ಪೊಲೀಸ್ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತಿತರರು 
ರಾಜ್ಯ

ಸಾಮಾಜಿಕ ಸಾಮರಸ್ಯ ಕದಡದಂತೆ ಕಟ್ಟೆಚ್ಚರ ವಹಿಸಿ: ಪೊಲೀಸ್ ಅಧಿಕಾರಿಗಳಿಗೆ ಸಿಎಂ, ಡಿಸಿಎಂ ಖಡಕ್ ಸೂಚನೆ

ಬೆಂಗಳೂರು ನಗರದ ಸಂಚಾರ ಸಮಸ್ಯೆ ನಿವಾರಣೆ ಹಾಗೂ ಸೈಬರ್‌ ಅಪರಾಧಗಳ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರು: ಬೆಂಗಳೂರು ನಗರದ ಸಂಚಾರ ಸಮಸ್ಯೆ ನಿವಾರಣೆ ಹಾಗೂ ಸೈಬರ್‌ ಅಪರಾಧಗಳ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜನ ಬದಲಾವಣೆಯ ನಿರೀಕ್ಷೆಯೊಂದಿಗೆ ಹೊಸ ಸರ್ಕಾರವನ್ನು ಚುನಾಯಿಸಿದ್ದಾರೆ. ಅವರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು ಎಂದರು.

ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆ ಕುರಿತು ಪ್ರತ್ಯೇಕ ಸಭೆ ನಡೆಸಿ ಚರ್ಚಿಸುವುದಾಗಿ ತಿಳಿಸಿದ ಮುಖ್ಯಮಂತ್ರಿ, ಸಾಮಾಜಿಕ ಜಾಲತಾಣಗಳಲ್ಲಿ ಸಾಮರಸ್ಯ ಕದಡುವಂತಹ, ತೇಜೋವಧೆ ಮಾಡುವ, ಪ್ರಚೋದನಕಾರಿ ಪೋಸ್ಟ್‌ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು. ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟಬೇಕು. ಹೊಯ್ಸಳ ಗಸ್ತುವಾಹನ ಸದಾ ಜಾಗೃತವಾಗಿರುವ ಮೂಲಕ ಅಪರಾಧಗಳನ್ನು ತಡೆಗಟ್ಟಬೇಕು ಎಂದು ಸೂಚಿಸಿದರು.

ಪೊಲೀಸ್‌ ಠಾಣೆಗಳಿಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಪೊಲೀಸ್‌ ಠಾಣೆಗೆ ಸಮಸ್ಯೆ ಪರಿಹಾರಕ್ಕಾಗಿ ಬರುವ ಸಾರ್ವಜನಿಕರನ್ನು ಅಪರಾಧಿಗಳಂತೆ ಕಾಣದೆ ಸೌಜನ್ಯದಿಂದ ವರ್ತಿಸಬೇಕು. ಅವರ ಸಮಸ್ಯೆಗಳನ್ನು ಬಗೆಹರಿಸಿ ನ್ಯಾಯ ಒದಗಿಸಬೇಕು, ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್‌ ಅಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಗೂಂಡಾಗಿರಿ, ಅನಧಿಕೃತ ಕ್ಲಬ್‌ಗಳ ಚಟುವಟಿಕೆಗಳು, ಡ್ರಗ್‌ ಮಾಫಿಯಾ ವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಇವುಗಳಿಗೆ ಅವಕಾಶ ನೀಡಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ಉತ್ತಮವಾಗಿ ಕೆಲಸ ಮಾಡುವವರಿಗೆ ಶಹಬ್ಬಾಶ್‌ಗಿರಿ ನೀಡುತ್ತೇವೆ. ಕರ್ತವ್ಯಲೋಪ ಎಸಗಿದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಎಚ್ಚರಿಕೆ ನೀಡಿದರು. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವರಾದ ಕೆ.ಜೆ. ಜಾರ್ಜ್‌, ಕೆ.ಹೆಚ್. ಮುನಿಯಪ್ಪ, ಬಿ.ಝಡ್. ಜಮೀರ್‌ ಅಹ್ಮದ್‌ ಖಾನ್‌, ಎಂ.ಪಿ. ಪಾಟೀಲ್‌, ಸತೀಶ್‌ ಜಾರಕಿಹೊಳಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌ ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT