ಡಾ. ಕೆ.ಸುಧಾಕರ್ 
ರಾಜ್ಯ

ಚಿಕ್ಕಬಳ್ಳಾಪುರ: ಅಂಧಾಭಿಮಾನದ ಅತಿರೇಕ: ಡಾ. ಸುಧಾಕರ್​ ಸೋತಿದ್ದಕ್ಕೆ ಬೆಂಬಲಿಗ ಆತ್ಮಹತ್ಯೆ

ಮಾಜಿ ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಸೋತಿದ್ದಕ್ಕೆ ಅವರ ಅಭಿಮಾನಿಯೊಬ್ಬ ಆತ್ಮಹತ್ಯೆ ಶರಣಾದ ಘಟನೆ ತಾಲೂಕಿನ ವಡ್ರೆಪಾಳ್ಯದಲ್ಲಿ ನಡೆದಿದೆ. ಚಿತ್ತಾರ ವೆಂಕಟೇಶ್ ಆತ್ಮಹತ್ಯೆಗೆ ಶರಣಾದ ಬೆಂಬಲಿಗ.

ಚಿಕ್ಕಬಳ್ಳಾಪುರ: ಮಾಜಿ ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಸೋತಿದ್ದಕ್ಕೆ ಅವರ ಅಭಿಮಾನಿಯೊಬ್ಬ ಆತ್ಮಹತ್ಯೆ ಶರಣಾದ ಘಟನೆ ತಾಲೂಕಿನ ವಡ್ರೆಪಾಳ್ಯದಲ್ಲಿ ನಡೆದಿದೆ. ಚಿತ್ತಾರ ವೆಂಕಟೇಶ್ ಆತ್ಮಹತ್ಯೆಗೆ ಶರಣಾದ ಬೆಂಬಲಿಗ.

ಕೋಟೆ ನಿವಾಸಿಯಾಗಿದ್ದ ಚಿತ್ತಾರ ವೆಂಕಟೇಶ್ ವಡ್ರೆಪಾಳ್ಯದಲ್ಲಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇವರು ಸುಧಾಕರ್ ಅವರ ಕಟ್ಟಾ ಅಭಿಮಾನಿಯಾಗಿದ್ದರು.

ಸುಧಾಕರ್ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದರು. ಈ ಬಾರಿಯ ಚುನಾವಣೆಯಲ್ಲಿ ಸುಧಾಕರ್ ಸೋಲನ್ನು ಕಂಡಿದ್ದರು. ಚಿಕ್ಕಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಆಪರೇಷನ್‌ ಕಮಲದ ಮೂಲಕ ಬಿಜೆಪಿ ಸೇರಿದ್ದ ಸುಧಾಕರ್‌ ವಿರುದ್ಧ ಕಾಂಗ್ರೆಸ್‌ನ ಪ್ರದೀಪ್ ಈಶ್ವರ್ 10,642 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ರಾಜಕಾರಣಕ್ಕೆ ಹೊಸದಾಗಿ ಪಾದಾರ್ಪಣೆ ಮಾಡಿ ತಿಂಗಳ ಕಾಲ ಚುನಾವಣಾ ಪ್ರಚಾರ ಮಾಡಿದ್ದ ಪ್ರದೀಪ್ ಈಶ್ವರ್ ಸುಧಾಕರ್ ಅವರನ್ನು ಮಣಿಸಿದ್ದು ಅಚ್ಚರಿಗೆ ಕಾರಣವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

SCROLL FOR NEXT