ಸಾಂದರ್ಭಿಕ ಚಿತ್ರ 
ರಾಜ್ಯ

ಹರಿಹರ: ಆಸ್ತಿ ವಿವಾದ, ಅಣ್ಣನನ್ನೇ ಚಾಕುವಿನಿಂದ ಇರಿದು ಕೊಂದ ತಮ್ಮ!

ಆಸ್ತಿ ವಿವಾದದಿಂದ ತಮ್ಮನೇ ಅಣ್ಣನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಹರಿಹರದಲ್ಲಿ ನಡೆದಿದೆ. ಪ್ರಶಾಂತ್ ನಗರದ ನಿವಾಸಿ ಕೆ.ಜಿ ಕುಮಾರ ಕೊಲೆಯಾದ ವ್ಯಕ್ತಿ. 

ಹರಿಹರ: ಆಸ್ತಿ ವಿವಾದದಿಂದ ತಮ್ಮನೇ ಅಣ್ಣನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಹರಿಹರದಲ್ಲಿ ನಡೆದಿದೆ. ಪ್ರಶಾಂತ್ ನಗರದ ನಿವಾಸಿ ಕೆ.ಜಿ ಕುಮಾರ ಕೊಲೆಯಾದ ವ್ಯಕ್ತಿ. 

ಹರಿಹರದ ಗುಂಡಪ್ಪ ಎಂಬುವರಿಗೆ ಇಬ್ಬರು ಪತ್ನಿಯರಿದ್ದು, ಎರಡನೇ ಪತ್ನಿ ರತ್ನಮ್ಮನ ಪುತ್ರ ರಾಜು ಹಾಗೂ ಮೊದಲನೇ ಪತ್ನಿ ಲಕ್ಷಮ್ಮ ಕೊನೆಯ ಮಗನಾದ ಕುಮಾರ್ ಕೆ.ಜಿ ಅವರೊಂದಿಗೆ ಆಸ್ತಿ ವಿಚಾರದಲ್ಲಿ ನ್ಯಾಯಾಲಯದಲ್ಲಿ ದಾವೆ ನಡೆಯುತ್ತಿತ್ತು. ಇವರಿಬ್ಬರ ಮಧ್ಯೆ ಮನಸ್ತಾಪವಿದ್ದು ಪದೇಪದೇ ಸಣ್ಣಪುಟ್ಟ ಜಗಳ ನಡೆಯುತಿತ್ತು ಎನ್ನಲಾಗಿದೆ.

ನಿನ್ನೆ ರಾತ್ರಿ ದಾವಣಗೆರೆಯಿಂದ ಹರಿಹರಕ್ಕೆ ವಾಪಸ್ ಬರುತ್ತಿರುವ ಮಾರ್ಗ ಮಧ್ಯೆ ಕುಮಾರ್ ಮೇಲೆ ತಮ್ಮ ರಾಜು ಮತ್ತು ಮಾರುತಿ ಎಂಬುವವರು ಹಲ್ಲೆ ಮಾಡಿದ್ದಾರೆ. ಕೂಡಲೇ ಕುಮಾರ್ ನನ್ನು ಹರಿಹರ ಆಸ್ಪತ್ರೆಗೆ ದಾಖಲಿಸಲಾಯಿತು.

ಈ ವೇಳೆ ಆಸ್ಪತ್ರೆಯಲ್ಲಿಯೇ ಕುಮಾರ್ ಮೇಲೆ ರಾಜು ಚಾಕುವಿನಿಂದ ತಿವಿದಿದ್ದಾರೆ. ತೀವ್ರವಾಗಿ ರಕ್ತಸಾವ್ರಗೊಂಡ ಕುಮಾರ್ ಅವರನ್ನು ದಾವಣಗೆರೆಗೆ ಕರೆತರುವಾಗ ಮಾರ್ಗಮಧ್ಯದಲ್ಲಿ ಕುಮಾರ್ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕುಮಾರ್ ಪತ್ನಿ ರೇಖಾ ಹರಿಹರ ಠಾಣೆಯಲ್ಲಿ ದೂರು ನೀಡಿದ್ದಾರೆ. ಕೂಡಲೇ ರಾಜು ಹಾಗೂ ಮಾರುತಿಯವರನ್ನು ಪೋಲೀಸರು ಬಂಧಿಸಿದ್ದಾರೆ. ಘಟನಾಸ್ಥಳಕ್ಕೆ ಪೊಲೀಸ್ ಸಿಬ್ಬಂದಿಗಳು ಆಗಮಿಸಿ ಪರಿಶೀಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್