ಸಂಗ್ರಹ ಚಿತ್ರ 
ರಾಜ್ಯ

ನಿಯಮ ಉಲ್ಲಂಘಿಸಿ ಪ್ರಯಾಣಿಸುತ್ತಿದ್ದವರಿಗೆ ಶಾಕ್: ಏಪ್ರಿಲ್ ಒಂದೇ ತಿಂಗಳಲ್ಲಿ 6.56 ಲಕ್ಷ ರೂ. ದಂಡ ಸಂಗ್ರಹಿಸಿದ ಬಿಎಂಟಿಸಿ

ಟಿಕೆಟ್ ರಹಿತವಾಗಿ ಪ್ರಯಾಣಿಸುವವರನ್ನು ಪತ್ತೆ ಹಚ್ಚುವ ಕಾರ್ಯವನ್ನು ತೀವ್ರಗೊಳಿಸಿದ್ದ ಬಿಎಂಟಿಸಿಯು ಏಪ್ರಿಲ್ ಒಂದೇ ತಿಂಗಳಿನಲ್ಲಿ ದಂಡದ ರೂಪದಲ್ಲಿ ಒಟ್ಟು 6.56 ಲಕ್ಷ ರೂ ಹಣವನ್ನು ಸಂಗ್ರಹಿಸಿದೆ.

ಬೆಂಗಳೂರು: ಟಿಕೆಟ್ ರಹಿತವಾಗಿ ಪ್ರಯಾಣಿಸುವವರನ್ನು ಪತ್ತೆ ಹಚ್ಚುವ ಕಾರ್ಯವನ್ನು ತೀವ್ರಗೊಳಿಸಿದ್ದ ಬಿಎಂಟಿಸಿಯು ಏಪ್ರಿಲ್ ಒಂದೇ ತಿಂಗಳಿನಲ್ಲಿ ದಂಡದ ರೂಪದಲ್ಲಿ ಒಟ್ಟು 6.56 ಲಕ್ಷ ರೂ ಹಣವನ್ನು ಸಂಗ್ರಹಿಸಿದೆ.

ಬಿಎಂಟಿಸಿ ತಪಾಸಣಾ ಸಿಬ್ಬಂದಿ 14,670  ಟ್ರಿಪ್‌ಗಳ ಬಸ್ ಗಳನ್ನು ಪರಿಶೀಲನೆ ನಡೆಸಿದ್ದು, ಈ ವೇಳೆ 3,382 ಟಿಕೆಟ್ ರಹಿತ ಪ್ರಯಾಣಿಕರಿಗೆ ದಂಡ ವಿಧಿಸಿದ್ದಾರೆ. ಇದಲ್ಲದೆ, ಕರ್ತವ್ಯಲೋಪಕ್ಕಾಗಿ ಕಂಡಕ್ಟರ್‌ಗಳ ವಿರುದ್ಧ 1,340  ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಬಿಎಂಟಿಸಿ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಏಪ್ರಿಲ್‌ ತಿಂಗಳಲ್ಲಿ, ಮಹಿಳಾ ಪ್ರಯಾಣಿಕರಿಗೆ ಪ್ರತ್ಯೇಕವಾಗಿ ಮೀಸಲಾದ ಆಸನಗಳಲ್ಲಿ ಕುಳಿತು ಪ್ರಯಾಣಿಸಿದ್ದ 268  ಪುರುಷ ಪ್ರಯಾಣಿಕರಿಂದ 26,800 ರೂ.ಗಳ ದಂಡವನ್ನು ಸಂಗ್ರಹಿಸಿದ್ದಾರೆ. ಒಟ್ಟಾರೆಯಾಗಿ ಏಪ್ರಿಲ್ ತಿಂಗಳಲ್ಲಿ 6,56,740 ರೂ.ಗಳ ದಂಡವನ್ನು ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದಂಡ ಹಾಗೂ ಮುಜುಗರವನ್ನು ತಪ್ಪಿಸಲು ಸಾರ್ವಜನಿಕರು ಪ್ರಯಾಣಿಸುವಾಗ ಟಿಕೆಟ್ ಮತ್ತು ಪಾಸ್‌ಗಳನ್ನು ಖರೀದಿಸುವಂತೆ ನಿಗಮವು ಮನವಿ ಮಾಡಿಕೊಂಡಿದೆ. ಅಲ್ಲದೆ, ಮಹಿಳಾ ಪ್ರಯಾಣಿಕರಿಗೆ ಮೀಸಲಿರುವ ಆಸನದಲ್ಲಿ ಕುಳಿತು ಪ್ರಯಾಣಿಸದಂತೆಯೂ ಮನವಿ ಮಾಡಿಕೊಂಡಿದೆ. ಆದರೆ, ಕೆಲ ಪ್ರಯಾಣಿಕರು ನಿಯಮಗಳನ್ನು ಉಲ್ಲಂಘನೆ ಮಾಡುತ್ತಿರುವುದು ಕಂಡು ಬರುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT