ಎಚ್.ಡಿ ದೇವೇಗೌಡ 
ರಾಜ್ಯ

ಫಲಿತಾಂಶದಿಂದ ಹತಾಶರಾಗಬೇಡಿ: ಪಂಚಾಯತ್ ಚುನಾವಣೆಗೆ ಸಿದ್ದರಾಗಿ; ಜೆಡಿಎಸ್ ಕಾರ್ಯಕರ್ತರಿಗೆ ದೇವೇಗೌಡರ ಪತ್ರ!

ವಿಧಾನಸಭಾ ಚುನಾವಣಾ ಫಲಿತಾಂಶದಿಂದ ಹತಾಶರಾಗಬೇಡಿ ಎಂದು ಜನತಾ ದಳ (ಜಾತ್ಯತೀತ) ವರಿಷ್ಠ ಎಚ್‌ಡಿ ದೇವೇಗೌಡರು ತಮ್ಮ ಪಕ್ಷದ ಅಭ್ಯರ್ಥಿಗಳು ಮತ್ತು ಇತರ ಪದಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.

ಬೆಂಗಳೂರು: ವಿಧಾನಸಭಾ ಚುನಾವಣಾ ಫಲಿತಾಂಶದಿಂದ ಹತಾಶರಾಗಬೇಡಿ ಎಂದು ಜನತಾ ದಳ (ಜಾತ್ಯತೀತ) ವರಿಷ್ಠ ಎಚ್‌ಡಿ ದೇವೇಗೌಡರು ತಮ್ಮ ಪಕ್ಷದ ಅಭ್ಯರ್ಥಿಗಳು ಮತ್ತು ಇತರ ಪದಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.

ಪಕ್ಷದ ಅಭ್ಯರ್ಥಿಗಳು ಮತ್ತು ಪದಾಧಿಕಾರಿಗಳಿಗೆ ಪತ್ರ ಬರೆದಿರುವ ಮಾಜಿ ಪ್ರಧಾನಿ, ಫಲಿತಾಂಶದಿಂದ ಅವರೆಲ್ಲರಿಗೂ ಅಚ್ಚರಿ ಮತ್ತು ನಿರಾಶೆಯಾಗಿದೆ ಎಂದು ಹೇಳಿದ್ದಾರೆ. ಚುನಾವಣಾ ಫಲಿತಾಂಶ ಮತ್ತು ಪಕ್ಷವನ್ನು ಬಲಪಡಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಪಕ್ಷದ ರಾಜ್ಯಾಧ್ಯಕ್ಷ ಮತ್ತು ಶಾಸಕಾಂಗ ಪಕ್ಷದ ನಾಯಕರಿಗೆ ಸಭೆ ಕರೆಯುವಂತೆ ತಿಳಿಸಿದ್ದೇನೆ ಎಂದು ಗೌಡರು ಹೇಳಿದ್ದಾರೆ.

ಜೆಡಿಎಸ್ ಚುನಾವಣೆಯಲ್ಲಿ ಸೋತಿದ್ದರೂ ನಂತರ ಪುಟಿದೆದ್ದ ಹಿಂದಿನ ಉದಾಹರಣೆಗಳನ್ನು ಅವರು ಉಲ್ಲೇಖಿಸಿದ್ದಾರೆ ಮತ್ತು ಪಂಚಾಯತ್ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗುವಂತೆ ಪ್ರೋತ್ಸಾಹಿಸಿದ್ದಾರೆ. ಏತನ್ಮಧ್ಯೆ, ಗುರುವಾರ ಗೌಡರ 91 ನೇ ಹುಟ್ಟುಹಬ್ಬವಿದ್ದು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT