ಯಡಿಯೂರಪ್ಪ 
ರಾಜ್ಯ

ಯಡಿಯೂರಪ್ಪ ಕಣ್ಣೀರಿನಲ್ಲಿ ಬಿಜೆಪಿ ಕೊಚ್ಚಿ ಹೋಯಿತು: ದಿಂಗಾಲೇಶ್ವರ ಸ್ವಾಮಿ

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕಣ್ಣೀರಿನಲ್ಲಿ ಬಿಜೆಪಿ ಸರ್ಕಾರ ಕೊಚ್ಚಿ ಹೋಗಲಿದೆ ಎಂಬ ತಮ್ಮ ಭವಿಷ್ಯವಾಣಿ ಇದೀಗ ನಿಜವಾಗಿದೆ ಎಂದು ಶಿರಹಟ್ಟಿ ಫಕ್ಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮಿಗಳು ಸೋಮವಾರ ಹೇಳಿದ್ದಾರೆ.

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕಣ್ಣೀರಿನಲ್ಲಿ ಬಿಜೆಪಿ ಸರ್ಕಾರ ಕೊಚ್ಚಿ ಹೋಗಲಿದೆ ಎಂಬ ತಮ್ಮ ಭವಿಷ್ಯವಾಣಿ ಇದೀಗ ನಿಜವಾಗಿದೆ ಎಂದು ಶಿರಹಟ್ಟಿ ಫಕ್ಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮಿಗಳು ಸೋಮವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಕೆಎಸ್ ಈಶ್ವರಪ್ಪ ಸೇರಿದಂತೆ ಹಲವು ನಾಯಕರನ್ನು ನಿರ್ಲಕ್ಷಿಸಿದೆ. ಇದು ಪಕ್ಷದ ಇಂದಿನ ಪರಿಸ್ಥಿತಿಗೆ ಕಾರಣ ಎಂದು ಹೇಳಿದರು.

“ಎಲ್ಲರೂ ಯಡಿಯೂರಪ್ಪ ಅವರ ನಾಯಕತ್ವವನ್ನು ಒಪ್ಪಿಕೊಂಡಿದ್ದಾರೆ ಮತ್ತು ಎಲ್ಲಾ ಸಮುದಾಯದ ಮುಖಂಡರು ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೆಂದು ಒತ್ತಾಯಿಸಿದ್ದರು. ಆದರೂ, ಅವರನ್ನು ಸಿಎಂ ಸ್ಥಾನದಿಂದ ಇಳಿಸಿ, ಕಣ್ಣೀರು ಹಾಕಿಸಿದ್ದರು. ಇದೀಗ ಬಿಜೆಪಿ ಸಂಕಷ್ಟಕ್ಕೆ ಸಿಲುಕಿದೆ ಎಂದು ತಿಳಿಸಿದರು.

ನಾನು ಹೇಳಿಕೆ ನೀಡಿದ್ದರ ಕುರಿತು ಬಿಜೆಪಿ ಗಂಭೀರವಾಗಿ ಚಿಂತನೆ ನಡೆಸಬೇಕಿತ್ತು. ಕೇಸರಿಪಡೆಯಾಗಿ ಅಧಿಕಾರಕ್ಕೆ ಬಂದ ಬಳಿಕ ಸ್ವಾಮೀಜಿಗಳಿಗೆ ಗೌರವ ನೀಡಲಿಲ್ಲ. ಕಮಿಷನ್ ಮತ್ತು ಇತರ ಭ್ರಷ್ಟಾಚಾರದ ಆರೋಪಗಳಲ್ಲಿ ತೊಡಗಿಕೊಂಡ ಬಳಿಕ ದುರಹಂಕಾರದಿಂದ ವರ್ತಿಸಿದ್ದರು ಎಂದು ಕಿಡಿಕಾರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!