ಸಾಂದರ್ಭಿಕ ಚಿತ್ರ 
ರಾಜ್ಯ

ಬ್ಯಾಂಕ್‌ನಿಂದ ಹಣ ಡ್ರಾ ಮಾಡಿಕೊಂಡು ಬರುತ್ತಿದ್ದ ಹಿರಿಯ ನಾಗರಿಕರ ಬ್ಯಾಗ್ ದೋಚಿದ ದುಷ್ಕರ್ಮಿಗಳು

ಶುಕ್ರವಾರ ಕುವೆಂಪುನಗರದ ಬ್ಯಾಂಕ್‌ನಿಂದ ಹಣ ಡ್ರಾ ಮಾಡಿಕೊಂಡು ಹಿಂದಿರುಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ವ್ಯಕ್ತಿಯೊಬ್ಬರಿಂದ 1.34 ಲಕ್ಷ ರೂ. ನಗದಿದ್ದ ಬ್ಯಾಗ್ ದೋಚಿ ಪರಾರಿಯಾಗಿದ್ದಾರೆ.

ಮೈಸೂರು: ಶುಕ್ರವಾರ ಕುವೆಂಪುನಗರದ ಬ್ಯಾಂಕ್‌ನಿಂದ ಹಣ ಡ್ರಾ ಮಾಡಿಕೊಂಡು ಹಿಂದಿರುಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ವ್ಯಕ್ತಿಯೊಬ್ಬರಿಂದ 1.34 ಲಕ್ಷ ರೂ. ನಗದಿದ್ದ ಬ್ಯಾಗ್ ದೋಚಿ ಪರಾರಿಯಾಗಿದ್ದಾರೆ.

ಕೆಎಚ್‌ಬಿ ಮೊದಲ ಹಂತದ ಕುವೆಂಪುನಗರ ನಿವಾಸಿ ಮದನ್ (63) ಅವರು ನೃಪತುಂಗ ರಸ್ತೆಯಲ್ಲಿರುವ ಎಸ್‌ಬಿಐ ಶಾಖೆಯಿಂದ ಹಣ ಡ್ರಾ ಮಾಡಿಕೊಂಡು ಮನೆ ಕಡೆಗೆ ಫುಟ್‌ಪಾತ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ಹಣವಿದ್ದ ಬ್ಯಾಗನ್ನು ಹಿಂದಿನಿಂದ ದೋಚಿದ್ದಾರೆ. ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಡಿಸಿಪಿ (ಅಪರಾಧ ಮತ್ತು ಸಂಚಾರ) ಎಸ್.ಜಾಹ್ನವಿ ಭೇಟಿ ನೀಡಿ, ವಾಣಿಜ್ಯ ಮಳಿಗೆಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಸಂಗ್ರಹಿಸಿದರು. ಪ್ರಕರಣ ದಾಖಲಿಸಿಕೊಂಡಿರುವ ಕುವೆಂಪುನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

‘ನೇಪಾಳಿಗರೇ, ನೀವು ಒಂಟಿಯಲ್ಲ, ನಾನು ನಿಮ್ಮೊಂದಿಗೆ ನಿಲ್ಲುತ್ತೇನೆ’: ಪ್ರವಾಹ ಪೀಡಿತ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಬಾಲಿವುಡ್ ನಟ ಸೋನು ಸೂದ್!

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್‌ ಅಭಿಷೇಕ್​ ಸೇರಿ ಇಬ್ಬರು ಸಾವು; Video