ಖ್ಯಾತ ನೇತ್ರ ತಜ್ಞ ಭುಜಂಗ ಶೆಟ್ಟಿ 
ರಾಜ್ಯ

ಖ್ಯಾತ ನೇತ್ರ ತಜ್ಞ ಭುಜಂಗ ಶೆಟ್ಟಿ ನಿಧನ

ನಾರಾಯಣ ನೇತ್ರಾಯಲಯದ ಮುಖ್ಯಸ್ಥ ಭುಜಂಗ ಶೆಟ್ಟಿ (69) ಇಂದು ನಿಧನರಾದರು. 

ಬೆಂಗಳೂರು: ನಾರಾಯಣ ನೇತ್ರಾಯಲಯದ ಅಧ್ಯಕ್ಷ ಭುಜಂಗ ಶೆಟ್ಟಿ (69) ಇಂದು ನಿಧನರಾದರು. 

ಭುಜಂಗ ಶೆಟ್ಟಿ ದೇಶದ ಖ್ಯಾತ ನೇತ್ರ ತಜ್ಞರಾಗಿದ್ದರು. ಯಶವಂತಪುರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸಂಜೆ ಹೃದಯಾಘಾತ ಸಂಭವಿಸಿದ್ದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಇಂದು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ನೀಡಿ ಮನೆಗೆ ವಾಪಸ್ಸಾಗಿದ್ದ ಭುಜಂಗ ಶೆಟ್ಟಿ ಅವರಿಗೆ ಸಂಜೆ ತೀವ್ರ ಹೃದಯಾಘಾತ ಉಂಟಾಗಿತ್ತು. 

ಭುಜಂಗ ಶೆಟ್ಟಿ ಅವರು 1978 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಮಾಡಿದ್ದರು. 1982 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನ ಮಿಂಟೋ ಆಪ್ತಾಲ್ಮಿಕ್ ಆಸ್ಪತ್ರೆಯಲ್ಲಿ ನೇತ್ರಶಾಸ್ತ್ರದಲ್ಲಿ ರೆಸಿಡೆನ್ಸಿ ತರಬೇತಿ ಪಡೆದಿದ್ದರು. 80ರ ದಶಕದಲ್ಲಿ ಸಣ್ಣ ಕ್ಲಿನಿಕ್‌ನಲ್ಲಿ ನೇತ್ರ ಚಿಕಿಯ್ಸಾಲಯವನ್ನು ಪ್ರಾರಂಭಿಸಿದ ಡಾ. ಭುಜಂಗ ಶೆಟ್ಟಿ ನಾರಾಯಣ ನೇತ್ರಾಯಲದ ಅಧ್ಯಕ್ಷರಾಗಿದ್ದರು. 

ಭುಜಂಗ ಶೆಟ್ಟಿ ನಾರಾಯಣ ನೇತ್ರಾಲಯದಲ್ಲಿ ವಿವಿಧ ಉಪವಿಭಾಗಗಳ ಅಭಿವೃದ್ಧಿಯನ್ನು ಸಕ್ರಿಯವಾಗಿ ಪ್ರೋತ್ಸಾಹಿಸಿದ್ದಾರೆ ಮತ್ತು ನಾರಾಯಣ ನೇತ್ರಾಲಯವನ್ನು ಕರ್ನಾಟಕದ ಅತಿದೊಡ್ಡ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಾಗಿ ಪರಿವರ್ತಿಸಲು ಕಾರಣರಾಗಿದ್ದರು. ಕಣ್ಣಿನ ಪೊರೆ ಮತ್ತು ಫಾಕೋಎಮಲ್ಸಿಫಿಕೇಶನ್ ಶಸ್ತ್ರಚಿಕಿತ್ಸೆಯಲ್ಲಿ ನೈಪುಣ್ಯತೆ ಹೊಂದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT