ಸಂಗ್ರಹ ಚಿತ್ರ 
ರಾಜ್ಯ

ಹೊಸಕೋಟೆ: ಹಿಂಸಾಚಾರಕ್ಕೆ ತಿರುಗಿದ ಸಂಭ್ರಮಾಚರಣೆ, ಬಿಜೆಪಿ ಕಾರ್ಯಕರ್ತನ ಹತ್ಯೆ

ಹೊಸಕೋಟೆ ತಾಲ್ಲೂಕಿನ ಡಿ.ಶೆಟ್ಟಿಹಳ್ಳಿಯಲ್ಲಿ ಕಾಂಗ್ರೆಸ್‌ ವಿಜಯೋತ್ಸವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.

ಕೋಲಾರ: ಹೊಸಕೋಟೆ ತಾಲ್ಲೂಕಿನ ಡಿ.ಶೆಟ್ಟಿಹಳ್ಳಿಯಲ್ಲಿ ಕಾಂಗ್ರೆಸ್‌ ವಿಜಯೋತ್ಸವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.

ಪೊಲೀಸ್ ಮೂಲಗಳ ಪ್ರಕಾರ, ಶರತ್ ಬಚ್ಚೇಗೌಡ ವಿಜಯಶಾಲಿ ಎಂದು ಘೋಷಿಸಿದ ಕೂಡಲೇ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಪ್ರಾರಂಭಿಸಿದರು. ಮಾಜಿ ಸಚಿವ ಎಂಟಿಬಿ ನಾಗರಾಜ್ ವಿರುದ್ಧ ಎರಡನೇ ಬಾರಿ ಸ್ಪರ್ಧಿಸಿದ್ದ ಶರತ್ ಅವರು ಗೆಲುವು ಸಾಧಿಸಿದ್ದರು. ಈ ಹಿನ್ನೆಲೆಯಲ್ಲಿ ಶರತ್ ಬಚ್ಚೇಗೌಡ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡುತ್ತಿದ್ದರು.

ಇದೇ ಸಂದರ್ಭದಲ್ಲಿ ಎಂಟಿಬಿ ನಾಗರಾಜ್ ಅವರ ಪ್ರಚಾರ ಮಾಡಿದ್ದ ಬಿಜೆಪಿ ಕಾರ್ಯಕರ್ತ ಕೃಷ್ಣಪ್ಪ (55) ಅವರ ಮನೆ ಮುಂದೆಯೂ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿದ್ದರು. ಈ ವೇಳೆ ತೀವ್ರ ವಾಗ್ವಾದ ಶುರುವಾಗಿದೆ. ಈವೇಳೆ ಕೃಷ್ಣಪ್ಪ ಅವರ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಕೂಡಲೇ ಮಧ್ಯೆ ಪ್ರವೇಶಿಸಿದ ಕೃಷ್ಣಪ್ಪ ಅವರ ಪತ್ನಿ ಹಾಗೂ ಮಗ ಬಾಬು ಅವರು, ಕೃಷ್ಣಪ್ಪ ಅವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೃಷ್ಣಪ್ಪ ಅವರು ಸಾವನ್ನಪ್ಪಿದ್ದಾರೆ.

ಈ ನಡುವೆ ಆರೋಪಿಗಳನ್ನು ಬಂಧನಕ್ಕೊಳಪಡಿಸುವಂತೆ ಒತ್ತಾಯಿಸಿ ಬಿಜೆಪಿಯ ಹಿರಿಯ ಮುಖಂಡರು ನಂದಗುಡಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಘಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಪೊಲೀಸರು, ನಾಲ್ವರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ಬಂಗಾಳದಲ್ಲಿ CAA, UCC ತ್ವರಿತ ಅನುಷ್ಠಾನ; ಮಾತುವಾ, ನಮಸುದ್ರರಿಗೆ ಪೌರತ್ವ ನೀಡುತ್ತೇವೆ: ಪ್ರಧಾನಿ ಮೋದಿ

ಚಲಿಸುತ್ತಿದ್ದ ಐಶಾರಾಮಿ ಕಾರಿನಲ್ಲೇ 'ದಮ್ ಮಾರೋ ದಮ್'; ಸಿಗರೇಟ್ ರಸ್ತೆಗೆಸೆದ Yuzvendra Chahal? Video Viral

ಹಾರ್ಮುಜ್ ತೆರೆಯಲು ಇರಾನ್ ಪರದಾಟ: ಜಲಸಂಧಿ ನಿರ್ಬಂಧಿಸಲು ತಾನೇ ನೆಟ್ಟ ಮೈನ್ಸ್ ಹುಡುಕಲು ವಿಫಲ; ಹಾಗಾದ್ರೆ ಮುಂದೇನು?

ಇಸ್ಲಾಮಾಬಾದ್‌ಗೆ ಆಗಮಿಸಿದ ಜೆಡಿ ವ್ಯಾನ್ಸ್ ವಿಮಾನಕ್ಕೆ ಪಾಕ್‌ನ ಐದು ಎಫ್-16 ಎಸ್ಕಾರ್ಟ್; Video ನೋಡಿ

SCROLL FOR NEXT