ಸಂಗ್ರಹ ಚಿತ್ರ 
ರಾಜ್ಯ

ಜನಪ್ರಿಯತೆ ಗಳಿಸಿದ ʻಒಂದು ನಿಲ್ದಾಣ ಒಂದು ಉತ್ಪನ್ನ’ ಯೋಜನೆ!

ಸ್ಥಳೀಯ ಉದ್ಯಮಶೀಲತೆ, ಸ್ವಸಹಾಯ ಸಂಘಗಳು ಮತ್ತು ಸ್ಥಳೀಯ ಉತ್ಪನ್ನಗಳನ್ನು ಉತ್ತೇಜಿಸಲು ರೈಲ್ವೆ ಸಚಿವಾಲಯ ಜಾರಿಗೆ ತಂದಿರುವ 'ಒಂದು ನಿಲ್ದಾಣ ಒಂದು ಉತ್ಪನ್ನ' ಯೋಜನೆಯು ಜನಪ್ರಿಯತೆ ಗಳಿಸುತ್ತಿದೆ.

ಬೆಂಗಳೂರು: ಸ್ಥಳೀಯ ಉದ್ಯಮಶೀಲತೆ, ಸ್ವಸಹಾಯ ಸಂಘಗಳು ಮತ್ತು ಸ್ಥಳೀಯ ಉತ್ಪನ್ನಗಳನ್ನು ಉತ್ತೇಜಿಸಲು ರೈಲ್ವೆ ಸಚಿವಾಲಯ ಜಾರಿಗೆ ತಂದಿರುವ 'ಒಂದು ನಿಲ್ದಾಣ ಒಂದು ಉತ್ಪನ್ನ' ಯೋಜನೆಯು ಜನಪ್ರಿಯತೆ ಗಳಿಸುತ್ತಿದೆ.

ಭಾರತೀಯ ರೈಲ್ವೆ ಸಚಿವಾಲಯದ ‘ಒಂದು ನಿಲ್ದಾಣ ಒಂದು ಉತ್ಪನ್ನ’ ಯೋಜನೆಯನ್ನು ‘ವೋಕಲ್‌ ಫಾರ್‌ ಲೋಕಲ್‌’ ಎಂಬ ದೃಷ್ಟಿಕೋನದಿಂದ ಪ್ರಾರಂಭಿಸಿದೆ.

ಸ್ಥಳೀಯರೇ ತಯಾರಿಸಿದ ಉತ್ಪನ್ನಗಳಿಗೆ ಸರಿಯಾದ ಮಾರುಕಟ್ಟೆ ಒದಗಿಸುವುದು ಮತ್ತು ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದವರ ಸ್ವಾವಲಂಬನೆಗೆ ಅವಕಾಶ ನೀಡುವ ಮೂಲಕ ಅವರನ್ನು ಉತ್ತೇಜಿಸುವಂತೆ ಮಾಡುವುದು ಈ ಯೋಜನೆಯ ಉದ್ದೇಶವಾಗಿದೆ.

ಯೋಜನೆಯಡಿ ಸ್ಥಳೀಯರಿಂದ ತಯಾರಿಸಿದ ಸ್ಥಳೀಯ ಉತ್ಪನ್ನಗಳ ಪ್ರದರ್ಶನ, ಮಾರಾಟ ಮತ್ತು ಹೆಚ್ಚಿನ ಪ್ರಚಾರವನ್ನು ನೀಡುವ ಉದ್ದೇಶದಿಂದ ಪ್ರಮುಖ ರೈಲ್ವೆ ನಿಲ್ದಾಣಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಲು ಅವಕಾಶ ನೀಡಲಾಗಿದೆ.

ಈ ಯೋಜನೆಗೆ ಮಾರ್ಚ್ 25, 2022 ರಂದು ಚಾಲನೆ ನೀಡಲಾಯಿತು. ಪ್ರಸ್ತುತ ಮೇ 01, 2023ಕ್ಕೆ 728 ನಿಲ್ದಾಣ, 21 ರಾಜ್ಯ ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ಒಟ್ಟು 785 ಸ್ಥಾಪಿಸುವ ಮೂಲಕ ‘ಒಂದು ನಿಲ್ದಾಣ ಒಂದು ಉತ್ಪನ್ನ’ ಮಳಿಗೆಗಳನ್ನು ದೇಶಾದ್ಯಂತ ವಿಸ್ತರಿಸಲಾಗಿದೆ.

ಸಾರ್ವಜನಿಕರಿಗೆ ಅನುಕೂಲವಾಗುವ ಸ್ಥಳ ಮತ್ತು ಉತ್ಪನ್ನಗಳ ಪ್ರದರ್ಶನಕ್ಕೆ ಅವಕಾಶವನ್ನು ನೀಡಲಾಗಿದೆ. ರಾಷ್ಟ್ರದೆಲ್ಲಡೆ ಏಕರೂಪದ ಆಕರ್ಷಕವಾದ ವಿನ್ಯಾಸವನ್ನು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಡಿಸೈನ್‌ ಅವರು ಮಾಡಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಒಟ್ಟು 21 ಮಳಿಗೆಗಳು ವಿವಿಧ ರೈಲು ನಿಲ್ದಾಣಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ‘ಒಂದು ನಿಲ್ದಾಣ ಒಂದು ಉತ್ಪನ್ನ’ ಎಂಬುದು ಬುಡಕಟ್ಟು ಜನಾಂಗದವರು ಸ್ಥಳೀಯವಾಗಿ ತಯಾರಿಸಿದ ಕಲಾಕೃತಿಗಳು, ನೇಕಾರಿಕೆಯಿಂದ ತಯಾರಿಸಿದ ಕೈಮಗ್ಗಗಳು, ಕರಕುಶಲ ವಸ್ತುಗಳು ಸೇರಿದಂತೆ ಇನ್ನಿತರ ಉತ್ಪನ್ನಗಳನ್ನು ಒಳಗೊಂಡಿರುತ್ತವೆ.

ಕೆ.ಎಸ್.ಆರ್ ಬೆಂಗಳೂರಿನ ‘ಒಂದು ನಿಲ್ದಾಣ ಒಂದು ಉತ್ಪನ್ನ’ ಮಳಿಗೆಯಲ್ಲಿ ಚನ್ನಪಟ್ಟಣದ ಆಟಿಕೆಗಳು, ತುಮಕೂರಿನ ಮಳಿಗೆಯಲ್ಲಿ ತೆಂಗಿನ ಉತ್ಪನ್ನಗಳು, ಅರಸೀಕೆರೆ ನಿಲ್ದಾಣದಲ್ಲಿ ಸಾಂಪ್ರದಾಯಿಕ ಕೋಲ್ಡ್ ಪ್ರೆಸ್ಡ್ ಎಣ್ಣೆಗಳು ಸೇರಿದಂತೆ ಇನ್ನೀತರ ಉತ್ಪನ್ನಗಳನ್ನು ಪ್ರದರ್ಶಿಸಲಾಗುತ್ತದೆ.

ಕೆ.ಎಸ್‌.ಆರ್ ಬೆಂಗಳೂರು ರೈಲು ನಿಲ್ದಾಣದಲ್ಲಿ ಬೆಂಗಳೂರಿನ ಬಾಲಾಜಿ ಹ್ಯಾಂಡಿಕ್ರಾಫ್ಟ್ಸ್‌ನ ಕಾಟೇಜ್ ಉದ್ಯಮದ  ವಿ. ಪ್ರಕಾಶ್ ಅವರು ಮಾತನಾಡಿ, ಈ ಯೋಜನೆಯಿಂದ ತಮ್ಮ ಉತ್ಪನ್ನವನ್ನು ಕರ್ನಾಟಕದ ಅತ್ಯಂತ ಜನನಿಬಿಡ ರೈಲು ನಿಲ್ದಾಣದಲ್ಲಿ ಪ್ರದರ್ಶಿಸಲಾಗುತ್ತಿರುವುದರಿಂದ ತಮಗೆ ಅಪಾರ ಲಾಭವಾಗಿದೆ. ಬೆಂಗಳೂರು ನಿಲ್ದಾಣಕ್ಕೆ ಬರುವ ಪ್ರವಾಸಿಗರಲ್ಲಿ ಚನ್ನಪಟ್ಟಣದ ಆಟಿಕೆಗಳು ಹೆಚ್ಚು ಜನಪ್ರಿಯವಾಗುತ್ತಿರುವುದು ಸಂತಸ ತಂದಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT