ರಾಜ್ಯ

ಸಾರ್ವಜನಿಕರಿಗೆ ತಮ್ಮಿಂದಾಗುವ ಕಿರಿಕಿರಿ ತಪ್ಪಿಸಲು ಜೀರೋ ಟ್ರಾಫಿಕ್ ಬೇಡ ಎಂದ ಸಿಎಂ ಸಿದ್ದರಾಮಯ್ಯ

Lingaraj Badiger

ಬೆಂಗಳೂರು: ಸಾರ್ವಜನಿಕರಿಗೆ ತಮ್ಮಿಂದಾಗುವ ಕಿರಿಕಿರಿ ತಪ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 
ತಮ್ಮ ವಾಹನ ಸಂಚಾರಕ್ಕೆ ನೀಡಿರುವ ಜೀರೋ ಟ್ರಾಫಿಕ್‌ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ, ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ. ಜೀರೋ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸಿಎಂ ವಾಹನ ಸಂಚರಿಸುವ ಸಂದರ್ಭದಲ್ಲಿ ಅವರ ಸುಗಮ ಸಂಚಾರಕ್ಕೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಇದರಿಂದ ಸಿಗ್ನಲ್‌ಗಳಲ್ಲಿ ವಾಹನ ಸವಾರರು ಹತ್ತಾರು ನಿಮಿಷ ಕಾಯಬೇಕಾಗುತ್ತದೆ. ಇದು ಸಾರ್ವಜಕರಿಗೆ ತೊಂದರೆ ಹಾಗೂ ಸಂಚಾರ ದಟ್ಟಣೆಗೆ ಕಾರಣವಾಗುತ್ತದೆ. ಇದರಿಂದ ಎಚ್ಚೆತ್ತುಕೊಂಡ ಸಿದ್ದರಾಮಯ್ಯ ಅವರು ತಮಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡ ಎಂದು ಹೇಳಿದ್ದಾರೆ.

SCROLL FOR NEXT