ರಾಜ್ಯ

ಮಂಗಳವಾರ ಅಶುಭ: ಎಚ್‌ಡಿ ಕುಮಾರಸ್ವಾಮಿ ಸೇರಿ 9 ನೂತನ ಶಾಸಕರು ಪ್ರಮಾಣ ವಚನ ಸ್ವೀಕಾರಕ್ಕೆ ಗೈರು

Ramyashree GN

ಬೆಂಗಳೂರು: ಮೇ 22ರಿಂದ ಆರಂಭವಾದ ನೂತನ ಸರ್ಕಾರದ ಮೂರು ದಿನಗಳ ಮೊದಲ ವಿಧಾನಸಭೆ ಅಧಿವೇಶನ ನಡೆಯುತ್ತಿದ್ದು, ನೂತನ ಶಾಸಕರು, ಸಚಿವರು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಆದರೆ, ಮಂಗಳವಾರ ಅಶುಭ ಎಂದು ಪರಿಗಣಿಸಿದ ಒಂಬತ್ತು ಶಾಸಕರು ಮಂಗಳವಾರ ಪ್ರಮಾಣ ವಚನ ಸ್ವೀಕಾರದ ಕಲಾಪಕ್ಕೆ ಗೈರಾಗಿದ್ದರು. 

ಹೀಗೆ ಗೈರಾದ ಶಾಸಕರಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ಎಚ್‌ಡಿ ರೇವಣ್ಣ ಸೇರಿದಂತೆ ಜೆಡಿಎಸ್‌ನ ಕೆಲವು ಶಾಸಕರು ಸೇರಿದ್ದಾರೆ. ಆದರೆ, ಕಾಂಗ್ರೆಸ್‌ನ ಮಧು ಬಂಗಾರಪ್ಪ, ಪ್ರಿಯಾ ಕೃಷ್ಣ ಸೇರಿದಂತೆ ಏಳು ಶಾಸಕರು ಸ್ಪೀಕರ್ ಕಚೇರಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಬುಧವಾರ ನಡೆಯಲಿರುವ ಸ್ಪೀಕರ್ ಚುನಾವಣೆಯಲ್ಲಿ ಪ್ರಮಾಣ ವಚನ ಸ್ವೀಕರಿಸದ ಶಾಸಕರಿಗೆ ಮತದಾನ ಮಾಡಲು ಅವಕಾಶವಿಲ್ಲ.

ಇದೇ ವೇಳೆ ಶಿಕಾರಿಪುರ ಕ್ಷೇತ್ರದಿಂದ ಪ್ರಥಮ ಬಾರಿಗೆ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರು ಕ್ಷೇತ್ರದ ಆರಾಧ್ಯ ದೈವ ಹುಚ್ಚುರಾಯ ಸ್ವಾಮಿ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಬಿಜೆಪಿಯ ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರು ಗೋಮಾತೆ ಹಾಗೂ ವಿಬುಧೇಶ ತೀರ್ಥ ಸ್ವಾಮೀಜಿ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

16ನೇ ವಿಧಾನಸಭೆ ಅಧಿವೇಶನದ ಎರಡನೇ ದಿನ 43 ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು.

SCROLL FOR NEXT