ರಂದೀಪ್ ಸಿಂಗ್ ಸುರ್ಜೇವಾಲಾ. 
ರಾಜ್ಯ

ಜನಸೇವೆ ನಮ್ಮ ಏಕೈಕ ಸೂತ್ರ, ಸಂವಿಧಾನ ಉಳಿಸಲು ಬಯಸುವವರು ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಬಹುದು: ಸುರ್ಜೇವಾಲಾ

ಪ್ರಜಾಪ್ರಭುತ್ವಕ್ಕಾಗಿ ಹೋರಾಡಲು ಮತ್ತು ಸಂವಿಧಾನವನ್ನು ಉಳಿಸಲು ಬಯಸುವವರು ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಬಹುದು ಎಂದು ಕರ್ನಾಟಕದ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಗುರುವಾರ ಹೇಳಿದ್ದಾರೆ.

ನವದೆಹಲಿ: ಪ್ರಜಾಪ್ರಭುತ್ವಕ್ಕಾಗಿ ಹೋರಾಡಲು ಮತ್ತು ಸಂವಿಧಾನವನ್ನು ಉಳಿಸಲು ಬಯಸುವವರು ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಬಹುದು ಎಂದು ಕರ್ನಾಟಕದ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಗುರುವಾರ ಹೇಳಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಆಯ್ಕೆ ಪ್ರಹಸನ ಕೊನೆಗೂ ಮುಕ್ತಾಯವಾಗಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿಕೆ.ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಅಲ್ಲದೆ, ಪ್ರಮಾಣವಚನ ಸ್ವೀಕಾರ ಸಮಾರಂಭವು ಶನಿವಾಸ ನಡೆಯಲಿದೆ ಎಂದು ಎಐಸಿಸಿ ಅಧಿಕೃತವಾಗಿ ಘೋಷಣೆ ಮಾಡಿದೆ.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸುರ್ಜೇವಾಲಾ ಅವರು, ನಮ್ಮ ಏಕೈಕ ಸೂತ್ರವೆಂದರೆ ಜನಸೇವೆ. ಜನರ ಸೇವೆಯನ್ನು ಯಾರು ಬೇಕಾದರೂ ಮಾಡಬಹುದು, ಯಾರು ಎಷ್ಟು ಬೇಕಾದರೂ ಮಾಡಬಹುದು. ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ನಮ್ಮ ಎಲ್ಲಾ ಮಿತ್ರರನ್ನೂ ಆಹ್ವಾನಿಸಲಾಗುತ್ತದೆ. ಇದು ಆಚರಣೆಯಲ್ಲ. ಪ್ರಜಾಪ್ರಭುತ್ವಕ್ಕೆ ಕಾಂಗ್ರೆಸ್‌ನ ಸಮರ್ಪಣೆಯಾಗಿದೆ. ಪ್ರಜಾಪ್ರಭುತ್ವಕ್ಕಾಗಿ ಹೋರಾಡಲು ಮತ್ತು ಸಂವಿಧಾನವನ್ನು ಉಳಿಸಲು ಬಯಸುವವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT