ಶ್ರೀರಾಮುಲು 
ರಾಜ್ಯ

ಬಳ್ಳಾರಿಯಲ್ಲಿ ಮಾಜಿ ಸಚಿವ ಶ್ರೀರಾಮುಲುಗೆ ಸೋಲು: ಗಳಗಳನೆ ಅತ್ತ ಅಭಿಮಾನಿಗಳು!

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು ಸೋಲನುಭವಿಸಿದ ಹಿನ್ನೆಲೆಯಲ್ಲಿ ಅವರ ಮನೆಗೆ ಧಾವಿಸುತ್ತಿರುವ ಬೆಂಬಲಿಗರು ತಮ್ಮ ನೆಚ್ಚಿನ ನಾಯಕನಿಗೆ ಬಂದಿರುವ ಸ್ಥಿತಿ ಕಂಡು ಕಣ್ಣೀರು ಹಾಕುತ್ತಿದ್ದಾರೆ.

ಬಳ್ಳಾರಿ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು ಸೋಲನುಭವಿಸಿದ ಹಿನ್ನೆಲೆಯಲ್ಲಿ ಅವರ ಮನೆಗೆ ಧಾವಿಸುತ್ತಿರುವ ಬೆಂಬಲಿಗರು ತಮ್ಮ ನೆಚ್ಚಿನ ನಾಯಕನಿಗೆ ಬಂದಿರುವ ಸ್ಥಿತಿ ಕಂಡು ಕಣ್ಣೀರು ಹಾಕುತ್ತಿದ್ದಾರೆ.

ಶ್ರೀರಾಮುಲು ಅವರೇ ಸಾಂತ್ವನ ಹೇಳಿ ಅವರನ್ನು ಕಳುಹಿಸುತ್ತಿದ್ದಾರೆ. ಬಳ್ಳಾರಿಯ ಗ್ರಾಮೀಣ ಭಾಗದಲ್ಲಿ ಹಳ್ಳಿಗಳಲ್ಲಿ ಅಭಿಮಾನಿಗಳು ಕಣ್ಣೀರು ಹರಿಸುತ್ತಿದ್ದಾರೆ. ಸೋಲಿನ ಬಳಿಕ‌ ಹಳ್ಳಿಗಳಲ್ಲಿ ಸಂಚಾರ ಮಾಡಿ ಸೋಲಿನ ಪರಾಮರ್ಶೆ ಮಾಡುತ್ತಿರುವ ಶ್ರೀರಾಮುಲು ಫಲಿತಾಂಶ ಪ್ರಕಟವಾದ ದಿನವೇ ಬಳ್ಳಾರಿ ತಾಲೂಕಿನ ಮೋಕಾಗೆ ಭೇಟಿ ನೀಡಿದ್ದರು. ಆ ಸಮಯದಲ್ಲಿ ಬೆಂಬಲಿಗನೊಬ್ಬ ಶ್ರೀರಾಮುಲು ಅವರ ಕಾಲಿಗೆರಗಿ ಕಣ್ಣೀರು ಹಾಕಿದಾಗ ಸುತ್ತ ಕುಳಿತಿದ್ದವರಲ್ಲಿ ಹೆಪ್ಪುಗಟ್ಟಿದ ದುಃಖ ಕಣ್ಣೀರಾಯಿತು.

ಬೆಂಬಲಿಗರನ್ನು ಕಂಡು ಭಾವೋದ್ವೇಗಕ್ಕೆ ಒಳಗಾದ ಶ್ರೀರಾಮುಲು ಅವರೂ ಕಣ್ಣೀರು ಹಾಕಿದರು. ಈ ಸಂದರ್ಭದಲ್ಲಿ ತೆಗೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಸ್ಪರ್ಧಿಸಿ 30,000 ಮತಗಳ ಅಂತರದಿಂದ ಶಾಸಕ ನಾಗೇಂದ್ರ ವಿರುದ್ಧ ಶ್ರೀರಾಮುಲು ಸೋಲು ಕಂಡಿದ್ದಾರೆ.

1999ರಲ್ಲಿ ರಾಜಕೀಯ ಜೀವನಕ್ಕೆ ಬಂದಿರುವ ಶ್ರೀರಾಮುಲು ಮೊದಲ‌ ಬಾರಿ ಸೋತಿದ್ದರು, 2004 ರಿಂದ ಈವರೆಗೆ ‌ಸೋತಿರಲಿಲ್ಲ. 2004 ಬಳ್ಳಾರಿ ನಗರ, 2008, 2011ರ ಉಪಚುನಾವಣೆ 2013 ಚುನಾವಣೆಯಲ್ಲಿ ಬಳ್ಳಾರಿ ಗ್ರಾಮಾಂತರದಲ್ಲಿ ಗೆದ್ದಿದ್ದರು. 2014ರಲ್ಲಿ‌ ಕ್ಷೇತ್ರ ಬಿಟ್ಟು ಎಂಪಿಯಾಗಿದ್ದ ಶ್ರೀರಾಮುಲು 2018 ರಲ್ಲಿ ಮೊಳಕಾಲ್ಮೂರಿನಿಂದ ಗೆದ್ದು ಇದೀಗ ಸ್ವಕ್ಷೇತ್ರದಲ್ಲಿ ಸೋತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT