ರಾಜ್ಯ

7ನೇ ವೇತನ ಆಯೋಗದ ವರದಿ ಸಲ್ಲಿಕೆ ಅವಧಿ 6 ತಿಂಗಳು ವಿಸ್ತರಿಸಿದ ಸರ್ಕಾರ

Lingaraj Badiger

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆ ಪರಿಷ್ಕರಣೆ ಸಂಬಂಧ ನಿವೃತ್ತ ಐಎಎಸ್ ಅಧಿಕಾರಿ ಸುಧಾಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ 7ನೇ ವೇತನ ಆಯೋಗಕ್ಕೆ ವರದಿ ಸಲ್ಲಿಸುವ ಅವಧಿಯನ್ನು ಆರು ತಿಂಗಳು ವಿಸ್ತರಣೆ ಮಾಡಲಾಗಿದೆ.

ರಾಜ್ಯಪಾಲರ ಆದೇಶದಂತೆ, 7ನೇ ವೇತನ ಆಯೋಗದ ವರದಿ ಸಲ್ಲಿಕೆಗೆ ನೀಡಲಾಗಿದ್ದ ಸಮಯಾವಕಾಶವನ್ನು ಮೇ 19, 2023 ರಿಂದ ಆರು ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ರಾಜ್ಯ ಸರ್ಕಾರದ ಉಪ ಕಾರ್ಯದರ್ಶಿ(ಆರ್ಥಿಕ ಇಲಾಖೆ) ಆದೇಶ ಹೊರಡಿಸಿದ್ದಾರೆ.

ನವೆಂಬರ್ 19, 2022ರಲ್ಲಿ 7ನೇ ವೇತನ ಆಯೋಗ ರಚಿಸಲಾಗಿತ್ತು ಮತ್ತು ವರದಿ ಸಲ್ಲಿಸಲು ಆರು ತಿಂಗಳ ಸಮಯ ನೀಡಲಾಗಿತ್ತು.

SCROLL FOR NEXT