ಡಿಜಿಪಿ ಪ್ರವೀಣ್ ಸೂದ್ 
ರಾಜ್ಯ

ಮುಂದಿನ ಸಿಬಿಐ ನಿರ್ದೇಶಕರಾಗಿ ಡಿಜಿಪಿ ಪ್ರವೀಣ್ ಸೂದ್ ನೇಮಕ

ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ (ಡಿಜಿ ಮತ್ತು ಐಜಿಪಿ) ಪ್ರವೀಣ್ ಸೂದ್ ಅವರು ಮುಂದಿನ ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರಾಗಲಿದ್ದಾರೆ.

ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ (ಡಿಜಿ ಮತ್ತು ಐಜಿಪಿ) ಪ್ರವೀಣ್ ಸೂದ್ ಅವರು ಮುಂದಿನ ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರಾಗಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ (ಕಾಂಗ್ರೆಸ್) ಅಧೀರ್ ರಂಜನ್ ಚೌಧರಿ ಅವರನ್ನೊಳಗೊಂಡ ತ್ರಿಸದಸ್ಯ ನೇಮಕಾತಿ ಸಮಿತಿಯು ಶನಿವಾರ ಅವರ ಹೆಸರನ್ನು ಅಂತಿಮಗೊಳಿಸಿದೆ.

ಸಮಿತಿ ಶಿಫಾರಸಿನ ಆಧಾರದ ಮೇಲೆ ಕ್ಯಾಬಿನೆಟ್ ನೇಮಕಾತಿ ಸಮಿತಿ (ಎಸಿಸಿ) ಸೂದ್ ಅವರ ನೇಮಕವನ್ನು ಅನುಮೋದಿಸಿದೆ ಎಂದು ವರದಿಯಾಗಿದೆ. ಆದರೂ ಆದೇಶಕ್ಕಾಗಿ ಕಾಯಲಾಗುತ್ತಿದೆ. ಸಿಬಿಐ ನಿರ್ದೇಶಕರ ಅಧಿಕಾರಾವಧಿಯನ್ನು ಎರಡು ವರ್ಷಗಳಿಗೆ ನಿಗದಿಪಡಿಸಲಾಗಿದೆ.

ಈ ಸಂಬಂಧ ಪ್ರತಿಕ್ರಿಯಿಸಲು ಸೂದ್ ನಿರಾಕರಿಸಿದ್ದಾರೆ. ಸೂದ್  ಜೊತೆಗೆ ಸುಧೀರ್ ಸಕ್ಸೇನಾ (ಡಿಜಿಪಿ ಮಧ್ಯಪ್ರದೇಶ) ಮತ್ತು ತಾಜ್ ಹಾಸನ್ (ಅಗ್ನಿಶಾಮಕ ಸೇವೆಗಳು, ನಾಗರಿಕ ರಕ್ಷಣಾ ಮತ್ತು ಗೃಹರಕ್ಷಕ ದಳದ ಮುಖ್ಯಸ್ಥರು ನವದೆಹಲಿ) ಅವರ ಹೆಸರುಗಳು ಮುಂದಿನ ಸಿಬಿಐ ನಿರ್ದೇಶಕರ ಪಟ್ಟಿಯಲ್ಲಿವೆ. 

ಸಿಬಿಐನ ಹಾಲಿ ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ ಅವರ ಎರಡು ವರ್ಷಗಳ ಅಧಿಕಾರಾವಧಿಯು ಮೇ 25 ರಂದು ಕೊನೆಗೊಳ್ಳಲಿದ್ದು, ಅವರ ಜಾಗಕ್ಕೆ ಸೂದ್ ಅವರನ್ನು ನೇಮಕ ಮಾಡಲಾಗಿದೆ. 1985ರ  ಐಪಿಎಸ್ ಬ್ಯಾಚ್ ನ ಸೂದ್ 
ಸಿಬಿಐ ನಿರ್ದೇಶಕರಾಗಿ ನೇಮಕಗೊಂಡ ಕರ್ನಾಟಕ ಕೇಡರ್‌ನ ಮೂರನೇ ಐಪಿಎಸ್ ಅಧಿಕಾರಿಯಾಗಿದ್ದಾರೆ. ಹಿಮಾಚಲ ಪ್ರದೇಶಕ್ಕೆ ಸೇರಿದ ಸೂದ್ 2020  ಫೆಬ್ರವರಿ 1 ರಂದು ಕರ್ನಾಟಕದ ಡಿಜಿ ಮತ್ತು ಐಜಿಪಿಯಾಗಿ ನೇಮಕಗೊಂಡಿದ್ದರು. 

ದೆಹಲಿ ಐಐಟಿಯ ಹಳೆಯ ವಿದ್ಯಾರ್ಥಿಯಾಗಿರುವ ಅವರು, ಹೊಸ ಯುಗದ ಅಪರಾಧಗಳು, ಕಾನೂನು ಮತ್ತು ಸುವ್ಯವಸ್ಥೆಯ ಸವಾಲುಗಳನ್ನು ನಿಭಾಯಿಸಲು ಮತ್ತು ಸಾಮಾನ್ಯ ಜನರಿಗೆ ಸುಲಭವಾಗಿ ಪೊಲೀಸ್ ಸೇವೆಗಳನ್ನು ಒದಗಿಸುವಲ್ಲಿ ಹಳೆಯ  ಪೊಲೀಸ್ ತರಬೇತಿ ಕೇಂದ್ರಗಳಲ್ಲಿ ತಂತ್ರಜ್ಞಾನವನ್ನು ಅಳವಡಿಸಿಕೊಂಡಿದ್ದಾರೆ. ಬೆಂಗಳೂರಿನ ಕುಖ್ಯಾತ ಸಂಚಾರ ದಟ್ಟಣೆ ತಗ್ಗಿಸಲು ತಂತ್ರಜ್ಞಾನ ಬಳಸಿಕೊಳ್ಳುವಲ್ಲಿ ಅವರ ಕೊಡುಗೆ ಎಲ್ಲರಿಗೂ ತಿಳಿದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT