ಡಿಕೆ.ಶಿವಕುಮಾರ್ 
ರಾಜ್ಯ

ನಾನೇ ಕ್ಷೇತ್ರಕ್ಕೆ ಬರುತ್ತೇನೆ ಬೆಂಗಳೂರಿಗೆ ಬರಬೇಡಿ: ಕನಕಪುರ ಕ್ಷೇತ್ರದ ಅಭಿಮಾನಿಗಳಿಗೆ ಡಿಕೆ.ಶಿವಕುಮಾರ್ ಮನವಿ

ನಾನೇ ಕನಕಪುರಕ್ಕೆ ಬಂದು ನಿಮಗೆ ಕೃತಜ್ಞತೆ ಸಲ್ಲಿಸಿ ಅಭಿನಂದನೆ ಸ್ವೀಕರಿಸುತ್ತೇನೆ. ನೀವ್ಯಾರೂ ಬೆಂಗಳೂರಿಗೆ ಬರುವ ತೊಂದರೆ ತೆಗೆದುಕೊಳ್ಳದಿರಿ ಎಂದು ಕನಕಪುರ ಕ್ಷೇತ್ರದ ಅಭಿಮಾನಿಗಳು, ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರು: ನಾನೇ ಕನಕಪುರಕ್ಕೆ ಬಂದು ನಿಮಗೆ ಕೃತಜ್ಞತೆ ಸಲ್ಲಿಸಿ ಅಭಿನಂದನೆ ಸ್ವೀಕರಿಸುತ್ತೇನೆ. ನೀವ್ಯಾರೂ ಬೆಂಗಳೂರಿಗೆ ಬರುವ ತೊಂದರೆ ತೆಗೆದುಕೊಳ್ಳದಿರಿ ಎಂದು ಕನಕಪುರ ಕ್ಷೇತ್ರದ ಅಭಿಮಾನಿಗಳು, ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿಕೊಂಡಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕಳೆದ ಮೂರ್ನಾಲ್ಕು ದಿನಗಳಿಂದ ಕನಕಪುರ ಕ್ಷೇತ್ರದ ಅನೇಕರು ಅಪಾರ ಸಂಖ್ಯೆಯಲ್ಲಿ ಬೆಂಗಳೂರಿಗೆ ಬಂದು ಅಭಿನಂದನೆ ಸಲ್ಲಿಸುತ್ತಿದ್ದಾರೆ. ನನ್ನ ಕಳಕಳಿಯ ಮನವಿಯೇನೆಂದರೆ ತಾವುಗಳು ಬೆಂಗಳೂರಿಗೆ ಬರುವ ತೊಂದರೆ ತೆಗೆದುಕೊಳ್ಳುವುದು ಬೇಡ. ದೆಹಲಿ ಪ್ರವಾಸದ ನಂತರ ನಾನೇ ಖುದ್ದಾಗಿ ಕನಕಪುರಕ್ಕೆ ಬರುತ್ತಿದ್ದು, ತಮ್ಮನ್ನು ಭೇಟಿಯಾಗಿ ಅಭಿನಂದನೆ ಸ್ವೀಕರಿಸುತ್ತೇನೆ. ನಿಮ್ಮ ಮನೆಮಗನ ಮೇಲೆ ಸದಾ ನಿಮ್ಮ ಆಶೀರ್ವಾದವಿರಲಿ, ಧನ್ಯವಾದಗಳು ಎಂದು ಹೇಳಿದ್ದಾರೆ.

ಮೂರು ದಿನಗಳ ವಿಧಾನಸಭಾ ಕಲಾಪದ ಹಿನ್ನೆಲೆಯಲ್ಲಿ ಕನಕಪುರಕ್ಕೆ ತೆರಳಲು ಡಿ.ಕೆ.ಶಿವಕುಮಾರ್ ಅವರಿಗೆ ಸಾಧ್ಯವಾಗದ ಕಾರಣ ಅವರ ಕ್ಷೇತ್ರದ ಅಭಿಮಾನಿಗಳು ಭೇಟಿಗಾಗಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಸದಾಶಿವನಗರದ ಡಿಕೆಶಿ ನಿವಾಸ ಹಾಗೂ ವಿಧಾನಸೌಧಕ್ಕೆ ಆಗಮಿಸಿ ಅವರ ಭೇಟಿಗಾಗಿ ಪ್ರಯತ್ನಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯದೊತ್ತಡದ ನಡುವೆ ಭೇಟಿಯಾಗಲು ಸಾಧ್ಯವಾಗದೇ ಇದ್ದುದರಿಂದ ತಾವೇ ಕ್ಷೇತ್ರಕ್ಕೆ ಬರುವುದಾಗಿ ಉಪಮುಖ್ಯಮಂತ್ರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Parliament special session: ಅಗ್ನಿ ಪರೀಕ್ಷೆಯಲ್ಲಿ ಮೋದಿ ಸರ್ಕಾರ, ಇಂದು ಪಾಸ್ ಆಗುತ್ತಾ ಪ್ರಮುಖ ಮಸೂದೆಗಳು?

'ಇರಾನ್ ತನ್ನ ಸಮೃದ್ಧ ಯುರೇನಿಯಂ ಸಂಗ್ರಹವನ್ನು ಹಸ್ತಾಂತರಿಸಲು ಒಪ್ಪಿಕೊಂಡಿದೆ, ಶಾಂತಿ ಒಪ್ಪಂದ ಹತ್ತಿರದಲ್ಲಿದೆ': Donald Trump

ಇನ್ಮುಂದೆ ನೇಚರ್ ಗೈಡ್, GPS ವಾಕಿಟಾಕಿ ಇಲ್ಲದೆ ಯಾರಿಗೂ ಚಾರಣಕ್ಕೆ ಅವಕಾಶವಿಲ್ಲ: SOP ಬಿಡುಗಡೆ ಮಾಡಿದ ಸಚಿವ ಈಶ್ವರ ಖಂಡ್ರೆ!

ವಿಜ್ಞಾನ-ತಂತ್ರಜ್ಞಾನ ಕ್ಷೇತ್ರ: ಮಹಿಳೆಯರದ್ದು ಪ್ರಧಾನ ಪಾತ್ರ; ಕೇವಲ ಪಾಲ್ಗೊಳ್ಳುವುದಲ್ಲ, ನಾಯಕತ್ವಕ್ಕೂ ಬೇಕು ನಾರಿ ಶಕ್ತಿ

ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ: ಏಪ್ರಿಲ್ 18 ರಂದು ವಿಶೇಷ ಕಾರ್ಯಕ್ರಮ!

SCROLL FOR NEXT