ಸತೀಶ್ ಜಾರಕಿ ಹೊಳಿ 
ರಾಜ್ಯ

ಸಿದ್ದರಾಮಯ್ಯ ಅವರಿಗೆ ಆಡಳಿತದ ಅನುಭವ ಹೆಚ್ಚು: ಸತೀಶ್ ಜಾರಕಿಹೊಳಿ

ಕರ್ನಾಟಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರ ಹೆಸರು ಬಹುತೇಕ ಅಂತಿಮವಾಗುತ್ತಿದ್ದಂತೆಯೇ, ಅವರಿಗೆ ಸತೀಶ್ ಜಾರಕಿಹೊಳಿ ಪರೋಕ್ಷ ಬೆಂಬಲ ಸೂಚಿಸಿದ್ದಾರೆ.

ಬೆಂಗಳೂರು: ಕರ್ನಾಟಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರ ಹೆಸರು ಬಹುತೇಕ ಅಂತಿಮವಾಗುತ್ತಿದ್ದಂತೆಯೇ, ಅವರಿಗೆ ಸತೀಶ್ ಜಾರಕಿಹೊಳಿ ಪರೋಕ್ಷ ಬೆಂಬಲ ಸೂಚಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಸತೀಶ್ ಜಾರಕಿಹೊಳಿ, ಸಿದ್ದರಾಮಯ್ಯ ಅವರಿಗೆ ಆಡಳಿತ ಅನುಭವ ಇದೆ. ಕಳೆದ ಬಾರಿಯಂತೆ ಈ ಬಾರಿಯೂ ಸರಾಗವಾಗಿ ಆಡಳಿತ ನಡೆಯಲಿದೆ. ಅವರ ಕಾರ್ಯಕ್ರಮ ಕಾರ್ಯವೈಖರಿಯೇ ಮತ್ತೆ ರಿಪೀಟ್ ಆಗಲಿದೆ ಎಂದರು.

ಅಂತೆಯೇ ಜನರಿಗೂ ಪಕ್ಷಕ್ಕೆ ಅನುಕೂಲ ಆಗುವ ವಿಶ್ವಾಸವಿದೆ. ಸೀಕ್ರೆಟ್ ಬ್ಯಾಲೆಟ್ ಮಾನದಂಡದ ಮೇಲೆ ಸಿದ್ದರಾಮಯ್ಯ ಆಯ್ಕೆ ನಡೆದಿದೆ. ಡಿಕೆ ಶಿವಕುಮಾರ್ ಡಿಸಿಎಂ ಆಗಬಹುದೂ ಅಥವಾ ಇಲ್ಲದೇ ಇರಬಹುದು. ನಾವೆಲ್ಲ ಅಧಿಕಾರ ಇರಲಿ ಇಲ್ಲದೇ ಇರಲಿ ಪಕ್ಷಕ್ಕಾಗಿ ದುಡಿಯುತ್ತೇವೆ. ಅಂತೆಯೇ  ಲೋಕಸಭೆ ಚುನಾವಣೆ ಕೂಡ ಮಾಡ್ತೇವೆ ಎಂದರು.

ಡಿಸಿಎಂ ಹುದ್ದೆಗೆ ಸತೀಶ್ ಪಟ್ಟು
ಇದೇ ವೇಳೆ ನಾನೂ ಕೂಡ ಡಿಸಿಎಂ ಸ್ಥಾನಕ್ಕಾಗಿ ಒತ್ತಾಯಿಸುತ್ತೇನೆ ಎಂದ ಸತೀಶ್ ಜಾರಕಿಹೊಳಿ, ಬೇರೆ ಸಮುದಾಯಕ್ಕೆ ಡಿಸಿಎಂ ಹುದ್ದೆ ಕೊಟ್ಟರೆ ನಾನು ಕೂಡ ಪಕ್ಷವನ್ನು ಕೇಳುತ್ತೇನೆ. ವೈಯಕ್ತಿಕವಾಗಿ ಡಿಸಿಎಂ ಬೇಡ, ಸಚಿವನಾಗಿಯೇ ಇರ್ತೀನಿ. ಡಿಕೆ ಶಿವಕುಮಾರ್ ಕೆಲಸ ಕೊಡುಗೆ ಬಹಳ ಇದೆ. ಅವರ ಮಧ್ಯೆ ಸಮಾಧಾನಕರ ರೀತಿಯಲ್ಲೇ ಸಂಧಾನ ಆಗಿದೆ. ಒಬ್ಬರೇ ಸಿಎಂ-ಡಿಸಿಎಂ ಇದ್ದರೆ ಒಳ್ಳೆಯದು ಎಂದು ಸತೀಶ್ ಹೇಳಿದರು.

ಇನ್ನು ಮೂಲಗಳ ಪ್ರಕಾರ ನಾಳೆ ಮಧ್ಯಾಹ್ನ 3.30ಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ. ಈಗಾಗಲೇ ಇದಕ್ಕಾಗಿ ಭರದ ಸಿದ್ಧತೆಗಳು ನಡೆಯುತ್ತಿವೆ. ಅಧಿಕಾರಿಗಳು, ಪೊಲೀಸರು ಕಂಠೀರವ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!