ಕ್ಯಾಬ್ ಡ್ರೈವರ್ ಹರೀಶ್ ಮತ್ತು ಮಳೆ ನೀರು ದುರಂತ 
ರಾಜ್ಯ

ಬೆಂಗಳೂರು ಮಳೆ: ಕೆಆರ್ ಸರ್ಕಲ್ ಅಂಡರ್ ಪಾಸ್ ನಲ್ಲಿ ಯುವತಿ ಸಾವು, ಕ್ಯಾಬ್ ಚಾಲಕನ ಬಂಧನ

ಬೆಂಗಳೂರು ನಗರದ ಕೆಆರ್​ ಸರ್ಕಲ್​ ಅಂಡರ್​ಪಾಸ್​ನಲ್ಲಿ ಕಾರು ಮುಳುಗಡೆಯಾಗಿ ಟೆಕ್ಕಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಬೆಂಗಳೂರು ನಗರದ ಕೆಆರ್​ ಸರ್ಕಲ್​ ಅಂಡರ್​ಪಾಸ್​ನಲ್ಲಿ ಕಾರು ಮುಳುಗಡೆಯಾಗಿ ಟೆಕ್ಕಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ನಗರದ ಕೆಆರ್​ ಸರ್ಕಲ್​ ಅಂಡರ್​ಪಾಸ್​ನಲ್ಲಿ (KR Circle Underpass tragedy) ಕಾರು ಮುಳುಗಡೆಯಾಗಿ ಟೆಕ್ಕಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಕಾರು ಚಾಲಕನನ್ನು ಹಲಸೂರು ಗೇಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಾರು ಚಾಲಕ ಹರೀಶ್ ಎಂಬಾತನನ್ನು ಹಲಸೂರು ಗೇಟ್ ಠಾಣಾ ಪೊಲೀಸರು ಬಂಧಿಸಿದ್ದು, ಮೃತ ಯುವತಿ ಸಹೋದರ ನೀಡಿದ ದೂರಿನ ಅನ್ವಯ ಕ್ಯಾಬ್ ಚಾಲಕ ಹರೀಶ್ ಮತ್ತು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ಹಾಕಲಾಗಿದೆ ಎಂದು ತಿಳಿದುಬಂದಿದೆ.

ಕಾರಿನಲ್ಲಿದ್ದ ಪ್ರಯಾಣಿಕರು ಬೇಡ ಎಂದು ಹೇಳಿದರೂ ಕೇಳದ ಚಾಲಕ ಹರೀಶ್, ನೀರು ತುಂಬಿದ್ದ ಅಂಡರ್ ಪಾಸ್​ನಲ್ಲಿ ಕಾರು ಚಲಾಯಿಸಿದ್ದಾನೆ. ಈ ವೇಳೆ ಕಾರಿನ ಬಾಗಿಲು ಬಂದ್ ಆದ ಹಿನ್ನೆಲೆ ಪ್ರಯಾಣಿಕರು ಕಾರಿನಿಂದ ಇಳಿಯಲು ಯತ್ನಿಸಿದಾಗ ಹರೀಶ್, ಬೇಡ ತಾನೇ ಕಾರ್ ಆನ್ ಮಾಡಿ ಕರೆದೊಯ್ಯುವುದಾಗಿ ಹೇಳಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ದೂರಿನಲ್ಲಿ ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯವೂ ಉಲ್ಲೇಖ
ಅಂತೆಯೇ ಬಿಬಿಎಂಪಿ ಬೆಜವಾಬ್ದಾರಿಗೆ ಅಂಡರ್ ಪಾಸ್​ನಲ್ಲಿ ಮಳೆ ನೀರು ತುಂಬಿದೆ ಎಂದು ಹೇಳಲಾಗಿದ್ದು ಈ ಬಗ್ಗೆಯೂ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಭಾನುರೇಖಾ ಸಾವಿಗೆ ಚಾಲಕ ಹರೀಶ್, ಬಿಬಿಎಂಪಿ ಕಾರಣ ಎಂದು ಮೃತಳ ಸಹೋದರ ಬಿಬಿಎಂಪಿ ಹಾಗೂ ಕಾರ್ ಚಾಲಕನ ವಿರುದ್ಧ ದೂರು ನೀಡಿದ್ದರು. ಅದರಂತೆ ಕಾರು ಚಾಲಕನ್ನು ಬಂಧಿಸಲಾಗಿದೆ. ಮಳೆ ಬರುತ್ತದೆ ಎಂಬ ಮುನ್ಸೂಚನೆ ಇದ್ದರೂ ಮುನ್ನೆಚ್ಚರಿಕೆ ಕೈಗೊಳ್ಳದ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕ್ರಮವಾಗುವುದೇ ಕಾದುನೋಡಬೇಕಿದೆ.

ಏನಿದು ಘಟನೆ?
ನಿನ್ನೆ ಸಂಜೆ ಸುರಿದ ಭಾರೀ ಮಳೆಗೆ ಕೆಆರ್ ಸರ್ಕಲ್​ನ ಅಂಡರ್​ಪಾಸ್​ನಲ್ಲಿ ಸುಮಾರು 5 ಅಡಿಯಷ್ಟು ಎತ್ತರಕ್ಕೆ ನೀರು ತಿಂಬಿತ್ತು. ಹೀಗಿದ್ದರೂ ಆರು ಮಂದಿ ಪ್ರಯಾಣಿಸುತ್ತಿದ್ದ ಕಾರು ಈ ಅಂಡರ್​ಪಾಸ್​ನಲ್ಲಿ ಹೋಗಿ ಮುಳುಗಿತ್ತು. ಕೂಡಲೇ ಎಚ್ಚೆತ್ತ ಸ್ಥಳೀಯರು, ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯ ನಡೆಸಿ ಆರು ಮಂದಿಯನ್ನು ರಕ್ಷಿಸಿದ್ದರು. ಈ ಪೈಕಿ ತೀವ್ರ ಅಸ್ವಸ್ಥಗೊಂಡಿದ್ದ ಬಾನುರೇಖಾ ಸಾವನ್ನಪ್ಪಿದ್ದಳು. ಘಟನೆ ನಂತರ ಕಾರು ಚಾಲಕ ಪರಾರಿಯಾಗಿದ್ದನು. ಈ ಘಟನೆ ನಡೆದ ನಂತರ ಅದೇ ನೀರಿನಲ್ಲಿ ಆಟೋವೊಂದು ಮುಳುಗಡೆಯಾಗಿತ್ತು. ಆಟೋ ಚಾಲಕ ಬಚಾವ್ ಆಗಿದ್ದರೆ ಮಹಿಳೆ ಸಂಕಷ್ಟಕ್ಕೆ ಸಿಲುಕಿದ್ದಳು. ಈಕೆಯನ್ನೂ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್