಕೆಶಿ! ವಿಡಿಯೋ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯಾದ್ಯಂತ ಪ್ರಚಂಡ ಜಯಭೇರಿ ಬಾರಿಸುತ್ತಿದ್ದಂತೆಯೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತವರು ಕ್ಷೇತ್ರದಲ್ಲಿ ಭರ್ಜರಿ  ರೋಡ್ ಶೋ ನಡೆಸಿದ್ದಾರೆ.

ರಾಮನಗರ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯಾದ್ಯಂತ ಪ್ರಚಂಡ ಜಯಭೇರಿ ಬಾರಿಸುತ್ತಿದ್ದಂತೆಯೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತವರು ಜಿಲ್ಲೆ ರಾಮನಗರದಲ್ಲಿ ಭರ್ಜರಿ  ರೋಡ್ ಶೋ ನಡೆಸಿದ್ದಾರೆ.

ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 1 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ರೋಡ್ ಶೋ ನಡೆಸುವ ಮೂಲಕ  ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ನಂತರ, ಚುನಾವಣಾಧಿಕಾರಿಗಳಿಂದ ಚುನಾವಣೆಯಲ್ಲಿ ಗೆದ್ದ ಪ್ರಮಾಣ ಪತ್ರವನ್ನು ಡಿಕೆ ಶಿವಕುಮಾರ್ ಪಡೆದರು. ಸಂಸದ ಡಿ.ಕೆ. ಸುರೇಶ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದಕ್ಕೂ ಮುನ್ನಾ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಕಚೇರಿ ನಮಗೆ ದೇಗುಲವಿದ್ದಂತೆ. ನಮ್ಮ ಮುಂದಿನ ನಡೆ ಕುರಿತು ಪಕ್ಷದ ಕಚೇರಿಯಲ್ಲಿ ನಿರ್ಧಾರ ಕೈಗೊಳ್ಳುತ್ತೇವೆ. ಪಕ್ಷದ ಗೆಲುವಿಗೆ ಕಾರಣರಾದ ಎಲ್ಲಾ ಕಾರ್ಯಕರ್ತರು, ಸಿದ್ದರಾಮಯ್ಯ ಸೇರಿ ಎಲ್ಲಾ ನಾಯಕರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ