ಪುಷ್ಪ ಅಮರನಾಥ್-ಅಶೋಕ್ ಪಟ್ಟಣ್ 
ರಾಜ್ಯ

ಸಿಎಂ ಘೋಷಣೆ ಕಗ್ಗಂಟು: ಸಿದ್ದರಾಮಯ್ಯ ಸಿಎಂ‌ ಎಂದು ಘೋಷಿಸಿದ ಪುಷ್ಪಾ ಅಮರನಾಥ್‌, ಅಶೋಕ್‌ ಪಟ್ಟಣ್‌ಗೆ ನೋಟಿಸ್?

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್‌ ಮಟ್ಟದಲ್ಲಿ ಇನ್ನೂ ತೀವ್ರ ಚರ್ಚೆ ನಡೆಯುತ್ತಿರುವ ಮಧ್ಯೆಯೇ ಸಿದ್ದರಾಮಯ್ಯ ಅವರನ್ನು ಸಿಎಂ ಎಂದು ಹೈಕಮಾಂಡ್‌ ಘೋಷಣೆ ಮಾಡಿದೆ.

ನವದೆಹಲಿ: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್‌ ಮಟ್ಟದಲ್ಲಿ ಇನ್ನೂ ತೀವ್ರ ಚರ್ಚೆ ನಡೆಯುತ್ತಿರುವ ಮಧ್ಯೆಯೇ ಸಿದ್ದರಾಮಯ್ಯ ಅವರನ್ನು ಸಿಎಂ ಎಂದು ಹೈಕಮಾಂಡ್‌ ಘೋಷಣೆ ಮಾಡಿದೆ ಎಂಬ ಸುಳ್ಳು ಸುದ್ದಿ ಹರಿಬಿಟ್ಟ ಇಬ್ಬರು ಕಾಂಗ್ರೆಸ್‌ ನಾಯಕರಿಗೆ ನೋಟಿಸ್‌ ನೀಡುವ ಎಚ್ಚರಿಕೆ ನೀಡಲಾಗಿದೆ.

ರಾಮದುರ್ಗ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಅಶೋಕ್‌ ಎಂ. ಪಟ್ಟಣ್‌, ರಾಜ್ಯ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಪುಷ್ಪಾ ಅಮರನಾಥ್‌ ಅವರಿಗೆ ನೋಟಿಸ್‌ ನೀಡುವಂತೆ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಸೂಚನೆ ನೀಡಿದ್ದಾರೆ.

ಕರ್ನಾಟಕ ಸಿಎಂ ಆಯ್ಕೆ ಬಗ್ಗೆ ಯಾವುದೇ ಅಂತಿಮ ನಿರ್ಧಾರವಾಗಿಲ್ಲ.. 48ರಿಂದ 72 ಗಂಟೆಯೊಳಗೆ ಅಧಿಕೃತ ಘೋಷಣೆ ಹೊರಡಿಸುತ್ತೇವೆ ಎಂದು  ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ ಇಬ್ಬರೂ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಸಿಎಂ ಆಯ್ಕೆ ಬಗ್ಗೆ ಯಾವುದೇ ಅಂತಿಮವಾಗಿಲ್ಲ ಎಂದು ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದರು. ನಾಳೆ ಅಥವಾ ನಾಡಿದ್ದು ನೂತನ ಸಿಎಂ ಘೋಷಣೆ ಸಾಧ್ಯತೆ ಇದೆ ಎಂದು ಹೇಳಿದರು.

ಸದ್ಯ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಸಮಾಲೋಚನೆ ನಡೆಯುತ್ತಿದೆ. ಕಾಂಗ್ರೆಸ್ ನಿರ್ಧಾರ ಕೈಗೊಂಡಾಗ ನಾವು ನಿಮಗೆ ತಿಳಿಸುತ್ತೇವೆ. ಮುಂದಿನ 48-72 ಗಂಟೆಗಳಲ್ಲಿ ಕರ್ನಾಟಕದಲ್ಲಿ ಹೊಸ ಸಚಿವ ಸಂಪುಟ ರಚನೆಯಾಗಲಿದೆ ಎಂದು ಸುರ್ಜೇವಾಲಾ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

SCROLL FOR NEXT