ಹಿಂದೂ ಸಂಘಟನೆಯ ಧ್ವಜ (ಸಾಂಕೇತಿಕ ಚಿತ್ರ) 
ರಾಜ್ಯ

ಬಂಟ್ವಾಳ: ಬಿಜೆಪಿ, ಬಜರಂಗದಳ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ, ಬಜರಂಗದಳ ಕಾರ್ಯಕರ್ತರ ಮೇಲೆ ಅನಾಮಿಕ ದುಷ್ಕರ್ಮಿಗಳು ಮೇ.24 ರಂದು ಮಾರಕಾಸ್ತ್ರ (ಖಡ್ಗಗಳಿಂದ) ಮಾರಣಾಂತಿಕ ದಾಳಿ ನಡೆಸಿದ್ದಾರೆ. 

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ, ಬಜರಂಗದಳ ಕಾರ್ಯಕರ್ತರ ಮೇಲೆ ಅನಾಮಿಕ ದುಷ್ಕರ್ಮಿಗಳು ಮೇ.24 ರಂದು ಮಾರಕಾಸ್ತ್ರ (ಖಡ್ಗಗಳಿಂದ) ಮಾರಣಾಂತಿಕ ದಾಳಿ ನಡೆಸಿದ್ದಾರೆ. 

ಘಟನೆಯಲ್ಲಿ, ಬಜರಂಗದಳದ ಸ್ಥಳೀಯ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಂಟ್ವಾಳ ತಾಲೂಕಿನ ಮಾಣಿ ಬಳಿ ಈ ಘಟನೆ ನಡೆದಿದೆ. ಈ ಪ್ರದೇಶದಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಬಿಜೆಪಿಯ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಶಂಕಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಂಟು ಸ್ಥಾನಗಳ ಪೈಕಿ ಆರರಲ್ಲಿ ಬಿಜೆಪಿ ಗೆದ್ದಿದೆ.

ಕಾಂಗ್ರೆಸ್ ನವರು ಈ ದಾಳಿ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ದಾಳಿಕೋರರು ಓಮ್ನಿ ವಾಹನದಲ್ಲಿ ಬಂದಿದ್ದು, ಅವರು ಸಂತ್ರಸ್ತರಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ ಕೆಳಗೆ ಬೀಳುತ್ತಿದ್ದಂತೆ ದಾಳಿಕೋರರು ಕತ್ತಿಗಳಿಂದ ಹಲ್ಲೆ ನಡೆಸಿದ್ದಾರೆ. ಮಹೇಂದ್ರ ಮತ್ತು ಪ್ರಶಾಂತ್ ಅವರ ತಲೆ ಮತ್ತು ಕಾಲಿಗೆ ಗಾಯಗಳಾಗಿವೆ.

ಮಂಗಳೂರಿನ ಕೆಲ ನಿವಾಸಿಗಳಾದ ರಾಕೇಶ್, ಮಣಿ ಮಂಜುನಾಥ್ ಮತ್ತು ಮಹಾಲಿಂಗ ಎಂಬುವರು ದಾಳಿ ನಡೆಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಆರೋಪಿಗಳ ಪತ್ತೆಗೆ ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT