ಸಂಗ್ರಹ ಚಿತ್ರ 
ರಾಜ್ಯ

ಮೈಸೂರು: ಮಿನಿ ಬಸ್ ಪಲ್ಟಿ, ಹತ್ತು ಮಂದಿಗೆ ಗಾಯ

ಬೈಕ್'ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಿನಿಬಸ್ ವೊಂದು ಪಲ್ಟಿ ಹೊಡೆದು 10 ಮಂದಿ ಗಾಯಗೊಂಡಿರುವ ಘಟನೆ ನಂಜನಗೂಡು-ಚಾಮರಾಜನಗರ ಬೈಪಾಸ್ ರಸ್ತೆಯಲ್ಲಿ ಗುರುವಾರ ನಡೆದಿದೆ.

ಮೈಸೂರು: ಬೈಕ್'ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಿನಿಬಸ್ ವೊಂದು ಪಲ್ಟಿ ಹೊಡೆದು 10 ಮಂದಿ ಗಾಯಗೊಂಡಿರುವ ಘಟನೆ ನಂಜನಗೂಡು-ಚಾಮರಾಜನಗರ ಬೈಪಾಸ್ ರಸ್ತೆಯಲ್ಲಿ ಗುರುವಾರ ನಡೆದಿದೆ.

ವಿಜಯನಗರ ಜಿಲ್ಲೆಯ ಹೊಸಪೇಟೆಯಿಂದ ಮಿನಿ ಬಸ್ ವೊಂದು 21 ಮಂದಿ ಪ್ರವಾಸಿಗರನ್ನು ಹೊತ್ತು ಮೈಸೂರಿಗೆ ಬಂದಿತ್ತು. ಪ್ರವಾಸಿಗರು ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ದರ್ಶನ ಮುಗಿಸಿ ಮೈಸೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಲ್ಲಾ 10 ಮಂದಿಗೂ ಕೈ ಮತ್ತು ಕಾಲುಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ನಂಜನಗೂಡು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಘಟನೆ ಸಂಬಂಧ ನಂಜನಗೂಡು ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಸುಪ್ರೀಂಕೋರ್ಟ್​ಗೆ ನನ್ನ ಬಗ್ಗೆ ತಪ್ಪು ಮಾಹಿತಿ: ಸರ್ಕಾರದ ವಿರುದ್ಧ ಡಿಜಿಪಿ ಅಲೋಕ್ ಕುಮಾರ್ ಅಸಮಾಧಾನ!

ಯುವ ಜನತೆಯ ಆಕ್ರೋಶ ತಡೆಯಲು ಸಾಧ್ಯವಿಲ್ಲ, ಇಡೀ ದೇಶ ಜಂತರ್ ಮಂತರ್ ಆಗಲಿದೆ: ಪ್ರಕಾಶ್ ರಾಜ್

ಸೆಪ್ಟೆಂಬರ್‌ನಲ್ಲಿ ನಿರೀಕ್ಷೆ ಮೀರಿ ಹೆಚ್ಚಿದ ಭಾರತದ ಸಗಟು ಹಣದುಬ್ಬರ: ಶೇ.11.4ಕ್ಕೆ ಏರಿಕೆ

'ಅಧರ್ಮ ಎಸಗಿದವರಿಗೆ ಶಿಕ್ಷೆ ನೀಡುವುದೂ ಧರ್ಮವೇ'; ಮೀರತ್ ಹತ್ಯೆ ಪ್ರಕರಣ ಶಿಕ್ಷೆ ಪ್ರಕಟ ವೇಳೆ ನ್ಯಾಯಾಧೀಶರಿಂದ ಭಗವದ್ಗೀತೆ ಉಲ್ಲೇಖ!