ಕರ್ನಾಟಕ ಹೈಕೋರ್ಟ್ 
ರಾಜ್ಯ

ಕಾವೇರಿ ತಂತ್ರಾಂಶ ಜಾರಿಯಲ್ಲಿ ಸಮಸ್ಯೆ: ಸೂಕ್ತ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಲು ಹೈಕೋರ್ಟ್‌ ಸೂಚನೆ

ಅಡೆತಡೆ ರಹಿತ ನೋಂದಣಿ ವ್ಯವಸ್ಥೆ ಒದಗಿಸುವ ಉದ್ದೇಶದ ಕಾವೇರಿ 2.0 ತಂತ್ರಾಂಶ ಜಾರಿಯಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಸಂಬಂಧಿಸಿದ ಪ್ರಾಧಿಕಾರಕ್ಕೆ ವಿವರವಾದ ಮನವಿ ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ನಿರ್ದೇಶಿಸಿದೆ.

ಬೆಂಗಳೂರು: ಅಡೆತಡೆ ರಹಿತ ನೋಂದಣಿ ವ್ಯವಸ್ಥೆ ಒದಗಿಸುವ ಉದ್ದೇಶದ ಕಾವೇರಿ 2.0 ತಂತ್ರಾಂಶ ಜಾರಿಯಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಸಂಬಂಧಿಸಿದ ಪ್ರಾಧಿಕಾರಕ್ಕೆ ವಿವರವಾದ ಮನವಿ ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ನಿರ್ದೇಶಿಸಿದೆ.

ತಂತ್ರಾಂಶದ ಜಾರಿಯಲ್ಲಿ ಉಂಟಾಗುತ್ತಿರುವ ಸಮಸ್ಯೆ ಬಗ್ಗೆ ಬಿ ರಾಮಾಚಾರ್ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ ಜಿ ಎಸ್ ಕಮಲ್ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು. ಅರ್ಜಿದಾರರ ಪರ ವಕೀಲರು, ತಂತ್ರಾಂಶ ಅನುಷ್ಠಾನದಿಂದ ಜನರಿಗೆ ತೊಂದರೆ ಆಗುತ್ತಿದೆ. ನೋಂದಣಿಗೆ ಹಾಜರುಪಡಿಸಿರುವ ದಸ್ತಾವೇಜನ್ನು ತಿರಸ್ಕರಿಸಲು ಅಥವಾ ರದ್ದು ಪಡಿಸಲು ಅವಕಾಶ ನೀಡಲಾಗಿದೆ. ಆದರೆ, ನಿಯಮದ ಪ್ರಕಾರ ಆ ರೀತಿ ನೋಂದಣಿಗೆ ಸಲ್ಲಿಸಿದ ದಸ್ತಾವೇಜನ್ನು ತಿರಸ್ಕರಿಸಲು ಅವಕಾಶವಿಲ್ಲ. ಈ ಕುರಿತು ನ್ಯಾಯಾಲಯಗಳ ಹಲವು ಆದೇಶಗಳಿವೆ ಎಂದರು.

ಆದರೆ, ದಾಖಲೆಗಳನ್ನು ಪರಿಶೀಲಿಸಿದ ಪೀಠವು ಈ ವಿಷಯದ ಬಗ್ಗೆ ಅರ್ಜಿದಾರರು ಮೇ 2ರಂದು ಸಂಬಂಧಪಟ್ಟ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ. ಆನಂತರ ಅದರ ಉತ್ತರಕ್ಕೂ ಕಾಯದೇ ಮೇ 5ಕ್ಕೆ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಸಲ್ಲಿಸಲಾಗಿದೆ. ಇಲಾಖೆಗೆ ಮನವಿಗೆ ಉತ್ತರಿಸಲು ಕಾಲಾವಕಾಶ ನೀಡದೆ ಅರ್ಜಿ ಸಲ್ಲಿಸಿರುವುದು ಸರಿಯಲ್ಲ ಎಂದಿತು. ಅಲ್ಲದೆ, ಅರ್ಜಿದಾರರು ಕಾವೇರಿ 2.0 ತಂತ್ರಾಂಶ ಜಾರಿಯಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆಯೂ ಸರಿಯಾದ ಮಾಹಿತಿಯನ್ನು ನೀಡಿಲ್ಲ. ಆ ಬಗ್ಗೆ ವಿವರ ನೀಡುವಂತೆ ಸೂಚಿಸಿತು. ಅರ್ಜಿದಾರರ ಪರ ವಕೀಲರು ಸರಿಯಾದ ಉತ್ತರ ನೀಡಲಿಲ್ಲ.

ಆಗ ಸರ್ಕಾರಿ ವಕೀಲರು, ಕಾವೇರಿ 2.0 ತಂತ್ರಾಂಶ ಪಾರದರ್ಶಕ ವ್ಯವಸ್ಥೆಯಾಗಿದ್ದು, ರಾಜ್ಯಾದ್ಯಂತ ಈಗಾಗಲೇ 152 ಉಪ ನೋಂದಣಾಕಾರಿಗಳ ಕಚೇರಿಗಳಲ್ಲಿ ಜಾರಿಯಾಗಿದೆ. ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ ಎಂದರು. ಕೊನೆಗೆ ನ್ಯಾಯಾಲಯ ಅರ್ಜಿದಾರರಿಗೆ ಪಿಐಎಲ್ ಹಿಂಪಡೆಯಲು ಸೂಚನೆ ನೀಡಿತು ಮತ್ತು ಅದಕ್ಕೆ ಅರ್ಜಿದಾರರ ಪರ ವಕೀಲರು ಒಪ್ಪಿದರು. ಆನಂತರ ಇದನ್ನು ದಾಖಲಿಸಿಕೊಂಡ ಪೀಠವು ಸಂಬಂಧಿಸಿದ ಪ್ರಾಧಿಕಾರಕ್ಕೆ ವಿವರವಾದ ಮನವಿ ಸಲ್ಲಿಸುವಂತೆ ನಿರ್ದೇಶನ ನೀಡಿ ಅರ್ಜಿಯನ್ನು ವಿಲೇವಾರಿ ಮಾಡಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT