ರಾಜ್ಯ

ಮಳೆ ಹಾನಿ ಸಂಬಂಧಿತ ದೂರುಗಳನ್ನು ಕೂಡಲೇ ಪರಿಹರಿಸಿ: ಬಿಬಿಎಂಪಿ ಮುಖ್ಯ ಆಯುಕ್ತರ ಸೂಚನೆ

Nagaraja AB

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಹಾನಿ ಸಂಬಂಧಿಸಿದ ದೂರುಗಳ ವಿವರವನ್ನು ಪರಿಶೀಲಿಸಿ ತ್ವರಿತಗತಿಯಲ್ಲಿ ಪರಿಹರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚಿಸಿದ್ದಾರೆ.

ಪಾಲಿಕೆ ಕೇಂದ್ರ ಕಚೇರಿಯಯಲ್ಲಿರುವ ನಿಯಂತ್ರಣ ಕೇಂದ್ರಕ್ಕೆ ಭೇಟಿ ನೀಡಿ ಸಹಾಯವಾಣಿ ಮುಖಾಂತರ ಬಂದಿರುವ ವಲಯವಾರು ಮಳೆಹಾನಿ ಸಂಬಂಧಿಸಿದ ದೂರುಗಳನ್ನು ಪರಿಶೀಲಿಸಿದರು. ಇದರಲ್ಲಿ ಸುಮಾರು 70 ದೂರುಗಳು ಬಂದಿದ್ದು, ಮೂರು ದಿನಗಳೊಳಗಾಗಿ ಇವುಗಳನ್ನು ಪರಿಹರಿಸಬೇಕು, ಇಲ್ಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ ಶಿಸ್ತು ಕ್ರಮ ವಹಿಸುವುದಾಗಿ ತಿಳಿಸಿದರು.

ವಿಪತ್ತು ನಿರ್ವಹಣೆಗಾಗಿ ಬಿಬಿಎಂಪಿ, ಬೆಸ್ಕಾಂ, ಜಲಮಂಡಳಿ ಹಾಗೂ ಪೊಲೀಸ್ ಇಲಾಖೆಯಿಂದ ನೋಡಲ್ ಅಧಿಕಾರಿಯನ್ನು ತಕ್ಷಣವೇ ನೇಮಿಸಲು ಸೂಚಿಸಿದರು. ಮಳೆ ಹಾನಿ ಸಂಬಂಧ ದೂರಿನ ಮಾಹಿತಿ ಹಾಗೂ ತೆಗೆದುಕೊಂಡಿರುವ ಮಾಹಿತಿಯನ್ನು ತಮ್ಮ ಗಮನಕ್ಕೆ ತರಲು ಎಲ್ಲಾ ಅಧಿಕಾರಿಗಳಿಗೆ ಸೂಚಿಸಿದರು.

SCROLL FOR NEXT