ಸಿದ್ದರಾಮಯ್ಯ 
ರಾಜ್ಯ

ರೂ.2000 ನೋಟು ನಿಷೇಧ: ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ರೂ.2,000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ರೂ.2,000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಈಗ ರೂ.2000 ಮೌಲ್ಯದ ನೋಟುಗಳನ್ನು ನಿಷೇಧ ಮಾಡಿರುವ ಪ್ರಧಾನಿ ಮೋದಿಯವರು, 2016ರಲ್ಲಿ ರೂ.500 ಮತ್ತು ರೂ.1000 ನೋಟುಗಳನ್ನು ನಿಷೇಧ ಮಾಡಿದಾಗ ತಿಳಿಸಿದ್ದ ಯಾವ ಉದ್ದೇಶಗಳು ಈಡೇರಿವೆ ಎನ್ನುವುದನ್ನು ದೇಶದ ಜನರಿಗೆ ಮೊದಲು ತಿಳಿಸಬೇಕು ಎಂದು ಹೇಳಿದ್ದಾರೆ.

ಈಗ ರೂ.2000 ಮೌಲ್ಯದ ನೋಟು ನಿಷೇಧಿಸುವುದಿದ್ದರೆ 2016ರಲ್ಲಿ ಅದನ್ನು ಚಲಾವಣೆಗೆ ತಂದದ್ದು ಯಾಕೆ? ಯಾವ ಕಾರಣಕ್ಕಾಗಿ ಈಗ ಇದನ್ನು ನಿಷೇಧಿಸಲಾಗಿದೆ? ಕಪ್ಪು ಹಣವನ್ನು ನಿಯಂತ್ರಿಸುವ ನೋಟು ನಿಷೇಧ ಎಂಬ ಪ್ರಬಲ ಅಸ್ತ್ರವನ್ನು ಪ್ರಧಾನಿ ಮೋದಿಯವರು ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆಂದು ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ