ಸಂಗ್ರಹ ಚಿತ್ರ 
ರಾಜ್ಯ

ಮಾಲೂರು ಕ್ಷೇತ್ರದ ಮತಎಣಿಕೆಯಲ್ಲಿ ಗೊಂದಲ: ಹೈಕೋರ್ಟ್​ ಮೊರೆ ಹೋದ ಬಿಜೆಪಿ ಅಭ್ಯರ್ಥಿ

ಮಾಲೂರು ಕ್ಷೇತ್ರದ ಮತಗಳ ಮರುಎಣಿಕೆ ಕೋರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಜುನಾಥ ಗೌಡ  ಅವರು ಹೈಕೋರ್ಟ್'ನಲ್ಲಿ ಮೆಟ್ಟಿಲೇರಿದ್ದಾರೆ.

ಕೋಲಾರ: ಮಾಲೂರು ಕ್ಷೇತ್ರದ ಮತಗಳ ಮರುಎಣಿಕೆ ಕೋರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಜುನಾಥ ಗೌಡ  ಅವರು ಹೈಕೋರ್ಟ್'ನಲ್ಲಿ ಮೆಟ್ಟಿಲೇರಿದ್ದಾರೆ.

248 ಮತಗಳ ಅಂತರದಿಂದ ಕಾಂಗ್ರೆಸ್​ನ ಕೆ.ವೈ.ನಂಜೇಗೌಡ ಗೆಲುವು ಸಾಧಿಸಿದ ಹಿನ್ನೆಲೆ ಮರುಎಣಿಕೆಗೆ ನಿರ್ದೇಶನ ನೀಡುವಂತೆ ಕೋರಿ ಮಂಜುನಾಥಗೌಡ ಮನವಿ ಮಾಡಿದ್ದಾರೆ.

ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಒಂದು ರೀತಿಯಾದರೆ ಮಾಲೂರು ಕ್ಷೇತ್ರದ ಮತಎಣಿಕೆ ಮಾತ್ರ ಇಡೀ ಜಿಲ್ಲೆಯ ಹಾಗೂ ರಾಜ್ಯದ ಜನರಿಗೆ ಕುತೂಹಲಕ್ಕೆ ಕಾರಣವಾಗಿತ್ತು. ಕಾರಣ ಬಿಜೆಪಿ, ಕಾಂಗ್ರೆಸ್​ ಮತ್ತು ಜೆಡಿಎಸ್​​ ಮೂರು ಪಕ್ಷಗಳ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿತ್ತು.

ಆರಂಭದಲ್ಲಿ ​ಕಾಂಗ್ರೆಸ್ ಅಭ್ಯರ್ಥಿ, ನಂತರ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ನಂತರ ಪಕ್ಷೇತರ ಅಭ್ಯರ್ಥಿ ಹೂಡಿ ವಿಜಯ್​ ಕುಮಾರ್​ ಒಬ್ಬರಾದ ಮೇಲೆ ಒಬ್ಬರು ಮುನ್ನಡೆ ಸಾಧಿಸಿಕೊಂಡು ಬಂದಿದ್ದರು. ಆದರೆ, ಒಂದು ಹಂತದಲ್ಲಿ ಪಕ್ಷೇತರ ಅಭ್ಯರ್ಥಿ ಹೂಡಿ ವಿಜಯ್​ ಕುಮಾರ್​ 1500 ದಿಂದ 2000 ಮತಗಳ ಅಂತರದಲ್ಲಿ ಸುಮಾರು ಏಳೆಂಟು ಸುತ್ತು ಮುನ್ನಡೆ ಸಾಧಿಸಿದ್ದರು.

ಕೊನೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಕೇವಲ 248 ಮತಗಳ ಅಂತರದಲ್ಲಿ ಜಯಗಳಿಸುವ ಮೂಲಕ ಕುತೂಹಲಕ್ಕೆ ತೆರೆ ಬಿದ್ದಿತ್ತು. ಆದರೆ, ಸ್ಥಳಕ್ಕೆ ಬಂದ ಬಿಜೆಪಿ ಅಭ್ಯರ್ಥಿ ಕೆ.ಎಸ್​.ಮಂಜುನಾಥಗೌಡ ಗೆಲುವಿನ ವಿರುದ್ದ ಪ್ರತಿಭಟಿಸಿ ಮರು ಎಣಿಕೆಗೆ ಆಗ್ರಹಿಸಿದ್ದರು.

ಈ ವೇಳೆ ಮರುಎಣಿಕೆ ಮಾಡಿದರಾದರೂ ಬಿಜೆಪಿ ಅಭ್ಯರ್ಥಿ ಕೋರ್ಟ್​ನ ಮೊರೆ ಹೋಗುವುದಾಗಿ ಹೇಳಿದ್ದರು. ಅದರಂತೆಯೇ ಈಗ ಮಂಜುನಾಥಗೌಡ ಪರ ವಕೀಲರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT