ಯುಟಿ ಖಾದರ್. 
ರಾಜ್ಯ

ವಿಧಾನಸಭೆ ನೂತನ ಸ್ಪೀಕರ್ ಆಗಿ ಸರ್ವಾನುಮತದಿಂದ ಯುಟಿ ಖಾದರ್ ಆಯ್ಕೆ

ವಿಧಾನಸಭೆ ನೂತನ ಸ್ವೀಕರ್ ಆಗಿ ಯುಟಿ ಖಾದರ್ ಅವರು ಸರ್ವಾನುಮತದಿಂದ ಬುಧವಾರ ಆಯ್ಕೆಯಾಗಿದ್ದಾರೆ.

ಬೆಂಗಳೂರು: ವಿಧಾನಸಭೆ ನೂತನ ಸ್ವೀಕರ್ ಆಗಿ ಯುಟಿ ಖಾದರ್ ಅವರು ಸರ್ವಾನುಮತದಿಂದ ಬುಧವಾರ ಆಯ್ಕೆಯಾಗಿದ್ದಾರೆ.

ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯು.ಟಿ. ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸ್ತಾಪಿಸಿದರು.

ಮುಖ್ಯಮಂಚ್ಕಿದಶ ಪ್ರಸ್ತಾವವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅನುಮೋದಿಸಿದರು. ಬಿಜೆಪಿ, ಜೆಡಿಎಸ್ ಅಭ್ಯರ್ಥಿ ಹಾಕದ ಹಿನ್ನೆಲೆಯಲ್ಲಿ 23ನೇ ಸ್ಪೀಕರ್‌ ಆಗಿ ಖಾದರ್‌ ಅವರನ್ನು ಅವಿರೋಧವಾಗಿ ಘೋಷಣೆ ಮಾಡಲಾಯಿತು.

ನೂತನ ಸಭಾಧ್ಯಕ್ಷರ ಹೆಸರನ್ನು ಹಂಗಾಮಿ ಸ್ಪೀಕರ್ ದೇಶಪಾಂಡೆ ಘೋಷಣೆ ಮಾಡಿದ ಕೂಡಲೆ ಸಭಾಧ್ಯಕ್ಷ ಕುರ್ಚಿಯತ್ತ ಸಾಗಿ ಆಸೀನರಾದರು.ನಂತರ ಸಿಎಂ ಸಿದ್ದರಾಮಯ್ಯ ಅವರಿಂದ ಆರಂಭಿಸಿ ಖಾದರ್‌ ಅವರ ಕುರಿತು ಅಭಿನಂದನಾ ನುಡಿಗಳನ್ನು ನಾಯಕರು ಆಡಿದರು.

ಖಾದರ್ ಅವರಿಗೆ ಅಭಿನಂದನೆ ಸಲ್ಲಿಸಿದ ಸಿದ್ದರಾಮಯ್ಯ ಅವರು, ಅವರ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದರು. ಸ್ಪೀಕರ್​ ಯು.ಟಿ.ಖಾದರ್​ಗೆ ಅತಿ ಹೆಚ್ಚು ಪ್ರಶ್ನೆ ಕೇಳಿದ್ದಕ್ಕೆ ಸದನವೀರ ಪ್ರಶಸ್ತಿಯೂ ಸಿಕ್ಕಿತ್ತು. ವಿಪಕ್ಷ ಉಪನಾಯಕರಾಗಿಯೂ ಯು.ಟಿ.ಖಾದರ್​ ಉತ್ತಮ ಕೆಲಸ ಮಾಡಿದ್ದಾರೆ. ವಿಧಾನಸಭೆ ಪ್ರಜಾಪ್ರಭುತ್ವದ ದೇಗುಲ. ಸದನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕು. ನಾಡಿನ ಅಭಿವೃದ್ಧಿ, 7 ಕೋಟಿ ಕನ್ನಡಿಗರ ಹಿತರಕ್ಷಣೆ ಆಗಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ಪೀಕರ್ ಸ್ಥಾನ ಅತ್ಯುನ್ನತವಾದುದು. ರಾಜ್ಯದ ಜಿಡಿಪಿ ಬೆಳವಣಿಗೆ ಕೂಡ ಆಗಬೇಕು ಎಂದು ಹೇಳಿದರು.

ಬಳಿಕ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೂಡ ಅಭಿನಂದನೆ ಸಲ್ಲಿಸಿದರು. ಕರ್ನಾಟಕದ ವಿಧಾನಮಂಡಲಕ್ಕೆ ತನ್ನದೇ ಆದ ಇತಿಹಾಸವಿದೆ. ಇಡೀ ದೇಶಕ್ಕೆ ಮಾರ್ಗದರ್ಶನ ನೀಡಿದ ವಿಧಾನಮಂಡಲವಿದು. ಯು.ಟಿ.ಖಾದರ್​ ಶಾಸಕರಾಗಿ, ಸಚಿವರಾಗಿ ಕೆಲಸ ಮಾಡಿದ್ದಾರೆ. ಯು.ಟಿ.ಖಾದರ್ ವಿಪಕ್ಷ ಉಪನಾಯಕರಾಗಿಯೂ ಉತ್ತಮ ಕೆಲಸ ಮಾಡಿದ್ದಾರೆ. ಈ ಹಿಂದೆ ಸ್ಪೀಕರ್​ಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ನ್ಯಾಯಾಂಗಕ್ಕಿಂತ ಎತ್ತರವಾದದ್ದು ಸ್ಪೀಕರ್​ ಸ್ಥಾನ. ನಿಷ್ಪಕ್ಷಪಾತವಾಗಿ ತಾವು ಸದನವನ್ನು ನಡೆಸಬೇಕು. ವಿಪಕ್ಷ ಸದಸ್ಯರ ಹೇಳಿಕೆಗೆ ಸ್ಪೀಕರ್​ ಹೆಚ್ಚು ಅವಕಾಶ ಕೊಡಬೇಕು. ಚರ್ಚೆ ವೇಳೆ ಕೊನೆಯ ಸಾಲಿನವರಿಗೆ ಹೆಚ್ಚು ಅವಕಾಶ ಕೊಡಬೇಕು. ಸ್ಪೀಕರ್ ಹೊಸ ವಿಚಾರಕ್ಕೆ ಅವಕಾಶ ಮಾಡಿಕೊಡುವ ವಿಶ್ವಾಸವಿದೆ. ಎಲ್ಲರನ್ನೂ ಸಮಾನವಾಗಿ ತೆಗೆದುಕೊಂಡು ಹೋಗುವ ಶಕ್ತಿ ನಿಮ್ಮಲ್ಲಿದೆ ಎಂದು ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಿಂದ ಸಭಾಧ್ಯಕ್ಷರಾದ ಎರಡನೇ ಜನಪ್ರತಿನಿಧಿ ಖಾದರ್‌ ಆಗಿದ್ದಾರೆ. ಇದರಂತೆ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದಿಂದ ಈ ಹುದ್ದೆಗೆ ಏರಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಈ ಹಿಂದೆ ಬೆಳ್ತಂಗಡಿ ಕ್ಷೇತ್ರದಿಂದ ಆಯ್ಕೆಯಾಗಿದ್ದ ಬಿ. ವೈಕುಂಠ ಬಾಳಿಗಾ ಎರಡು ಬಾರಿ (1962, 1967) ಸಭಾಧ್ಯಕ್ಷರಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT