ಸಂಗ್ರಹ ಚಿತ್ರ 
ರಾಜ್ಯ

ಕಟೀಲ್ ಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ್ದ ವ್ಯಕ್ತಿಗಳಿಗೆ ಪೊಲೀಸರಿಂದ ಥರ್ಡ್ ಡಿಗ್ರಿ ಟ್ರೀಟ್ಮೆಂಟ್: ಆಂತರಿಕ ತನಿಖೆಗೆ ಆದೇಶ

ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರ ಭಾವಚಿತ್ರವಿರುವ ಬ್ಯಾನರ್ ಅಳವಡಿಸಿ ಅದಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಆರೋಪಿಗಳಿಗೆ ಪೊಲೀಸರು ಥರ್ಡ್ ಡಿಗ್ರಿ ಟ್ರೀಟ್ಮೆಂಟ್ ನೀಡಿದ್ದಾರೆಂಬ ಆರೋಪ ಕೇಳಿ ಬಂದಿದ್ದು, ಈ ಕುರಿತು ಆಂತರಿಕ ತನಿಖೆಗೆ ಆದೇಶಿಸಲಾಗಿದೆ.

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರ ಭಾವಚಿತ್ರವಿರುವ ಬ್ಯಾನರ್ ಅಳವಡಿಸಿ ಅದಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಆರೋಪಿಗಳಿಗೆ ಪೊಲೀಸರು ಥರ್ಡ್ ಡಿಗ್ರಿ ಟ್ರೀಟ್ಮೆಂಟ್ ನೀಡಿದ್ದಾರೆಂಬ ಆರೋಪ ಕೇಳಿ ಬಂದಿದ್ದು, ಈ ಕುರಿತು ಆಂತರಿಕ ತನಿಖೆಗೆ ಆದೇಶಿಸಲಾಗಿದೆ.

ಕಟೀಲ್ ಹಾಗೂ ಸದಾನಂದಗೌಡ ಭಾವಚಿತ್ರವಿರುವ ಬ್ಯಾನರ್'ಗೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಒಂಬತ್ತು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಇವರ ಮೇಲೆ ಪೊಲೀಸರು ದೌರ್ಜನ್ಯವೆಸಗಿದ್ದಾರೆಂದು ಹೇಳಲಾಗುತ್ತಿದೆ. ಆರೋಪಿಗಳ ದೇಹದ ಮೇಲೆ ಮೂಗೇಟು ಬಿದ್ದಿರುವುದು, ರಕ್ತ ಹೆಪ್ಪುಗಟ್ಟಿರುವುದು, ಅತೀವ್ರ ಗಾಯಗಳಾಗಿರುವುದು ಕಂಡು ಬಂದಿದೆ. ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ವಿಕ್ರಮ್ ಆಮ್ಟೆ ಅವರು ಈ ಸಂಬಂಧ ಆಂತರಿಕ ತನಿಖೆಗೆ ಆದೇಶಿಸಿದ್ದಾರೆ.

ಘಟನೆ ಬಗ್ಗೆ ಎಸ್'ಪಿ ವಿವರ ನೀಡಲು ನಿರಾಕರಿಸಿದ್ದು, ಆಂತರಿಕ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.

ಪುತ್ತೂರು ಬಸ್ ನಿಲ್ದಾಣದ ಬಳಿ ಕಟೀಲ್ ಹಾಗೂ ಸದಾನಂದಗೌಡ ಅವರ ಭಾವಚಿತ್ರ ಇರುವ ಬ್ಯಾನರ್'ಗೆ ಚಪ್ಪಲಿ ಹಾರಹಾಕಿರುವುದು ಪತ್ತೆಯಾಗಿತ್ತು. ಬಳಿಕ ಸ್ಥಳೀಯ ಆಡಳಿತ ಮಂಡಳಿ ಬ್ಯಾನರಲ್'ನ್ನು ತೆರವುಗೊಳಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರಿನ ನರಿಮೊಗ್ರು ನಿವಾಸಿಗಳಾದ ಅಭಿ ಅಲಿಯಾಸ್ ಅವಿನಾಶ್, ಶಿವರಾಮ್, ಚೈತ್ರೇಶ್, ಈಶ್ವರ್, ನಿಶಾಂತ್, ದೀಕ್ಷಿತ್, ಗುರುಪ್ರಸಾದ್, ವಿಶ್ವನಾಥ್ ಮತ್ತು ಮಾಧವ ಎಂಬ ಒಟ್ಟು 9 ಮಂದಿಯನ್ನು ಪುತ್ತೂರು ಪೇಟೆ ಪೊಲೀಸರು ಸೋಮವಾರ ಮತ್ತು ಮಂಗಳವಾರ ಬಂಧನಕ್ಕೊಳಪಡಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!