ಡಿಸಿ, ಸಿಇಒಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ 
ರಾಜ್ಯ

ಮುಂಗಾರು ಪೂರ್ವ ಮಳೆಯಿಂದ ಹಾನಿ: ಬೆಳೆ ರಕ್ಷಣೆಗೆ ಮುಂಜಾಗ್ರತಾ ಕ್ರಮ ವಹಿಸಿ; ಡಿಸಿ, ಸಿಇಒಗಳಿಗೆ ಮುಖ್ಯಮಂತ್ರಿ ಸೂಚನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಿಡಿಯೋ ಸಂವಾದ ನಡೆಸಿ, ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಿಡಿಯೋ ಸಂವಾದ ನಡೆಸಿ, ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ರಾಜ್ಯದಲ್ಲಿ ಜೂನ್ ನಲ್ಲಿ ಮುಂಗಾರು ಮಳೆ ಆರಂಭವಾಗಲಿದ್ದು, ಏಪ್ರಿಲ್‌ ತಿಂಗಳಿನಲ್ಲಿಯೇ ಮುಂಗಾರು ಪೂರ್ವ ಗಾಳಿ ಮಳೆಯಿಂದ ಮರಗಳು ಬಿದ್ದು ಹೋಗಿವೆ. ಸಿಡಿಲು, ಆಲಿಕಲ್ಲು ಮಳೆಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಅನಾಹುತಗಳನ್ನು ತಡೆಗಟ್ಟಲು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಎಂದು ಸೂಚಿಸಲಾಯಿತು.

ಜಿಲ್ಲಾಧಿಕಾರಿಗಳ ಬಳಿಯೇ ಅನುದಾನ ಲಭ್ಯವಿದೆ. ಅಗತ್ಯವಿದ್ದರೆ, ಕೇಳಬೇಕು. ಪರಿಹಾರ ಕ್ರಮ ಕೈಗೊಳ್ಳಲು ತೊಂದರೆ ಇಲ್ಲ. ಕೃಷಿ ಅಧಿಕಾರಿಗಳು ಬಿತ್ತನೆ ಚಟುವಟಿಕೆಗೆ ಅಗತ್ಯವಿರುವ ಬೀಜ, ಗೊಬ್ಬರ, ಕೀಟನಾಶಕಗಳನ್ನು ಒದಗಿಸಬೇಕು. ಹಾವೇರಿ ಗೋಲಿಬಾರಿನಂತಹ ಘಟನೆ ಮರುಕಳಿಸಬಾರದು. ಮಳೆಯಿಂದ ಮರಗಳು, ವಿದ್ಯುತ್ ಕಂಬಗಳು ಧರೆಗುರಳಿ ಬಿದ್ದರೆ ಕೂಡಲೇ ಅವುಗಳನ್ನು ತೆರವು ಗೊಳಿಸಬೇಕು. ಟ್ರಾನ್‌ಫಾರ್ಮರ್‌, ಸೇತುವೆ ಹಾಳಾಗಿದ್ದರೆ, ಶಾಲಾ ಕೊಠಡಿಗಳು ಶಿಥಿಲ ಆಗಿದ್ದರೆ ಅಗತ್ಯ ಕ್ರಮ ಕೈಗೊಳ್ಳಬೇಕು. ಮುನ್ನೆಚ್ಚರಿಕೆ ತೆಗೆದುಕೊಂಡರೆ ಅನಾಹುತ ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿ ತಿಳಿಸಿದರು. 

ಕಚೇರಿಯಲ್ಲೇ ಕುಳಿತು ಕೆಲಸ ಮಾಡಿದರೆ ಆಗದು. ಫೀಲ್ಡ್‌ ಗೆ ಹೋಗಬೇಕು. ಕುಳಿತಲ್ಲೇ ಕುಳಿತು ಪರಿಣಾಮಕಾರಿಯಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಾಗದು. ಅದಕ್ಕೇ ಮುಂಚಿತವಾಗಿ ಸಭೆ ಕರೆಯಲಾಗಿದೆ. ಯಾವುದೇ ಕಾರಣಕ್ಕೆ ಕರ್ತವ್ಯ ಲೋಪ ಆಗಬಾರದು. ಬೇಜವಾಬ್ದಾರಿತನದಿಂದ ಅನಾಹುತಗಳಾದರೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು. ನೆಪ ಹೇಳಿಕೊಂಡು ಪರಿಹಾರ ಕ್ರಮ ವಿಳಂಬ ಮಾಡುವುದು ಸರಿಯಲ್ಲ. ಯಾವುದೇ ಕಾರಣಕ್ಕೆ ಲೋಪ ಆಗಬಾರದು. ಒಂದು ವೇಳೆ ಲೋಪ ಎಸಗಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜನ ಸರ್ಕಾರದಿಂದ ಬದಲಾವಣೆ ಬಯಸಿದ್ದಾರೆ. ಸರ್ಕಾರಕ್ಕೆ ಹೊಸ ಇಮೇಜ್‌ ಕೊಡಲೇಬೇಕು. ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವ ಸರ್ಕಾರ ಬಂದಿದೆ ಎಂಬ ಸಂದೇಶ ಹೋಗಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. 

ಜಿಲ್ಲಾಧಿಕಾರಿಗಳು, ಸಿಇಒ ಗಳದ್ದು ಜವಾಬ್ದಾರಿಯುತ ಸ್ಥಾನ. ಜೊತೆಗೆ ಪೊಲೀಸ್‌ ವರಿಷ್ಠಾಧಿಕಾರಿಗಳ ಹೊಣೆಯೂ ಪ್ರಮುಖವಾದದ್ದು. ಕರ್ನಾಟಕದ ಜನತೆ ಬದಲಾವಣೆ ಬಯಸಿದ್ದಾರೆ. ಆಲಸ್ಯ ಬಿಟ್ಟು ಕೆಲಸ ಮಾಡಿ. ಬಹಳ ಜನ ಜಿಲ್ಲಾಧಿಕಾರಿಗಳು ತಾಲ್ಲೂಕುಗಳಿಗೆ ಭೇಟಿ ನೀಡಿರುವುದಿಲ್ಲ. ಇನ್ನು ಮುಂದೆ ಇಂತಹುದಕ್ಕೆ ಅವಕಾಶವಿಲ್ಲ. ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಕ್ಷೇತ್ರ ಭೇಟಿ ಮಾಡಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು. 

ಕಳೆದ ಕೆಲವು ವರ್ಷಗಳಿಂದ ಪ್ರವಾಹ ನೋಡುತ್ತಾ ಇದ್ದೀರಿ. ಹವಾಮಾನ ಇಲಾಖೆ ಸಂಪರ್ಕ- ಮುನ್ಸೂಚನೆ ಅರಿತು ಕೆಲಸ ಮಾಡಿ. ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಸಲಕರಣೆಗಳನ್ನು ಸಿದ್ಧಪಡಿಸಿಟ್ಟುಕೊಳ್ಳಿ. ಪ್ರವಾಹ ಬರುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ. ಬೆಳೆಹಾನಿ ಮಾಹಿತಿ ಇರಬೇಕು. ಅನುದಾನ ಅಗತ್ಯವಿದ್ದಲ್ಲಿ ಮನವಿ ಸಲ್ಲಿಸಿ ಬಿಡುಗಡೆ ಮಾಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT