ಹಳಿತಪ್ಪಿದ ಚೆನ್ನೈ-ಬೆಂಗಳೂರು ಡಬಲ್ ಡೆಕ್ಕರ್ ಎಕ್ಸ್‌ಪ್ರೆಸ್ ರೈಲು 
ರಾಜ್ಯ

ಬಂಗಾರಪೇಟೆ ಬಳಿ ಹಳಿತಪ್ಪಿದ ಚೆನ್ನೈ-ಬೆಂಗಳೂರು ಡಬಲ್ ಡೆಕ್ಕರ್ ಎಕ್ಸ್‌ಪ್ರೆಸ್ ರೈಲು

ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದ ಚೆನ್ನೈ- ಬೆಂಗಳೂರು ಎಸಿ ಡಬಲ್ ಡೆಕ್ಕರ್ ಎಕ್ಸ್‌ಪ್ರೆಸ್ ರೈಲು ಸೋಮವಾರ ಬಂಗಾರಪೇಟೆಯಿಂದ 20 ಕಿಮೀ ದೂರದಲ್ಲಿರುವ ಬಿಸನಟ್ಟಂ ನಿಲ್ದಾಣದ ಬಳಿ ಹಳಿತಪ್ಪಿದೆ.

ಬೆಂಗಳೂರು: ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದ ಚೆನ್ನೈ- ಬೆಂಗಳೂರು ಎಸಿ ಡಬಲ್ ಡೆಕ್ಕರ್ ಎಕ್ಸ್‌ಪ್ರೆಸ್ ರೈಲು ಸೋಮವಾರ ಬಂಗಾರಪೇಟೆಯಿಂದ 20 ಕಿಮೀ ದೂರದಲ್ಲಿರುವ ಬಿಸನಟ್ಟಂ ನಿಲ್ದಾಣದ ಬಳಿ ಹಳಿತಪ್ಪಿದೆ.

ಇಂದು ಬೆಳಗ್ಗೆ 11:30 ರ ಸುಮಾರಿಗೆ ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ - ಕೆಎಸ್‌ಆರ್ ಬೆಂಗಳೂರು ಡಬಲ್ ಡೆಕ್ಕರ್ ಎಕ್ಸ್‌ಪ್ರೆಸ್(ರೈಲು ಸಂಖ್ಯೆ 22625)ರೈಲಿನ ಕೊನೆಯ ಕೋಚ್‌ವೊಂದರ ಎರಡು ಚಕ್ರಗಳು ಹಳಿ ತಪ್ಪಿದ್ದವು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರೈಲಿನ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಹಳಿತಪ್ಪಿದ ಕೋಚ್ ಸಿ 1 ರ ಪ್ರಯಾಣಿಕರನ್ನು ಮತ್ತೊಂದು ಬೋಗಿಗಳಿಗೆ ಸ್ಥಳಾಂತರಿಸಿದ ನಂತರ ರೈಲು ಬಂಗಾರಪೇಟೆಗೆ ತೆರಳಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು ವಿಭಾಗದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ರೈಲು ಸೇವೆಯನ್ನು ಪುನಃಸ್ಥಾಪಿಸುವ ಪ್ರಯತ್ನಗಳು ನಡೆಯುತ್ತಿವೆ. ಅಪಘಾತ ಪರಿಹಾರ ರೈಲು(ಎಆರ್‌ಟಿ) ಕೂಡ ಸ್ಥಳಕ್ಕೆ ತಲುಪಿದೆ.

ಪ್ರಯಾಣಿಕರಿಗೆ/ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕೆಎಸ್‌ಆರ್ ಬೆಂಗಳೂರು ಮತ್ತು ಬಂಗಾರಪೇಟೆ ನಿಲ್ದಾಣಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT