ಸಂಗ್ರಹ ಚಿತ್ರ 
ರಾಜ್ಯ

ವೇತನ ಹೆಚ್ಚಳಕ್ಕೆ ಆಗ್ರಹ: ವಿಸ್ಟ್ರಾನ್ ಮುಂದೆ ಸಿಬ್ಬಂದಿಗಳ ಪ್ರತಿಭಟನೆ

ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಐಫೋನ್ ತಯಾರಿಕಾ ಕಂಪನಿ ವಿಸ್ಟ್ರಾನ್‌ನ ನೂರಾರು ಸಿಬ್ಬಂದಿಗಳು ಕೋಲಾರದ ಕಂಪನಿಯ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಕೋಲಾರ: ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಐಫೋನ್ ತಯಾರಿಕಾ ಕಂಪನಿ ವಿಸ್ಟ್ರಾನ್‌ನ ನೂರಾರು ಸಿಬ್ಬಂದಿಗಳು ಕೋಲಾರದ ಕಂಪನಿಯ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ವಿಸ್ಟ್ರಾನ್ ಕಂಪನಿಯನ್ನು ಟಾಟಾ ಕಂಪನಿಯವರಿಗೆ ಮಾರಾಟ ಮಾಡಲಾಗಿದೆ. ಈಗಾಗಲೇ ನಮಗೆ ಮೂಲ ವೇತನವನ್ನು ಹೆಚ್ಚಿಗೆ ಮಾಡುವುದಾಗಿ ಹಾಗೂ ಪ್ರತಿ ವರ್ಷ ಇನ್ಕ್ರಿಮೆಂಟ್ ಹೆಚ್ಚಿಸುವುದಾಗಿ ಕಂಪನಿ ಭರವಸೆ ನೀಡಿತ್ತು. ಆದರೆ, ಈ ನಿಟ್ಟಿನಲ್ಲಿ ಯಾವುದೇ ಕ್ರಮಗಳ ಕೈಗೊಂಡಿಲ್ಲ ಎಂದು ಸಿಬ್ಬಂದಿಗಳು ಹೇಳಿದ್ದಾರೆ.

ಈ ನಡುವೆ ಸಿಬ್ಬಂದಿಗಳ ಬೇಡಿಕೆಗಳ ಕುರಿತು ಚರ್ಚಿಸಲು ಜೂನ್ ಮೊದಲ ವಾರದಲ್ಲಿ ಸಭೆ ನಡೆಸುವುದಾಗಿ ಆಡಳಿತ ಮಂಡಳಿ ಭರವಸೆ ನೀಡಿದ್ದು, ಈ ಹಿನ್ನೆಲೆಯಲ್ಲಿ ನೌಕರರು "ಸದ್ಯಕ್ಕೆ" ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸುಮಾರು 1,500 ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ, ಸುಮಾರು ನಾಲ್ಕು ವರ್ಷಗಳಿಂದ ಕೆಲಸ ಮಾಡುತ್ತಿದ್ದರೂ ಅವರ ವೇತನವನ್ನು ಹೆಚ್ಚಿಸಲಾಗಿಲ್ಲ ಎಂದು ನೌಕರರೊಬ್ಬರು ಹೇಳಿದ್ದಾರೆ.

ನಮ್ಮ ಆಗ್ರಹಗಳ ಹಿನ್ನೆಲೆಯಲ್ಲಿ ಕಂಪನಿಯು ವೇತನವನ್ನು ಹೆಚ್ಚಿಸಿತ್ತು. ಆದರೆ, ಇದು ಸಮಾಧಾನ ತಂದಿಲ್ಲ. ಮೇ.5 ರಂದು ವೇತನ ಮತ್ತಷ್ಟು ಹೆಚ್ಚಿಸುವಂತೆ ಮನವಿ ಮಾಡಿಕೊಂಡೆವು. ಮೇ.17 ರಂದು ಸಭೆ ನಡೆಸಿ, ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದರು. ಆದರೆ, ಸಭೆ ನಡೆಸದ ಕಂಪನಿ ಕಟ್ಟಡದ ಸುತ್ತಲೂ ಪೊಲೀಸರನ್ನು ನಿಯೋಜಿಸಿತು. ಹೀಗಾಗಿ ಪ್ರತಿಭಟನೆ ನಡೆಸಿದೆವು ಎಂದು ನೌಕರರು ತಿಳಿಸಿದ್ದಾರೆ.

ಮಾತಿನಂತೆ ಕಂಪನಿ ಜೂನ್ ತಿಂಗಳ ಮೊದಲ ವಾರದಲ್ಲಿ ಸಭೆ ನಡೆಸಿ ನಿರ್ಧಾರ ಕೈಗೊಳ್ಳದೇ ಹೋದಲ್ಲಿ, ಮತ್ತೊಮ್ಮೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಈ ನಡುವೆ ವಿಸ್ಟ್ರಾನ್ ಮ್ಯಾನೇಜ್‌ಮೆಂಟ್ ಪ್ರತಿನಿಧಿಗಳನ್ನು ಸಂಪರ್ಕಿಸಿದಾಗ, "ಈ ವಿಷಯದ ಬಗ್ಗೆ ಮಾತನಾಡುವ  ಅಧಿಕಾರ ನಗಿಲ್ಲ ಎಂದು ಹೇಳಿದ್ದಾರೆ.

ಡಿಸೆಂಬರ್ 2020 ರಲ್ಲಿಯೂ ಕಾರ್ಮಿಕರ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಕಂಪನಿಯ ಕಂಪ್ಯೂಟರ್‌ಗಳು, ಪೀಠೋಪಕರಣಗಳು ಮತ್ತು ಕಚೇರಿಯ ಇತರೆ ಉಪಕರಣಗಳನ್ನು ಧ್ವಂಸಗೊಳಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ